Homeಮುಖಪುಟಮಹಾರಾಷ್ಟ್ರ ವಿಧಾನಸಭಾ ಚುನಾವಣೆ | ಹಾಲಿ ಮುಖ್ಯಮಂತ್ರಿ ಶಿಂಧೆ ನಮ್ಮ ಮುಖ್ಯಮಂತ್ರಿ - ಬಿಜೆಪಿ ನಾಯಕ...

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ | ಹಾಲಿ ಮುಖ್ಯಮಂತ್ರಿ ಶಿಂಧೆ ನಮ್ಮ ಮುಖ್ಯಮಂತ್ರಿ – ಬಿಜೆಪಿ ನಾಯಕ ಫಡ್ನವೀಸ್ ದೃಢ?

- Advertisement -
- Advertisement -

ಮುಂಬರುವ ಮಹಾರಾಷ್ಟ್ರ ಚುನಾವಣೆಯಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮಹಾಯುತಿ ಮೈತ್ರಿಕೂಟದ ಮುಖ್ಯಮಂತ್ರಿಯಾಗುತ್ತಾರೆ ಎಂದು ಯಾವುದೇ ಹೆಸರನ್ನು ನೇರವಾಗಿ ಹೇಳದೆ, ಬಿಜೆಪಿ ನಾಯಕ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಬುಧವಾರ ಸುಳಿವು ನೀಡಿದ್ದಾರೆ. ಶಿಂಧೆ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪಕ್ಕದಲ್ಲಿ ಕೂತು ಫಡ್ನವಿಸ್ ಅವರು ಸರ್ಕಾರದ ಕೆಲಸದ ವರದಿ ಕಾರ್ಡ್ ಅನ್ನು ಬಿಡುಗಡೆ ಮಾಡುವ ಸಮಾರಂಭದಲ್ಲಿ ಮಾತನಾಡಿದ ಅವರು “ನಮ್ಮ ಮುಖ್ಯಮಂತ್ರಿ ಇಲ್ಲಿ ಕುಳಿತಿದ್ದಾರೆ” ಎಂದು ಹೇಳಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ

ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್‌ಗೆ ಸವಾಲು ಹಾಕಿದ ಅವರು ಮಹಾ ವಿಕಾಸ್ ಅಘಾಡಿ (ಎಂವಿಎ)ಯ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಘೋಷಿಸುವಂತೆ ಕೇಳಿದ ಫಡ್ನವಿಸ್, “ನಾವು ಮುಖ್ಯಮಂತ್ರಿಯ ಅಭ್ಯರ್ಥಿಯನ್ನು ಘೋಷಿಸುವ ಅಗತ್ಯವಿಲ್ಲ, ನಮ್ಮ ಮುಖ್ಯಮಂತ್ರಿ ಇಲ್ಲಿ ಕುಳಿತಿದ್ದಾರೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮಹಾ ವಿಕಾಸ್ ಅಘಾಡಿ ಅವರು ಮುಖ್ಯಮಂತ್ರಿಯ ಅಭ್ಯರ್ಥಿ ಘೋಷಿಸುತ್ತಿಲ್ಲ. ಏಕೆಂದರೆ ಚುನಾವಣೆಯ ನಂತರ ಅವರು ತಮ್ಮ ಮುಖ್ಯಮಂತ್ರಿ ಇಲ್ಲಿ ಇರಲಿದ್ದಾರೆ  ಎಂದು ಭಾವಿಸುವುದಿಲ್ಲ. ನಾನು ಪವಾರ್ ಸಾಹಬ್ ಅವರಿಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲು ಸವಾಲು ಹಾಕುತ್ತೇನೆ” ಎಂದು ಮಾಜಿ ಮುಖ್ಯಮಂತ್ರಿಯೂ ಆಗಿರುವ ಫಡ್ನವಿಸ್ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಬಿಜೆಪಿಯ ಪ್ರಮುಖ ಮುಖವಾಗಿರುವ ಫಡ್ನವೀಸ್, ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಮಿತ್ರಪಕ್ಷಗಳ ನಡುವೆ ಸೀಟು ಹಂಚಿಕೆ ಚರ್ಚೆಗಳು ಅಂತಿಮ ಹಂತದಲ್ಲಿವೆ ಎಂದು ಹೇಳಿದ್ದಾರೆ. ಪ್ರಸ್ತುತ ಉಪ ಮುಖ್ಯಮಂತ್ರಿಗಳಾಗಿರುವ ಫಡ್ನವೀಸ್ ಮತ್ತು ಅಜಿತ್ ಪವಾರ್ ಇಬ್ಬರೂ ಮುಂದಿನ ಮಹಾರಾಷ್ಟ್ರ ಮುಖ್ಯಮಂತ್ರಿಯಾಗುವ ಆಕಾಂಕ್ಷೆಯನ್ನು ಹೊಂದಿದ್ದಾರೆ ಎಂಬುದು ವರದಿಯಾಗಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಕೂಡ ಈ ವಿಷಯವನ್ನು ನೇರವಾಗಿ ಹೇಳದೆ, ಎರಡು ವರ್ಷಗಳ ಕೆಲಸ ಮತ್ತು ಕಾರ್ಯಕ್ಷಮತೆ ಮೈತ್ರಿ ಸರ್ಕಾರದ ಮುಖವಾಗಿದೆ ಎಂದು ಹೇಳಿದ್ದಾರೆ.

