ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ನೇತೃತ್ವದ ಗ್ಯಾಂಗ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲಲು ಗುತ್ತಿಗೆ ತೆಗೆದುಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಈ ಆರೋಪಿಗಳು ಪಾಕಿಸ್ತಾನದಿಂದ ಅತ್ಯಾಧುನಿಕ ಶಸ್ತ್ರಾಸ್ತ್ರಗಳಾದ ಎಕೆ 47, ಎಕೆ 92, ಎಂ 16 ಮತ್ತು ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡಲಾದ ಟರ್ಕಿ ನಿರ್ಮಿತ ಜಿಗಾನಾ ಆಯುಧವನ್ನು ಖರೀದಿಸಲು ಸಿದ್ಧತೆ ನಡೆಸಿದ್ದರು ಎಂದು ಅವರು ಹೇಳಿದ್ದಾರೆ.
“ಆರೋಪಿಗಳು ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲಲು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗರನ್ನು ನೇಮಿಸಿಕೊಂಡಿದ್ದಾರೆ. ಅವರೆಲ್ಲರೂ ಇದೀಗ ಪುಣೆ, ರಾಯಗಡ, ನವಿ ಮುಂಬೈ, ಥಾಣೆ ಮತ್ತು ಗುಜರಾತ್‌ನಲ್ಲಿ ತಲೆಮರೆಸಿಕೊಂಡಿದ್ದಾರೆ” ಎಂದು ಪೊಲೀಸರು ಹೇಳಿದ್ದಾರೆ. ಆರೋಪಿಗಳು ಮಹಾರಾಷ್ಟ್ರದ ಪನ್ವೇಲ್‌ನಲ್ಲಿರುವ ಸಲ್ಮಾನ್ ಖಾನ್ ಅವರ ಫಾರ್ಮ್‌ಹೌಸ್ ಬಳಿ ಕೊಲ್ಲಲು ಯೋಜಿಸಿದ್ದರು ಎಂದು ನವಿ ಮುಂಬೈ ಪೊಲೀಸರು ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಸಲ್ಮಾನ್ ಖಾನ್ ಹತ್ಯೆಗಾಗಿ ₹ 25 ಲಕ್ಷದ ಒಪ್ಪಂದ ಮಾಡಲಾಗಿದೆ ಎಂದು ಹೇಳಿರುವ ಪೊಲೀಸರು ಆರೋಪ ಪಟ್ಟಿಯಲ್ಲಿ ಐದು ಜನರನ್ನು ಹೆಸರಿಸಿದೆ. ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ನೇತೃತ್ವದ ಗ್ಯಾಂಗ್ ಗುತ್ತಿಗೆಯನ್ನು ತೆಗೆದುಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಬಾಂದ್ರಾ ಮನೆ, ಪನ್ವೆಲ್ ಫಾರ್ಮ್‌ಹೌಸ್ ಮತ್ತು ಗೋರೆಗಾಂವ್ ಫಿಲ್ಮ್ ಸಿಟಿಯಲ್ಲಿ ಸುಮಾರು 60 ರಿಂದ 70 ಜನರು ಸಲ್ಮಾನ್ ಖಾನ್ ಅವರ ಚಲನವಲನವನ್ನು ಗಮನಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಸಲ್ಮಾನ್ ಖಾನ್ ಅವರನ್ನು ಕೊಲ್ಲುವ ಯೋಜನೆಯನ್ನು ಆಗಸ್ಟ್ 2023 ಮತ್ತು ಏಪ್ರಿಲ್ 2024 ರ ನಡುವೆ ರೂಪಿಸಲಾಗಿತ್ತು ಎಂದು ಪೊಲೀಸರು ಆರೋಪಪಟ್ಟಿಯಲ್ಲಿ ಹೇಳಿದ್ದಾರೆ. ಗುರುವಾರ ಹರಿಯಾಣದ ಪಾಣಿಪತ್‌ನಿಂದ ಬಂಧಿತನಾಗಿದ್ದ ಸುಖ್ಖಾ, ನಿಯೋಜಿತ ಶೂಟರ್ ಅಜಯ್ ಕಶ್ಯಪ್ ಅಲಿಯಾಸ್ ಎಕೆ ಮತ್ತು ಪಿತೂರಿಯಲ್ಲಿ ಭಾಗಿಯಾಗಿರುವ ಇತರ ನಾಲ್ವರಿಗೆ ಹತ್ಯೆಯನ್ನು ನಿಯೋಜಿಸಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ.
ಸಲ್ಮಾನ್ ಖಾನ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ನಂತರ ಶೂಟರ್‌ಗಳು ಕನ್ಯಾಕುಮಾರಿಯಿಂದ ದೋಣಿಯಲ್ಲಿ ಶ್ರೀಲಂಕಾಕ್ಕೆ ಪ್ರಯಾಣಿಸಿ ನಂತರ ಭಾರತೀಯ ತನಿಖಾ ಸಂಸ್ಥೆಗಳು ತಲುಪಲು ಸಾಧ್ಯವಾಗದ ದೇಶಕ್ಕೆ ಪರಾರಿಯಾಗಲು ಯೋಜಿಸಿದ್ದರು ಎಂದು ಕೂಡಾ ಆರೋಪಪಟ್ಟಿ ಹೇಳುತ್ತದೆ.
ಬಾಂದ್ರಾದಲ್ಲಿರುವ ಸಲ್ಮಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆಸಿದ ಘಟನೆಯನ್ನು ಪೊಲೀಸರು ತನಿಖೆ ನಡೆಸಿದಾಗ ಸಲ್ಮಾನ್ ಖಾನ್ ಅವರನ್ನು ಪನ್ವೇಲ್ ಫಾರ್ಮ್‌ಹೌಸ್‌ನಲ್ಲಿ ಗುರಿಯಾಗಿಸುವ ಸಂಚು ಬಯಲಾಗಿತ್ತು. ಈ ನಡುವೆ, ಮಾಜಿ ಸಚಿವ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಹತ್ಯೆಯ ನಂತರ ಸಲ್ಮಾನ್ ಖಾನ್ ಅವರ ಬಾಂದ್ರಾ ನಿವಾಸದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಇದನ್ನೂ ಓದಿ: FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು
FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು


