Homeಮುಖಪುಟಚೆನ್ನೈ ಮಳೆ: ಪ್ರವಾಹಕ್ಕೆ ಹೆದರಿ ಫ್ಲೈಓವರ್‌ಗಳ ಮೇಲೆ ಕಾರು ಪಾರ್ಕ್‌ ಮಾಡುತ್ತಿರುವ ಮಾಲೀಕರು

ಚೆನ್ನೈ ಮಳೆ: ಪ್ರವಾಹಕ್ಕೆ ಹೆದರಿ ಫ್ಲೈಓವರ್‌ಗಳ ಮೇಲೆ ಕಾರು ಪಾರ್ಕ್‌ ಮಾಡುತ್ತಿರುವ ಮಾಲೀಕರು

- Advertisement -
- Advertisement -

ಭಾರೀ ಮಳೆಯ ನಡುವೆ, ಅನೇಕ ಚೆನ್ನೈ ನಿವಾಸಿಗಳು ಪ್ರವಾಹದಿಂದ ಹಾನಿಯಾಗದಂತೆ ತಡೆಯಲು ಫ್ಲೈಓವರ್‌ಗಳ ಮೇಲೆ ತಮ್ಮ ವಾಹನಗಳನ್ನು ನಿಲ್ಲಿಸಲು ಪ್ರಾರಂಭಿಸಿದ್ದಾರೆ. ನಗರವು ಪದೇಪದೆ ಪ್ರವಾಹವನ್ನು ಎದುರಿಸುತ್ತಿದ್ದು, ವಾಹನಗಳು ಮತ್ತು ಆಸ್ತಿಯ ಮೇಲೆ ಪರಿಣಾಮ ಬೀರುವ ಕಾರಣ, ಮುಳುಗಿದ ಕಾರುಗಳಿಂದ ಉಂಟಾಗುವ ದುಬಾರಿ ರಿಪೇರಿ ಮತ್ತು ಆರ್ಥಿಕ ನಷ್ಟವನ್ನು ತಪ್ಪಿಸಲು ನಿವಾಸಿಗಳು ಈ ಮುನ್ನೆಚ್ಚರಿಕೆ ವಹಿಸಿದ್ದಾರೆ.

ಅಕ್ಟೋಬರ್ 14 ರಿಂದ ಅಕ್ಟೋಬರ್ 17 ರವರೆಗೆ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವಂತೆ ತಮಿಳುನಾಡು ಸಿಎಂ ಐಟಿ ಕಂಪನಿಗಳಿಗೆ ಸೂಚನೆ ನೀಡಿದ್ದು, ನಾಲ್ಕು ಜಿಲ್ಲೆಗಳಲ್ಲಿ ಮಂಗಳವಾರ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆಯ ಸಂದರ್ಭದಲ್ಲಿ ಸಾಕಷ್ಟು ಆಹಾರ ಸರಬರಾಜು ಮಾಡುವಂತೆ ಆಹಾರ ಇಲಾಖೆಗೆ ಸೂಚಿಸಲಾಗಿದೆ. ಆವಿನ್ ಹಾಲು ಸಮರ್ಪಕವಾಗಿ ಹಾಲು ಪೂರೈಕೆಯಾಗುವಂತೆ ನೋಡಿಕೊಳ್ಳಲು ಕೋರಲಾಗಿದೆ.

ಸಿದ್ಧತೆಗಳನ್ನು ಮೇಲ್ವಿಚಾರಣೆ ಮಾಡಲು ಹಾಗೂ ಮುನ್ನೆಚ್ಚರಿಕೆ ಕ್ರಮಗಳು, ರಕ್ಷಣಾ ಕ್ರಮಗಳೊಂದಿಗೆ ಸನ್ನದ್ಧರಾಗಿರುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ತುರ್ತು ಸಂದರ್ಭಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ಟಿಎನ್‌ಡಿಆರ್‌ಎಫ್ ಸನ್ನದ್ಧ ಸ್ಥಿತಿಯಲ್ಲಿದೆ. ತಮಿಳುನಾಡು ವಿದ್ಯುಚ್ಛಕ್ತಿ ಮಂಡಳಿಗೆ ಹೆಚ್ಚುವರಿ ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ತಂತಿಗಳು ತುಂಡಾದರೆ ತಕ್ಷಣ ಸರಿಪಡಿಸಲು ಸೂಚನೆ ನೀಡಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಉದಯನಿತಿ ಸ್ಟಾಲಿನ್, “ಈಶಾನ್ಯ ಮಾನ್ಸೂನ್‌ಗಾಗಿ ನಾವು ಎಲ್ಲಾ ರೀತಿಯಲ್ಲಿ ಸನ್ನದ್ಧರಾಗಿದ್ದೇವೆ. ಇಂದು ಬೆಳಗ್ಗೆಯೂ ಸಿಎಂ ಎಲ್ಲ ಉನ್ನತ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಕಾದು ನೋಡೋಣ.. ಇದು ಸಹಜ ಸಂಗತಿ. ಅದು ನಮ್ಮ ಕೈಯಲ್ಲಿಲ್ಲ. ಐಎಂಡಿ ಏನು ಹೇಳಿದ್ದರೂ, ನಾವು ಅದಕ್ಕೆ ಎಲ್ಲ ರೀತಿಯಲ್ಲಿ ಸಿದ್ಧರಾಗಿದ್ದೇವೆ” ಎಂದರು.

