Homeಮುಖಪುಟಉತ್ತರ ಪ್ರದೇಶ | ಬಾರ್ ಮಾಲೀಕನಿಂದ ಬಿಜೆಪಿ ಶಾಸಕನಿಗೆ ಹಲ್ಲೆ

ಉತ್ತರ ಪ್ರದೇಶ | ಬಾರ್ ಮಾಲೀಕನಿಂದ ಬಿಜೆಪಿ ಶಾಸಕನಿಗೆ ಹಲ್ಲೆ

- Advertisement -
- Advertisement -

ಲಖಿಂಪುರ ಖೇರಿ ಬಾರ್ ಅಸೋಸಿಯೇಶನ್ ಅಧ್ಯಕ್ಷ ಅವಧೇಶ್ ಸಿಂಗ್ ಮತ್ತು ಅವರ ಪತ್ನಿ, ಮಾಜಿ ಅರ್ಬನ್ ಕೋಆಪರೇಟಿವ್ ಬ್ಯಾಂಕ್ ಅಧ್ಯಕ್ಷೆಯೂ ಆಗಿರುವ ಪುಷ್ಪಾ ಸಿಂಗ್ ವಿರುದ್ಧ ಬಿಜೆಪಿ ಶಾಸಕ ಯೋಗೇಶ್ ವರ್ಮಾ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಉತ್ತರ ಪ್ರದೇಶ

ಅವಧೇಶ್ ಸಿಂಗ್ ಅವರ ಇಬ್ಬರು ಸಹಚರರಾದ ಸಂಗ್ರಾಮ್ ಸಿಂಗ್ ಮತ್ತು ನೀರಜ್ ಸಿಂಗ್ ಮತ್ತು ಮೂರು ಡಜನ್ ಗೂ ಹೆಚ್ಚು ಅಪರಿಚಿತ ವ್ಯಕ್ತಿಗಳ ವಿರುದ್ಧವೂ ಸಹ ಈ ಘಟನೆಗೆ ಸಂಬಂಧಿಸಿದಂತೆ ಅರ್ಬನ್ ಕೋಆಪರೇಟಿವ್ ಬ್ಯಾಂಕ್ (ಯುಸಿಬಿ) ಬೋರ್ಡ್ ಚುನಾವಣೆಗೆ ಅದರ ಪ್ರಧಾನ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ 
ಇಲ್ಲಿಕ್ಲಿಕ್ ಮಾಡಿ

ಮಂಗಳವಾರ ರಾತ್ರಿ ಕೊತ್ವಾಲಿ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಖೇರಿ ಕೊತ್ವಾಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಲಖಿಂಪುರಿ ಖೇರಿಯ ಬಿಜೆಪಿ ಶಾಸಕ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಪಕ್ಷದ ಸದಸ್ಯರಾಗಿದ್ದ ಅವಧೇಶ್ ಸಿಂಗ್ ಮತ್ತು ಅವರ ಸಹಚರರನ್ನು ಬಿಜೆಪಿ ಅಮಾನತುಗೊಳಿಸಿದ ಐದು ದಿನಗಳ ನಂತರ ಈ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಚುನಾವಣಾ ಪೂರ್ವ ‘ಉಚಿತ ಭರವಸೆ’ ಪ್ರಶ್ನಿಸಿ ಅರ್ಜಿ | ಕೇಂದ್ರ ಸರ್ಕಾರ, ಚು. ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಅಕ್ಟೋಬರ್ 9 ರಂದು ಯುಸಿಬಿ ಬೋರ್ಡ್ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯಲ್ಲಿ ಅವಧೇಶ್ ಸಿಂಗ್ ಮತ್ತು ಪುಷ್ಪಾ ಸಿಂಗ್ ಅವರು ಬಿಜೆಪಿ ವ್ಯಾಪಾರಿ ಮಂಡಲ್ ಸೆಲ್‌ನ ಜಿಲ್ಲಾ ಸಂಚಾಲಕ ರಾಜು ಅಗರವಾಲ್ ಅವರ ನಾಮಪತ್ರವನ್ನು ಕಸಿದುಕೊಂಡಿದ್ದರು. ಈ ವೇಳೆ ಶಾಸಕನ ಮೇಲೆ ಕೂಡಾ ಹಲ್ಲೆ ನಡೆಸಿದ್ದಾರೆ ಎಂದು ದೂರು ಆರೋಪಿಸಿದೆ. ಅದೇ ವೇಳೆ ಅವರ ಚಿನ್ನದ ಸರವನ್ನೂ ಕಿತ್ತುಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಆರೋಪಿಸಿದ್ದಾರೆ.

ಅವಧೇಶ್ ಸಿಂಗ್ ಮತ್ತು ಅವರ ಪತ್ನಿ ತಮ್ಮ 30 ರಿಂದ 40 ಸಹಚರರೊಂದಿಗೆ ಸೇರಿ ಹಲವು ಅಭ್ಯರ್ಥಿಗಳಿಂದ ನಾಮಪತ್ರಗಳನ್ನು ಕಸಿದುಕೊಂಡಿದ್ದರು. ಈ ಬಗ್ಗೆ ಏನಾಯಿತು ಎಂದು ತಿಳಿದು ಪ್ರತಿಭಟಿಸಲು ತಾನು ಸ್ಥಳಕ್ಕೆ ತಲುಪಿದಾಗ, ಅವಧೇಶ್ ಸಿಂಗ್ ತನ್ನ ಮೇಲೆ ಹಲ್ಲೆ ನಡೆಸಿದ್ದು, ಅವರ ಸಹಚರರಾದ ಸಂಗ್ರಾಮ್ ಸಿಂಗ್ ಮತ್ತು ನೀರಜ್ ಸಿಂಗ್ ಅವರಿಗೆ ಹಿಂದಿನಿಂದ ಹೊಡೆದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಪೊಲೀಸರು ಮತ್ತು ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ಇದೆಲ್ಲ ನಡೆದಿದ್ದು, ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯವಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಗೋವಿಂದ್ ನಾರಾಯಣ್ ಶುಕ್ಲಾ ಅವರು ಅವಧೇಶ್ ಸಿಂಗ್, ಪುಷ್ಪಾ ಸಿಂಗ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅನಿಲ್ ಯಾದವ್ ಮತ್ತು ಬಿಜೆಪಿ ಕಾರ್ಯಕರ್ತ ಜ್ಯೋತಿ ಶುಕ್ಲಾ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದು, ವರ್ಮಾ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಅವರಿಂದ ವಿವರಣೆ ಕೇಳಿದ್ದಾರೆ. ಭಾನುವಾರ ನಾಲ್ವರನ್ನು ಅಶಿಸ್ತು ಆರೋಪದ ಮೇಲೆ ಬಿಜೆಪಿಯಿಂದ ಉಚ್ಚಾಟಿಸಲಾಗಿತ್ತು.

ಇದನ್ನೂ ಓದಿ: ಇಶಾ ಫೌಂಡೇಶನ್ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಕಾನೂನನ್ನು ಜಾರಿಗೊಳಿಸುವಂತೆ ಕೋರಿ ಸುಪ್ರೀಂಕೋಟ್‌ಗೆ ಅರ್ಜಿ

ಇಶಾ ಫೌಂಡೇಶನ್ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಕಾನೂನನ್ನು ಜಾರಿಗೊಳಿಸುವಂತೆ ಕೋರಿ ಸುಪ್ರೀಂಕೋಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...