Homeಮುಖಪುಟ'ಸಿದ್ಧಾರ್ಥ ವಿಹಾರ ಟ್ರಸ್ಟ್‌'ಗೆ ಸರ್ಕಾರ ಮಂಜೂರು ಮಾಡಿದ್ದ ಭೂಮಿ ವಾಪಸ್ ನೀಡಿದ ಮಲ್ಲಿಕಾರ್ಜುನ ಖರ್ಗೆ

‘ಸಿದ್ಧಾರ್ಥ ವಿಹಾರ ಟ್ರಸ್ಟ್‌’ಗೆ ಸರ್ಕಾರ ಮಂಜೂರು ಮಾಡಿದ್ದ ಭೂಮಿ ವಾಪಸ್ ನೀಡಿದ ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಸೈಟ್ ಹಗರಣದ ತನಿಖೆ ನಡೆಯುತ್ತಿರುವ ಮಧ್ಯೆಯೇ ಖರ್ಗೆ ಕುಟುಂಬದ ಒಡೆತನದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಮಂಜೂರಾದ ಐದು ಎಕರೆ ಭೂಮಿಯನ್ನು ಹಿಂದಿರುಗಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬ ನಿರ್ಧರಿಸಿದೆ.

ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಯಿಂದ ಬಾಗಲೂರಿನ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್‌ನ ಹಾರ್ಡ್‌ವೇರ್ ಸೆಕ್ಟರ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಎಂ ಖರ್ಗೆ ಅವರಿಗೆ ಭೂಮಿ ಮಂಜೂರು ಮಾಡಲಾಗಿತ್ತು.

ಪ್ರತಿಪಕ್ಷಗಳಿಂದ ಟೀಕೆಗೆ ಗುರಿಯಾಗಿದ್ದ ವಿವಾದಾತ್ಮಕ ಮುಡಾ ಭೂ ಮಂಜೂರಾತಿಯನ್ನು ಹಿಂದಿರುಗಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿರ್ಧಾರವನ್ನು ಅನುಸರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ.

ಮಾರ್ಚ್ 2024 ರಲ್ಲಿ ಕಾಂಗ್ರೆಸ್ ಸರ್ಕಾರವು ರಾಹುಲ್ ಖರ್ಗೆ ನೇತೃತ್ವದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಭೂಮಿ ನೀಡಿದಾಗ ವಿವಾದ ಪ್ರಾರಂಭವಾಯಿತು. ಈ ಹಂಚಿಕೆಯನ್ನು ಬಿಜೆಪಿ ವಿರೋಧಿಸಿತ್ತು. ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು, ಸರ್ಕಾರದಿಂದ ‘ಅಧಿಕಾರದ ದುರುಪಯೋಗ ಮತ್ತು ಸ್ವಜನಪಕ್ಷಪಾತ’ ಎಂದು ಆರೋಪಿಸಿದರು.

ಐದು ಎಕರೆ ಜಮೀನನ್ನು ಸಿದ್ಧಾರ್ಥ ವಿಹಾರ್ ಟ್ರಸ್ಟ್‌ಗೆ ಪರಿಶಿಷ್ಟ ಜಾತಿ (ಎಸ್‌ಸಿ) ಕೋಟಾದಡಿ ಹಂಚಿಕೆ ಮಾಡಲಾಗಿದೆ. ಟ್ರಸ್ಟ್‌ನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಅವರ ಅಳಿಯ ಹಾಗೂ ಕಲಬುರಗಿ ಸಂಸದ ರಾಧಾಕೃಷ್ಣ ಮತ್ತು ಮಗ ರಾಹುಲ್ ಖರ್ಗೆ ಅವರಂತಹ ಹಲವಾರು ಖರ್ಗೆ ಕುಟುಂಬದ ಸದಸ್ಯರು ಟ್ರಸ್ಟಿಗಳಾಗಿದ್ದಾರೆ.

ಈ ಸೈಟ್ ಕೆಐಎಡಿಬಿಯಿಂದ ಹೈಟೆಕ್ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್‌ಗಾಗಿ ಮೀಸಲಿಟ್ಟ 45.94 ಎಕರೆ ಪ್ರದೇಶದ ದೊಡ್ಡ ಭಾಗವಾಗಿದೆ.

ಹಂಚಿಕೆ ಪ್ರಕ್ರಿಯೆಯಲ್ಲಿ ಅವ್ಯವಹಾರ ಮತ್ತು ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಔಪಚಾರಿಕ ದೂರು ಸಲ್ಲಿಸಿದರು. ಕಲ್ಲಹಳ್ಳಿ ಅವರು ಕರ್ನಾಟಕ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯ ಲೋಕಾಯುಕ್ತಕ್ಕೆ ದೂರು ಸಲ್ಲಿಸಲು ಕಾನೂನು ಕ್ರಮ ಕೈಗೊಳ್ಳಲು ಅನುಮತಿ ಕೋರಿದರು.

ಆರೋಪಗಳನ್ನು ತಳ್ಳಿಹಾಕಿರುವ ಸಚಿವ ಪಾಟೀಲ್, ರಾಹುಲ್ ಖರ್ಗೆ ಅವರು ಅರ್ಹ ಅರ್ಜಿದಾರರಾಗಿದ್ದು, ಪಾರದರ್ಶಕ, ಏಕಗವಾಕ್ಷಿ ಅನುಮೋದನೆ ಪ್ರಕ್ರಿಯೆಯ ಮೂಲಕ ಅರ್ಹತೆಯ ಆಧಾರದ ಮೇಲೆ ಸೈಟ್ ಮಂಜೂರು ಮಾಡಲಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ; ಬಿಜೆಪಿ ಭಯೋತ್ಪಾದಕ ಪಕ್ಷ; ದಲಿತರ ಮೇಲಿನ ದಾಳಿಗೆ ಬೆಂಬಲಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...