Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ಮಹಿಳೆ ಮುಂದೆ ಶರ್ಟ್ ಬಿಚ್ಚಿದ ಮುಸ್ಲಿಂ ಯುವಕನಿಗೆ ಥಳಿತ..ವೈರಲ್ ವಿಡಿಯೋದ...

FACT CHECK : ಹಿಂದೂ ಮಹಿಳೆ ಮುಂದೆ ಶರ್ಟ್ ಬಿಚ್ಚಿದ ಮುಸ್ಲಿಂ ಯುವಕನಿಗೆ ಥಳಿತ..ವೈರಲ್ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

ಸಾರ್ವಜನಿಕ ಸ್ಥಳದಲ್ಲಿ ಹಿಂದೂ ಮಹಿಳೆ ಮುಂದೆ ಶರ್ಟ್ ಬಿಚ್ಚಿದ ಮುಸ್ಲಿಂ ಯುವಕನಿಗೆ ಥಳಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

‘ಬಾಬಾ ಬನಾರಸ್’ (@RealBababanaras) ಎಂಬ ಬಲಪಂಥೀಯ ಎಕ್ಸ್‌ ಖಾತೆಯಲ್ಲಿ ಅಕ್ಟೋಬರ್ 15ರಂದು ವಿಡಿಯೋ ಹಂಚಿಕೊಂಡು ” ಚಪ್ರಿ ಅಬ್ದುಲ್ ತನ್ನ ಶರ್ಟ್‌ ಬಿಚ್ಚಿ ಹಿಂದೂ ಮಹಿಳೆಗೆ ದೇಹ ತೋರಿಸಲು ಮುಂದಾದಾಗ, ಧೈರ್ಯಶಾಲಿ ಹಿಂದೂ ಮಹಿಳೆ ಆತನಿಗೆ ತಕ್ಷ ಶಾಸ್ತ್ರಿ ಮಾಡಿದ್ದಾರೆ. ಅಧರ್ಮವನ್ನು ವಿರೋಧಿಸಿ. ಇದು ಸರಿಯಾದ ಮಾರ್ಗವಾಗಿದೆ. ಸೆಲ್ಯೂಟ್‌” ಎಂದು ಬರೆದುಕೊಂಡಿದ್ದರು.

ನ್ಯೂಸ್ ನೇಷನ್ ಎಂಬ ಸುದ್ದಿ ವೆಬ್‌ಸೈಟ್‌ ಅಕ್ಟೋಬರ್ 15ರಂದು ವಿಡಿಯೋ ಕುರಿತು ದೊಡ್ಡ ಸುದ್ದಿಯನ್ನೇ ಮಾಡಿತ್ತು. ಆದರೆ, ಅದರಲ್ಲಿ ಹಿಂದೂ-ಮುಸ್ಲಿಂ ಎಂದು ಉಲ್ಲೇಖಿಸಿರಲಿಲ್ಲ.

ಸೆಪ್ಟೆಂಬರ್ 24ರಂದು ವಿಡಿಯೋ ಕುರಿತು ಸ್ಟೋರಿ ಹಾಕಿದ್ದ ಟಿವಿ9 ಭಾರತ್ ವರ್ಷ್ ” ಮಹಿಳೆಗೆ ದೇಹ ತೋರಿಸಲು ಮುಂದಾದ ಯುವಕನಿಗ ಥಳಿಸಲಾಗಿದೆ” ಎಂದು ವಿವರಿಸಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದೆ ಎಂದಿತ್ತು.

ಸೆಪ್ಟೆಂಬರ್ 24ರಂದು ಆಜ್‌ತಕ್ ಸುದ್ದಿ ಸಂಸ್ಥೆ ಕೂಡ ವಿಡಿಯೋ ಕುರಿತು ಸ್ಟೋರಿ ಹಾಕಿತ್ತು. ಅದರಲ್ಲೂ ವಿಡಿಯೋ ವೈರಲ್ ಆಗುತ್ತಿದೆ ಎಂದು ಹೇಳಿತ್ತು. ಅದು ಎಲ್ಲಿ ನಡೆದ ಘಟನೆಯದ್ದು ಎಂದು ಹೇಳಿರಲಿಲ್ಲ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ನಾವು ಮಾಹಿತಿ ಹುಡುಕಿದಾಗ ‘tamannakohli786787‘ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿರುವುದು ಕಂಡು ಬಂದಿದೆ.

ಇನ್‌ಸ್ಟಾಗ್ರಾಂ ಖಾತೆಯನ್ನು ನಾವು ಪರಿಶೀಲಿಸಿ ನೋಡಿದಾಗ ವೈರಲ್ ವಿಡಿಯೋ ರೀತಿಯ ಹಲವು ವಿಡಿಯೋಗಳು ಕಂಡು ಬಂದಿವೆ. ಆ ಎಲ್ಲಾ ವಿಡಿಯೋಗಳಲ್ಲಿ ವೈರಲ್ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಮೂವರು ಇರುವುದನ್ನು ಕಾಣಬಹುದು. ಹಾಗಾಗಿ, ಆ ವಿಡಿಯೋಗಳು ಸ್ಕ್ರಿಪ್ಟೆಡ್ ಎಂಬುವುದು ನಮಗೆ ಗೊತ್ತಾಗಿದೆ.

ಸಾಮಾಜಿಕ ಜಾಲತಾಣಲ್ಲಿ ಹಿಂದೂ-ಮುಸ್ಲಿಂ ಹೆಸರಿನಲ್ಲಿ ಹಂಚಿಕೊಳ್ಳಲಾದ ವಿಡಿಯೋ ಸ್ಕ್ರಿಪ್ಟೆಡ್ ಎಂಬುವುದನ್ನು ಖ್ಯಾತ ಫ್ಯಾಕ್ಟ್‌ಚೆಕ್ ಸಂಸ್ಥೆ ಆಲ್ಟ್‌ ನ್ಯೂಸ್‌ನ ಸಹ ಸಂಸ್ಥಾಪಕ ಮುಹಮ್ಮದ್ ಝುಬೈರ್ ಖಚಿತಪಡಿಸಿದ್ದಾರೆ.

ಒಟ್ಟಿನಲ್ಲಿ tamannakohli786787 ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಳ್ಳಲಾದ ಸ್ಕ್ರಿಪ್ಟೆಡ್ ವಿಡಿಯೋವನ್ನು ಮುಸ್ಲಿಂ ಯುವಕ ಅಬ್ದುಲ್ ಹಿಂದೂ ಮಹಿಳೆ ಮುಂದೆ ಶರ್ಟ್‌ ಬಿಚ್ಚಿದ್ದಕ್ಕೆ ಮಹಿಳೆ ಅಲ್ಲೇ ಕಪಾಳಕ್ಕೆ ಬಾರಿಸಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ.

ಇದನ್ನೂ ಓದಿ : FACT CHECK : ಮುಸ್ಲಿಮರು ದುರ್ಗಾ ಮೂರ್ತಿಯನ್ನು ಧ್ವಂಸಗೊಳಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...