ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಯಿಂದ ನಗರದ ಕೆಲವು ಭಾಗಗಳು ಜಲಾವೃತಗೊಂಡಿದ್ದು, ರಾಜ್ಯ ಸರ್ಕಾರವು ರಾಜಧಾನಿಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಿದೆ. ಜಿಲ್ಲಾಧಿಕಾರಿ ಜಗದೀಶ ಅವರು ಮಂಗಳವಾರ ಸಂಜೆ ಆದೇಶ ಹೊರಡಿಸಿದ್ದು, ನಗರದಲ್ಲಿ ಮುಂದಿನ ಕೆಲವು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಬೆಂಗಳೂರು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಭಾರತೀಯ ಹವಾಮಾನ ಇಲಾಖೆಯು (IMD) ಬೆಂಗಳೂರಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ನಾಳೆಯಿಂದ ನಗರದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ದಸರಾ ರಜೆಯ ನಂತರ ಶಾಲೆಗಳು ಈಗಷ್ಟೇ ಪುನರಾರಂಭಗೊಂಡಿದ್ದವು. ಮಳೆಯ ಕಾರಣಕ್ಕೆ ಕೆಲವು ಶಾಲೆಗಳ ಶಿಕ್ಷಕರಿಗೆ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ನಡೆಸಲು ತಿಳಿಸಲಾಗಿದೆ ಎಂದು ವರದಿಯಾಗಿದೆ. ಈ ನಡುವೆ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಗುರುವಾರ ಸಾರ್ವಜನಿಕ ರಜೆ ಇದೆ.
ಬೆಂಗಳೂರಿನಲ್ಲಿ ಬಿರುಸಾದ ಮಳೆ ಸುರಿಯುತ್ತಿರುವುದರಿಂದ ಯಾವುದೇ ಸಮಯದಲ್ಲಿ ನಿವಾಸಿಗಳಿಗೆ ಸಹಾಯ ಮಾಡಲು ಪ್ರವಾಹ ನಿರ್ವಹಣಾ ತಂಡವು ತಯಾರಾಗಿದೆ ಎಂದು ಬಿಬಿಎಂಪಿ ಮಂಗಳವಾರ ಪ್ರಕಟಿಸಿದೆ. “ಬಿಬಿಎಂಪಿಯ ಪ್ರವಾಹ ನಿರ್ವಹಣಾ ವ್ಯವಸ್ಥೆಗಳು ಜಾರಿಯಲ್ಲಿದ್ದು, ಮತ್ತು ಕಾರ್ಯನಿರ್ವಹಿಸುತ್ತಿವೆ. ಮಳೆ ಸುರಿದು ಸಮಸ್ಯೆಗಳಾದ ಪ್ರದೇಶಗಳಲ್ಲಿ ನಾವು ಸಕ್ರಿಯವಾಗಿ ಕಾರ್ಯಾಚರಣೆ ನಡೆಸಿ ಸಮಸ್ಯೆ ಪರಿಹರಿಸುತ್ತಿದ್ದೇವೆ” ಎಂದು ಹೇಳಿದೆ.
ಬೆಂಗಳೂರಿನ ಯಲಹಂಕ ವಲಯದಲ್ಲಿ ಮಂಗಳವಾರ ಭಾರಿ ಮಳೆಯಾಗಿದೆ. ಚೌಡೇಶ್ವರಿ ನಗರದಲ್ಲಿ 73.5 ಮಿ.ಮೀ ಮಳೆಯಾಗಿದ್ದು, ಇದು ನಗರದಲ್ಲಿ ಸುರಿದ ಅತಿ ಹೆಚ್ಚು ಮಳೆಯಾಗಿದೆ. ಜಕ್ಕೂರು ವಲಯದಲ್ಲೂ 65.5 ಮಿ.ಮೀ ಮಳೆ ದಾಖಲಾಗಿದೆ ಎಂದು ವರದಿಗಳು ಹೇಳಿವೆ. ಬೆಂಗಳೂರು