ಎನ್‌ಸಿಪಿ (ಎಸ್‌ಪಿ), ಶಿವಸೇನೆ (ಯುಬಿಟಿ) ಮತ್ತು ಕಾಂಗ್ರೆಸ್ ಅನ್ನು ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ ಕೂಡ ತಮ್ಮ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಸಾರ್ವಜನಿಕವಾಗಿ ಈ ವರೆಗೆ ಘೋಷಿಸಿಲ್ಲ. ಈ ವಾರದ ಆರಂಭದಲ್ಲಿ ಮಾತನಾಡಿದ್ದ ಉದ್ಧವ್ ಠಾಕ್ರೆ, ಮಹಾಯುತಿಯು ಅಭ್ಯರ್ಥಿ ಘೋಷಣೆ ಮಾಡಿದ ನಂತರವೇ ಮಹಾ ವಿಕಾಸ್ ಅಘಾಡಿ ತನ್ನ ಅಭ್ಯರ್ಥಿಯನ್ನು ಹೆಸರಿಸಲಿದೆ ಎಂದು ಹೇಳುವ ಮೂಲಕ ಪ್ರಶ್ನೆಯಿಂದ ತಪ್ಪಿಸಿಕೊಂಡಿದ್ದಾರೆ.

ಶರದ್ ಪವಾರ್ ಅವರು ಹಲವಾರು ಸಂದರ್ಭಗಳಲ್ಲಿ ಮೈತ್ರಿಕೂಟದ ಮುಖ್ಯಮಂತ್ರಿ ಮುಖವನ್ನು ಚುನಾವಣೆಯಲ್ಲಿ ಯಾವ ಪಕ್ಷವು ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂಬುದನ್ನು ಆಧರಿಸಿದೆ ಎಂದು ಹೇಳಿದ್ದಾರೆ. ನವೆಂಬರ್ 20 ರಂದು ಮಹಾರಾಷ್ಟ್ರ ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಜಾರ್ಖಂಡ್ ಜೊತೆಗೆ ಮತಗಳನ್ನು ಎಣಿಕೆ ಮಾಡಲಾಗುತ್ತದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ

ಇದನ್ನೂ ಓದಿ: ಇಶಾ ಫೌಂಡೇಶನ್ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಕಾನೂನನ್ನು ಜಾರಿಗೊಳಿಸುವಂತೆ ಕೋರಿ ಸುಪ್ರೀಂಕೋಟ್‌ಗೆ ಅರ್ಜಿ

ಇಶಾ ಫೌಂಡೇಶನ್ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಕಾನೂನನ್ನು ಜಾರಿಗೊಳಿಸುವಂತೆ ಕೋರಿ ಸುಪ್ರೀಂಕೋಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...