Homeಮುಖಪುಟಬಹ್ರೈಚ್ ಗಲಭೆ | ನೇಪಾಳ ಗಡಿ ಬಳಿ ಇಬ್ಬರು ಆರೋಪಿಗಳ ಮೇಲೆ ಎನ್‌ಕೌಂಟರ್

ಬಹ್ರೈಚ್ ಗಲಭೆ | ನೇಪಾಳ ಗಡಿ ಬಳಿ ಇಬ್ಬರು ಆರೋಪಿಗಳ ಮೇಲೆ ಎನ್‌ಕೌಂಟರ್

- Advertisement -
- Advertisement -

ನೇಪಾಳ ಗಡಿಯಲ್ಲಿರುವ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ದುರ್ಗಾ ಮೂರ್ತಿ ವಿಸರ್ಜನೆಯ ಮೆರವಣಿಗೆಯ ವೇಳೆ ಹಿಂಸಾಚಾರ ಭುಗಿಲೆದ್ದಿದೆ. ಈ ಹಿಂಸಾಚಾರದಲ್ಲಿ ಭಾಗವಹಿಸಿದ್ದಾರೆ ಎನ್ನಲಾದ ಇಬ್ಬರು ಆರೋಪಿಗಳಿಗೆ ನನ್‌ಪಾರಾ ಬಳಿ ರಾಜ್ಯ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಪೊಲೀಸರು ಎನ್‌ಕೌಂಟರ್‌ನಲ್ಲಿ ಮಾಡಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಬಹ್ರೈಚ್ ಗಲಭೆ

ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಆರೋಪಿಗಳನ್ನು ಸರ್ಫರಾಜ್ ಮತ್ತು ಫಹೀಮ್ ಎಂದು ಗುರುತಿಸಲಾಗಿದ್ದು, ಅವರಿಬ್ಬರನ್ನು ನನ್ಪಾರಾದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಅದರಲ್ಲಿ ಸರ್ಫರ್ಜ್ ಅವರ ಸ್ಥಿತಿ ‘ಚಿಂತಾಜನಕವಾಗಿದೆ’ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಹೇಳಿದೆ. ಬಹ್ರೈಚ್ ಗಲಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಹ್ರೈಚ್ ಹಿಂಸಾಚಾರದ ಐವರು ಆರೋಪಿಗಳು ನೇಪಾಳಕ್ಕೆ ತಪ್ಪಿಸಿಕೊಳ್ಳಲು ಯೋಜಿಸುತ್ತಿದ್ದರು. ಈ ವೇಳೆ ಅವರನ್ನು ಎಸ್‌ಟಿಎಫ್ ತಂಡವು ತಡೆದಿದೆ ಎಂದು ಮೂಲಗಳು ಹೇಳಿವೆ. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದ್ದು, ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಸರ್ಫರಾಜ್ ಮತ್ತು ಫಹೀಮ್‌ಗೆ ಗುಂಡೇಟಿನ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ. ಎನ್‌ಕೌಂಟರ್ ವೇಳೆ ಇತರ ಮೂವರನ್ನು ಬಂಧಿಸಲಾಗಿತ್ತು.

ಅದಾಗ್ಯೂ, ಸರ್ಫರಾಜ್‌ ಅವರ ಕುಟುಂಬ ಸದಸ್ಯರು, ಬುಧವಾರ ಬೆಳಗ್ಗೆ ಪೊಲೀಸರು ಆತನನ್ನು ಮತ್ತು ಇತರ ಮೂವರು ಸದಸ್ಯರನ್ನು ತಮ್ಮ ನಿವಾಸದಿಂದ ಕರೆದೊಯ್ದಿದ್ದಾರೆ ಎಂದು ಹೇಳಿದ್ದಾರೆ.

ಭಾನುವಾರ ರಾತ್ರಿ ನಡೆದ ದುರ್ಗಾ ವಿಗ್ರಹ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಹಿಂಸಾಚಾರದಲ್ಲಿ ರಾಮ್ ಗೋಪಾಲ್ ಮಿಶ್ರಾ ಎಂಬ ಯುವಕನನ್ನು ಗುಂಡಿಕ್ಕಿ ಕೊಂಲ್ಲಾಗಿದೆ ಎಂದು ವರದಿಯಾಗಿದೆ. ಈ ವೇಳೆ ಭುಗಿಲೆದ್ದ ಹಿಂಸಾಚಾರದಲ್ಲಿ ಸುಮಾರು 12 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಮಾರು 50 ಜನರನ್ನು ಬಂಧಿಸಲಾಗಿದೆ. ಹರ್ಡಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಸೇರಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ನಿರ್ಲಕ್ಷ್ಯದ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ. ಬಹ್ರೈಚ್‌ನಲ್ಲಿ ಹತ್ಯೆಗೈದು ವಾಹನಗಳು, ಮನೆಗಳು ಮತ್ತು ಅಂಗಡಿಗಳನ್ನು ಸುಟ್ಟುಹಾಕಿದ ನಂತರ ಹಿಂಸಾಚಾರ ವಿರೋಧಿಸಿ ಪ್ರತಿಭಟನೆ ನಡೆಸಲಾಗಿದೆ ಎಂದು ವರದಿಯಾಗಿದೆ. ಇದೇ ವೇಳೆ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ನಟ ಸಲ್ಮಾನ್ ಖಾನ್ ಹತ್ಯೆಗೆ ಪಾಕಿಸ್ತಾನದಿಂದ ಶಸ್ತ್ರಾಸ್ತ್ರ ತರಿಸಲು ಸಿದ್ದತೆ ನಡೆಸಿದ್ದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್

ನಟ ಸಲ್ಮಾನ್ ಖಾನ್ ಹತ್ಯೆಗೆ ಪಾಕಿಸ್ತಾನದಿಂದ ಶಸ್ತ್ರಾಸ್ತ್ರ ತರಿಸಲು ಸಿದ್ದತೆ ನಡೆಸಿದ್ದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....