Homeಕರ್ನಾಟಕರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆ

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆ

- Advertisement -
- Advertisement -

ರಾಜ್ಯದ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಇಂದು (ಅ.15) ಘೋಷಣೆ ಮಾಡಿದೆ.

ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ನವೆಂಬರ್ 13ರಂದು ಮತದಾನ ನಡೆಯಲಿದ್ದು, 23ರಂದು ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಅಕ್ಟೋಬರ್ 18ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದ್ದು, ಅ. 25 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅ. 28ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅ.30ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.

ಚನ್ನಪಟ್ಟಣದ ಶಾಸಕರಾಗಿದ್ದ ಹೆಚ್.ಡಿ ಕುಮಾರಸ್ವಾಮಿ, ಶಿಗ್ಗಾಂವಿಯ ಬಸವರಾಜ ಬೊಮ್ಮಾಯಿ ಮತ್ತು ಸಂಡೂರಿನ ಶಾಸಕ ಇ.ತುಕರಾಂ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಕಾರಣ, ಅವರಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.

ಇದನ್ನೂ ಓದಿ : ವಾಲ್ಮೀಕಿ ನಿಗಮ ಅಕ್ರಮ ಪ್ರಕರಣ : ಶಾಸಕ ಬಿ.ನಾಗೇಂದ್ರಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...