ಚೆನ್ನೈ ಕಾರ್ಪೊರೇಷನ್ ಮೇಯರ್ ಪ್ರಿಯಾ ರಾಜನ್ ಮಾತನಾಡಿ, “ನಾವು ಉತ್ತಮವಾಗಿ ಸಿದ್ಧರಾಗಿದ್ದೇವೆ. ಸಿಎಂ ಮತ್ತು ಡಿಸಿಎಂ ಪರಿಶೀಲನಾ ಸಭೆ ನಡೆಸಿದ್ದಾರೆ. ಎಲ್ಲವೂ ನಿಯಂತ್ರಣದಲ್ಲಿದೆ. ಕಳೆದ ವರ್ಷ ಹೆಚ್ಚಾಗಿ ಹಾನಿಗೊಳಗಾದ ತಗ್ಗು ಪ್ರದೇಶಗಳ ಮೇಲೆ ನಾವು ಗಮನಹರಿಸಿದ್ದೇವೆ. ಗ್ರೇಟರ್ ಚೆನ್ನೈ ಕಾರ್ಪೊರೇಷನ್ ನೀರು ತಕ್ಷಣವೇ ಬರಿದಾಗುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಜಲಾವೃತವಾಗುವುದನ್ನು ತಪ್ಪಿಸಲು 900 ಕ್ಕೂ ಹೆಚ್ಚು ಪಂಪ್‌ಗಳು, 57 ಮೋಟಾರ್‌ಗಳನ್ನು ನಗರ ಮಿತಿಯ ಸುತ್ತಲೂ ಇರಿಸಲಾಗಿದೆ” ಎಂದು ಹೇಳಿದರು.

“ನಗರದಾದ್ಯಂತ ಮಳೆನೀರು ಚರಂಡಿಗಳನ್ನು ನಿರ್ಮಿಸಲಾಗಿದೆ” ಎಂದು ಅವರು ಹೇಳಿದರು. “ಈ ವರ್ಷ ಜೂನ್‌ನಿಂದಲೇ ಹೂಳು ತೆಗೆಯುವ ಕಾಮಗಾರಿ ಆರಂಭಿಸಿದ್ದೇವೆ. ಚೆನ್ನೈನಲ್ಲಿ ನಮಗೆ 33 ಕಾಲುವೆಗಳಿವೆ. ಡಬ್ಲ್ಯುಆರ್‌ಡಿ ಎಲ್ಲದರಲ್ಲೂ ಡಿಸಿಲ್ಟಿಂಗ್ ಮಾಡಿದೆ. ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡುತ್ತಿವೆ. ಸಾರ್ವಜನಿಕರಲ್ಲಿ ಭಯವಿದೆ. ಆದರೆ, ಸರ್ಕಾರದ ಕಡೆಯಿಂದ ನಾವು ಅವರನ್ನು ಸುರಕ್ಷಿತವಾಗಿರಿಸಲು ಮತ್ತು ಅವರಿಗೆ ಮೂಲಭೂತ ಅವಶ್ಯಕತೆಗಳನ್ನು ಒದಗಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ” ಎಂದು ಪ್ರಿಯಾ ರಾಜನ್ ಹೇಳಿದರು.

ಇದನ್ನೂ ಓದಿ; ಮಣಿಪುರದ ಸುದೀರ್ಘ ಹಿಂಸಾಚಾರದ ಬಳಿಕ ಇಂದು ಕುಕಿ, ಮೈತೇಯಿ, ನಾಗಾ ಶಾಸಕರ ಮೊದಲ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...