Homeಮುಖಪುಟಬಾಬಾ ಸಿದ್ದಿಕ್ ಹತ್ಯೆ ಪ್ರಕರಣ: ಮೂಳೆ ಪರೀಕ್ಷೆಯಲ್ಲಿ ಆರೋಪಿಯು ಅಪ್ರಾಪ್ತನಲ್ಲ ಎಂದು ಸಾಬೀತು

ಬಾಬಾ ಸಿದ್ದಿಕ್ ಹತ್ಯೆ ಪ್ರಕರಣ: ಮೂಳೆ ಪರೀಕ್ಷೆಯಲ್ಲಿ ಆರೋಪಿಯು ಅಪ್ರಾಪ್ತನಲ್ಲ ಎಂದು ಸಾಬೀತು

- Advertisement -
- Advertisement -

ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ಆರೋಪಿ ಧರ್ಮರಾಜ್ ಕಶ್ಯಪ್‌ನ ‘ಆಸಿಫಿಕೇಶನ್’ ಪರೀಕ್ಷೆಯನ್ನು ನಡೆಸಿದ್ದು, ಇದರಲ್ಲಿ ಅವನು ಅಪ್ರಾಪ್ತನಲ್ಲ ಎಂದು ಸಾಬೀತಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಎನ್‌ಡಿಟಿವಿ’ ವರದಿ ಮಾಡಿದೆ.

ಬಾಂದ್ರಾ ಉಪನಗರದಲ್ಲಿ ಶನಿವಾರ ಮೂವರು ದುಷ್ಕರ್ಮಿಗಳು ಬಾಬಾ ಸಿದ್ದಿಕಿ ಅವರನ್ನು ಗುಂಡಿಕ್ಕಿ ಕೊಂದಿದ್ದರು.

ಮುಂಬೈ ಪೊಲೀಸರು ಹರಿಯಾಣದ ನಿವಾಸಿ ಗುರ್ಮೈಲ್ ಬಲ್ಜಿತ್ ಸಿಂಗ್ (23) ಮತ್ತು ಉತ್ತರ ಪ್ರದೇಶದ ಧರ್ಮರಾಜ್ ರಾಜೇಶ್ ಕಶ್ಯಪ್ (19) ಅವರನ್ನು ಬಂಧಿಸಿದ್ದರು. ಆದರೆ, ಗುಂಡಿನ ದಾಳಿ ಸಮಯದಲ್ಲಿ ಸ್ಥಳದಲ್ಲಿದ್ದ ಒಬ್ಬ ಸಹಾಯಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಆರೋಪಿಗಳನ್ನು ಅಪರಾಧ ವಿಭಾಗದ ತಂಡವು ನ್ಯಾಯಾಲಯಕ್ಕೆ ಹಾಜರುಪಡಿಸಿತು, ಅಲ್ಲಿ ಧರ್ಮರಾಜ್ ಕಶ್ಯಪ್ ಅವರ ವಕೀಲರು ಅವರು ಅಪ್ರಾಪ್ತ ಎಂದು ಹೇಳಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನ್ಯಾಯಾಲಯವು ಭಾನುವಾರ ಕಶ್ಯಪ್ ಅವರ ಆಸಿಫಿಕೇಶನ್ ಪರೀಕ್ಷೆಗೆ ಆದೇಶಿಸಿದೆ. ಇದರಲ್ಲಿ ಆತ ಅಪ್ರಾಪ್ತನಲ್ಲ ಎಂದು ಸಾಬೀತಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅಕ್ಟೋಬರ್ 21ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಅವರು ಹೇಳಿದರು.

ತಡರಾತ್ರಿಯ ಬೆಳವಣಿಗೆಯಲ್ಲಿ, ಮುಂಬೈ ಪೊಲೀಸರ ಅಪರಾಧ ವಿಭಾಗವು ಪುಣೆಯ 28 ವರ್ಷದ ಪ್ರವೀಣ್ ಲೋಂಕರ್‌ನನ್ನು ಬಂಧಿಸಿತು. ಈತ ನಿರ್ಮಲ್ ನಗರ ಫೈರಿಂಗ್ ಪ್ರಕರಣದಲ್ಲಿ ಭಾಗಿಯಾಗಿರುವ ಶುಭಂ ಲೋಂಕರ್ ಸಹೋದರನಾಗಿದ್ದಾನೆ.

ಸಹೋದರರು ಸಿದ್ದಿಕಿಯನ್ನು ಕೊಲ್ಲುವ ಸಂಚು ರೂಪಿಸಿದ್ದರು. ಕಶ್ಯಪ್ ಮತ್ತು ಶಿವಕುಮಾರ್ ಗೌತಮ್ ಅವರನ್ನು ಸಂಚು ರೂಪಿಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ; ಬಾಬಾ ಸಿದ್ದಿಕ್ ಹತ್ಯೆ | ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಕೈವಾಡ ಖಚಿತಪಡಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...