Homeಕರ್ನಾಟಕಮಸೀದಿ ಬಳಿ 'ಜೈ ಶ್ರೀರಾಮ್' ಘೋಷಣೆ ಕೂಗುವುದರಿಂದ ಧಾರ್ಮಿಕ ಭಾವನೆಗಳಿಗೆ ಘಾಸಿಯಾಗುವುದಿಲ್ಲ: ಕರ್ನಾಟಕ ಹೈಕೋರ್ಟ್

ಮಸೀದಿ ಬಳಿ ‘ಜೈ ಶ್ರೀರಾಮ್’ ಘೋಷಣೆ ಕೂಗುವುದರಿಂದ ಧಾರ್ಮಿಕ ಭಾವನೆಗಳಿಗೆ ಘಾಸಿಯಾಗುವುದಿಲ್ಲ: ಕರ್ನಾಟಕ ಹೈಕೋರ್ಟ್

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪದ ಮೇಲೆ ಬಂಧನಕ್ಕೊಳಗಾದ ಇಬ್ಬರು ವ್ಯಕ್ತಿಗಳ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ ಎಂದು ವರದಿಯಾಗಿದೆ.

ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಎರಡನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿನ ಎಲ್ಲಾ ನ್ಯಾಯಿಕ ಪ್ರಕ್ರಿಯೆ ರದ್ದುಗೊಳಿಸುವಂತೆ ಕೋರಿ ಪುತ್ತೂರಿನ ಬಿಳಿನೆಲೆ ಗ್ರಾಮದ ಕೀರ್ತನ್ ಮತ್ತು ಮಂಗಳೂರಿನ ಕೈಕಂಬದ ಸಚಿನ್ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.

“ದೂರುದಾರರು ಖುದ್ದು ಹೇಳಿರುವಂತೆ ಆ ಭಾಗದಲ್ಲಿ ಹಿಂದೂಗಳು ಮತ್ತು ಮುಸಲ್ಮಾನರು ಒಟ್ಟಾಗಿ ಸೌರ್ಹಾದತೆಯಿಂದ ಜೀವಿಸುತ್ತಿದ್ದಾರೆ. ಆದರೆ, ಅರ್ಜಿದಾರರ ವಿರುದ್ಧ ಐಪಿಸಿ ಸೆಕ್ಷನ್ 295 ಎ ( ಧರ್ಮ, ಧಾರ್ಮಿಕ ಭಾವನೆ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವುದು) ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಜೈ ಶ್ರೀರಾಮ್ ಎಂದು ಘೋಷಣೆ ಕೂಗುವುದು ಧಾರ್ಮಿಕ ಭಾವನೆಗೆ ಹೇಗೆ ಧಕ್ಕೆಯಾಗುತ್ತದೆ ಎಂದು ಅರ್ಥವಾಗುತ್ತಿಲ್ಲ. ಜೊತೆಗೆ ಪ್ರಕರಣದಲ್ಲಿ ಯಾವುದೇ ಅಪರಾಧ ಕಂಡು ಬರುತ್ತಿಲ್ಲ. ಹೀಗಿರುವಾಗ ಅರ್ಜಿದಾರರ ವಿರುದ್ಧ ಮುಂದಿನ ಪ್ರಕ್ರಿಯೆಗಳಿಗೆ ಅನುಮತಿ ನೀಡುವುದು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗುತ್ತದೆ” ಎಂದು ಪೀಠ ಅಭಿಪ್ರಾಯಪಟ್ಟಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಮಹೇಂದ್ರ ಸಿಂಗ್ ಧೋನಿ ವರ್ಸಸ್ ಯರ್ರಗುಂಟ್ಲ ಶ್ಯಾಮಸುಂದರ್ (2017) ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿರುವ ಪೀಠವು, ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರದ ಹೋರತಾಗಿ ಯಾವುದೇ ಪ್ರಕರಣವು ಭಾರತೀಯ ದಂಡ ಸಂಹಿತೆ ಸೆಕ್ಷನ್ 295 ಎ ಅಡಿಯಲ್ಲಿ ಅಪರಾಧವಾಗುವುದಿಲ್ಲ ಎಂದು ಪ್ರಕರಣ ರದ್ದುಗೊಳಿಸಿರುವುದಾಗಿ ವರದಿ ತಿಳಿಸಿದೆ.

ಅರ್ಜಿದಾರರ ಪರ ವಕೀಲ ಬಿ ಎಸ್‌ ಸಚಿನ್‌ ಅವರು “ಅರ್ಜಿದಾರರ ವಿರುದ್ಧದ ಆರೋಪಗಳೆಲ್ಲವೂ ಸತ್ಯಕ್ಕೆ ದೂರವಾದದ್ದು, ಮಸೀದಿಯೂ ಸಾರ್ವಜನಿಕ ಸ್ಥಳವಾಗಿದ್ದು ಅದನ್ನು ಪ್ರವೇಶಿಸಿದ ಮಾತ್ರಕ್ಕೆ ಅತಿಕ್ರಮಣ ಮಾಡಿದ್ದಾರೆ ಎಂದು ಆಪಾದನೆ ಮಾಡುವುದು ಒಪ್ಪುವಂತದಲ್ಲ. ಹೀಗಾಗಿ ಪ್ರಕರಣ ರದ್ದುಗೊಳಿಸಬೇಕು” ಎಂದು ಮನವಿ ಮಾಡಿದ್ದರು.

ಸರ್ಕಾರದ ಪರ ವಾದಿಸಿದ ವಕೀಲೆ ಸೌಮ್ಯಾ ಅವರು “ಪ್ರಕರಣದಲ್ಲಿ ತನಿಖೆಯ ಅಗತ್ಯವಿದೆ. ಹಾಗಾಗಿ ಆರೋಪಿಗಳ ಮನವಿಯನ್ನು ತಿರಸ್ಕರಿಸಬೇಕು” ಎಂದು ಕೋರಿದ್ದರು.

ಪ್ರಕರಣದ ಹಿನ್ನೆಲೆ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ಧಾಳ ಬದ್ರಿಯಾ ಜುಮ್ಮಾ ಮಸೀದಿಯ ಆವರಣಕ್ಕೆ ಸೆಪ್ಟೆಂಬರ್‌ 24 ರಂದು ರಾತ್ರಿ ಸುಮಾರು 10.50 ರ ಸಮಯಕ್ಕೆ ಆರೋಪಿಗಳು ಅಕ್ರಮವಾಗಿ ಪ್ರವೇಶಿಸಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದು, ಬ್ಯಾರಿಗಳನ್ನು ಬದುಕಲು ಬಿಡುವುದಿಲ್ಲ ಎಂದು ಬೊಬ್ಬೆ ಹಾಕಿದ್ದಾರೆ ಎಂದು ಆರೋಪಿಸಿ ಮಸೀದಿ ಸಿಬ್ಬಂದಿ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ಆರೋಪಿಗಳಿಬ್ಬರ ವಿರುದ್ಧ ಸೆಕ್ಷನ್ 447 (ಕ್ರಿಮಿನಲ್ ಅತಿಕ್ರಮಣಕ್ಕೆ ಶಿಕ್ಷೆ), 505 (ಸಾರ್ವಜನಿಕ ಕಿರುಕುಳಕ್ಕೆ ಕಾರಣವಾಗುವ ಹೇಳಿಕೆಗಳು), 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ), 34 (ಸಾಮಾನ್ಯ ಉದ್ದೇಶ) ಮತ್ತು 295 ಎ ಅಡಿ ಎಫ್‌ಐಆರ್‌ ದಾಖಲಿಸಲಾಗಿತ್ತು. ಇದರ ರದ್ದು ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಸೌಜನ್ಯ : ಬಾರ್ & ಬೆಂಚ್

ಇದನ್ನೂ ಓದಿ : ಅತ್ಯಾಚಾರ ಪ್ರಕರಣ | ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...