Homeಮುಖಪುಟಮಣಿಪುರದ ಸುದೀರ್ಘ ಹಿಂಸಾಚಾರದ ಬಳಿಕ ಇಂದು ಕುಕಿ, ಮೈತೇಯಿ, ನಾಗಾ ಶಾಸಕರ ಮೊದಲ ಸಭೆ

ಮಣಿಪುರದ ಸುದೀರ್ಘ ಹಿಂಸಾಚಾರದ ಬಳಿಕ ಇಂದು ಕುಕಿ, ಮೈತೇಯಿ, ನಾಗಾ ಶಾಸಕರ ಮೊದಲ ಸಭೆ

- Advertisement -
- Advertisement -

ಕಳೆದ ವರ್ಷ ಜನಾಂಗೀಯ ಹಿಂಸಾಚಾರ ಸ್ಫೋಟಗೊಂಡ ನಂತರ ಮಣಿಪುರದ ಮೈತೇಯಿ, ಕುಕಿ ಮತ್ತು ನಾಗಾ ಸಮುದಾಯದ ಶಾಸಕರು ತಮ್ಮ ಮೊದಲ ಜಂಟಿ ಸಭೆಗಾಗಿ ಮಂಗಳವಾರ ದೆಹಲಿಯಲ್ಲಿ ಕುಳಿತುಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರ ಆಯೋಜಿಸಿರುವ ಸಭೆ ಇಂದು ನಡೆಯಲಿದೆ.

ಸರ್ಕಾರದ ಈ ಉಪಕ್ರಮವನ್ನು ಸ್ವಾಗತಿಸುತ್ತೇನೆ, ಸಭೆಗೆ ಹಾಜರಾಗಲು ಎದುರು ನೋಡುತ್ತಿದ್ದೇನೆ ಎಂದು ಮೈತೇಯಿ ಶಾಸಕರೊಬ್ಬರು ಹೇಳಿದರು. “ಶಾಂತಿ ಉಪಕ್ರಮದ ಭಾಗವಾಗಿ ಒಟ್ಟಿಗೆ ಕುಳಿತುಕೊಳ್ಳಲು ನಮ್ಮನ್ನು ಕೇಳಲಾಯಿತು. ಮೈತೇಯಿ, ಕುಕಿ ಮತ್ತು ನಾಗಾ ಸಮುದಾಯಗಳ ಶಾಸಕರು ಇರುತ್ತಾರೆ ಮತ್ತು ರಾಜ್ಯದ ವಿವಿಧ ಪ್ರದೇಶಗಳು ಉತ್ತಮವಾಗಿ ಪ್ರತಿನಿಧಿಸಲ್ಪಡುತ್ತವೆ” ಎಂದು ಅವರು ಹೇಳಿದರು.

ಕೆಲವು ಮೈತೇಯಿ ಮತ್ತು ನಾಗಾ ಸಚಿವರು, ಶಾಸಕರು ಸೋಮವಾರ ಇಂಫಾಲ್‌ನಿಂದ ದೆಹಲಿಗೆ ಹಾರಿದರು. ಮಣಿಪುರದ ಎಲ್ಲ 10 ಜನ ಕುಕಿ-ಜೋ ಶಾಸಕರನ್ನು ಸಭೆಗೆ ಆಹ್ವಾನಿಸಲಾಗಿದೆ ಎಂದು ಕುಕಿ-ಝೋ ಸಚಿವ ಲೆಟ್ಪಾವೊ ಹಾಕಿಪ್ ಹೇಳಿದ್ದಾರೆ. “ಕೆಲವರು ಖಂಡಿತವಾಗಿಯೂ ಹಾಜರಾಗುತ್ತಾರೆ. ಆದರೆ, ಎಷ್ಟು ಮಂದಿ ಎಂದು ಖಚಿತವಾಗಿಲ್ಲ” ಎಂದು ಅವರು ಹೇಳಿದರು. ದೆಹಲಿಯಲ್ಲಿ ಬೀಡುಬಿಟ್ಟಿರುವ ಶಾಸಕರೊಬ್ಬರು 18 ಮಂದಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ. ಎಂಟು ಜನ ಮೈತೇಯಿ ಶಾಸಕರು, ಕುಕಿ ಮತ್ತು ನಾಗಾ ಸಮುದಾಯದಿಂದ ತಲಾ ಐವರು ಭಾಗವಹಿಸಲಿದ್ದಾರೆ ಎಂದರು.

ಈ ಮಾತುಕತೆಯು ಕಾದಾಡುತ್ತಿರುವ ಸಮುದಾಯಗಳ ನಡುವೆ ಸಂವಾದವನ್ನು ಸುಲಭಗೊಳಿಸುವ ಕೇಂದ್ರದ ಪ್ರಯತ್ನಗಳ ಭಾಗವಾಗಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದ ವರ್ಷ ಮೇ ತಿಂಗಳಲ್ಲಿ ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದಿಂದ ಕನಿಷ್ಠ 250 ಜನರು ಸಾವನ್ನಪ್ಪಿದ್ದಾರೆ. 60,000 ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

ಸಭೆಯಲ್ಲಿ ಭಾಗವಹಿಸುತ್ತಿರುವ ನಾಗಾ ಸಚಿವ ಅವಾಂಗ್‌ಬೋ ನ್ಯೂಮೈ ಮಾತನಾಡಿ, “ಈಗಿನಂತೆ ಸಭೆಯ ನಿಖರವಾದ ಕಾರ್ಯಸೂಚಿ ನನಗೆ ತಿಳಿದಿಲ್ಲ” ಎಂದು ಹೇಳಿದರು. ನಾಗಾ ಶಾಸಕ ಎಲ್ ಡಿಖೋ, “ನಾನು ಅಭೆಯಲ್ಲಿ ಭಾಗವಹಿಸುತ್ತೇನೆ,ನಾವು ಹೇಗೆ ಉಪಕ್ರಮವನ್ನು ತೆಗೆದುಕೊಳ್ಳಬಹುದು ಎಂಬುದನ್ನು ನೋಡುತ್ತೇನೆ” ಎಂದು ಹೇಳಿದರು.

ಗೃಹ ಸಚಿವ ಅಮಿತ್ ಶಾ ಭಾಗವಹಿಸುವ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಸೋಮವಾರ ತಿಳಿಸಿದೆ.

ಇದನ್ನೂ ಓದಿ; ವಕ್ಫ್ ಮಸೂದೆ | ಸದನ ಸಮಿತಿ ಸಭೆಯಿಂದ ಹೊರ ನಡೆದ ಪ್ರತಿಪಕ್ಷ ಸಂಸದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...