Homeಮುಖಪುಟ'ನಿಂಬೆ ಕತ್ತರಿಸಿ ದೆವ್ವ ಓಡಿಸುತ್ತೇನೆ' | ಸರ್ಕಾರಿ ಅಧಿಕಾರಿಗಳಿಗೆ ಮಾಟ, ಮಂತ್ರದ ಬೆದರಿಕೆ ಹಾಕಿದ ಬಿಜೆಪಿ...

‘ನಿಂಬೆ ಕತ್ತರಿಸಿ ದೆವ್ವ ಓಡಿಸುತ್ತೇನೆ’ | ಸರ್ಕಾರಿ ಅಧಿಕಾರಿಗಳಿಗೆ ಮಾಟ, ಮಂತ್ರದ ಬೆದರಿಕೆ ಹಾಕಿದ ಬಿಜೆಪಿ ಸಂಸದ!

- Advertisement -
- Advertisement -

“ಸರ್ಕಾರಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದಿದ್ದರೆ, ನಿಂಬೆ ಹಣ್ಣು ಕತ್ತರಿಸಿ ಮಾಟ, ಮಂತ್ರದ ಮೂಲಕ ಅವರ ದೆವ್ವ ಬಿಡಿಸುತ್ತೇನೆ” ಎಂದು ಛತ್ತೀಸ್‌ಗಢದ ಬಿಜೆಪಿ ಸಂಸದ ಭೋಜರಾಜ್ ನಾಗ್ ಹೇಳಿದ್ದಾರೆ.

ವರದಿಗಳ ಪ್ರಕಾರ, ತಮ್ಮ ಲೋಕಸಭಾ ಕ್ಷೇತ್ರ ಕಾಂಕೇರ್‌ನಲ್ಲಿ ಆಯೋಜಿಸಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ, ಜಲ ಜೀವನ್ ಮಿಷನ್ ಸೇರಿದಂತೆ ಸರ್ಕಾರಿ ಯೋಜನೆಗಳಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಉಲ್ಲೇಖಿಸಿದ ಸಂಸದ ನಾಗ್, ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

“ನಾನು ಈ ಹಿಂದೆಯೂ ಹೇಳಿದ್ದೇನೆ, ಈಗ ಮತ್ತೊಮ್ಮೆ ಹೇಳುತ್ತಿದ್ದೇನೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಕೆಲವರು (ಅಧಿಕಾರಿಗಳು) ನಿರ್ಲಕ್ಷ್ಯದ ಮೂಲಕ ಹಾಳು ಮಾಡುತ್ತಿದ್ದಾರೆ. ಅವರು ಸರಿಯಾಗಿ ಜವಾಬ್ದಾರಿ ನಿರ್ವಹಿಸದಿದ್ದರೆ, ಪ್ರತಿಯೊಬ್ಬರ ಹೆಸರಿನಲ್ಲೂ ನಿಂಬೆ ಹಣ್ಣು ಕತ್ತರಿಸುತ್ತೇನೆ” ಎಂದು ಸಂಸದ ನಾಗ್ ಹೇಳಿದ್ದಾರೆ.

“ನಾನು ಬೈಗಾ (ಮಾಟ, ಮಂತ್ರದ ಶಕ್ತಿಯ ಮೂಲಕ ಆಧ್ಯಾತ್ಮಿಕ ಚಿಕಿತ್ಸೆ ನೀಡುವ ಅಥವಾ ದೆವ್ವ, ಭೂತ ಬಿಡಿಸುವ ಸಂಪ್ರದಾಯ ಅನುಸರಿಸುವ ಬುಡಕಟ್ಟು ಸಮುದಾಯ) ಸಮುದಾಯದವನು” ಎಂದು ಈ ಹಿಂದೆಯೊಮ್ಮೆ ಸಂಸದ ನಾಗ್ ಅವರು ಹೇಳಿದ್ದರು ಎಂದು ವರದಿಗಳು ತಿಳಿಸಿವೆ.

ನಾಗ್‌ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ನ ಹಿರಿಯ ವಕ್ತಾರ ಧನಂಜಯ್ ಸಿಂಗ್ ಠಾಕೂರ್ “ಬಿಜೆಪಿಗೆ ಸಂಸದ ಈ ಹೇಳಿಕೆಗಿಂತ ಉತ್ತಮವಾದ ಪ್ರಮಾಣಪತ್ರ ಯಾವುದಿದೆ? ಬಿಜೆಪಿ ಸಂಸದರು ತಮ್ಮ ಜವಾಬ್ದಾರಿಯನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಅದರ, ಪರಿಣಾಮವನ್ನು ಜನರು ಅನುಭವಿಸುತ್ತಿದ್ದಾರೆ” ಎಂದಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಕೇಂದ್ರ ಬುಡಕಟ್ಟು ವ್ಯವಹಾರಗಳು ಮತ್ತು ಕೃಷಿ ಖಾತೆಯ ರಾಜ್ಯ ಸಚಿವ ರಾಮ್‌ವಿಚಾರ್ ನೇತಮ್, “ರಾಜ್ಯದ ಆಡಳಿತ ಯಂತ್ರ ಅಥವಾ ಅಧಿಕಾರಿಗಳಿಂದ ಕಾಂಗ್ರೆಸ್‌ ಭೂತವನ್ನು ಓಡಿಸುವುದಾಗಿ ಸಂಸದರು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ಅಧಿಕಾರಿಗಳು ಬದ್ದತೆಯಿಂದ ಜನರಿಗಾಗಿ ಕೆಲಸ ಮಾಡಬೇಕು” ಎಂದು ಹೇಳಿದ್ದಾರೆ.

“ಜನಪ್ರತಿನಿಧಿಯೊಬ್ಬರು ಇಂತಹ ಹೇಳಿಕೆ ನೀಡಿರುವುದು ದುರದೃಷ್ಟಕರ ಸಂಗತಿ. ಭಾರತೀಯ ಜನತಾ ಪಕ್ಷದೊಳಗೆ ಮೂಢನಂಬಿಕೆ ಆಳವಾಗಿದೆ. ಕೊರೋನಾ ಓಡಿಸಲು ಚಪ್ಪಾಳೆ ತಟ್ಟಲು ಮತ್ತು ತಟ್ಟೆ ಬಡಿಯಲು ಪ್ರಧಾನಿ ಮೋದಿ ಸೂಚಿಸಿದ್ದರು. ಆ ಮೌಢ್ಯತೆ ಈಗ ಅವರ ಅನುಯಾಯಿಗಳಲ್ಲಿ ಪ್ರತಿಧ್ವನಿಸುತ್ತಿದೆ” ಎಂದು ಛತ್ತೀಸ್‌ಗಢದ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಬೈಜ್ ವಾಗ್ದಾಳಿ ನಡೆಸಿದ್ದಾರೆ.

ಛತ್ತೀಸ್‌ಗಢದಲ್ಲಿ ಮಾಟಮಂತ್ರಕ್ಕೆ ಸಂಬಂಧಿಸಿದಂತೆ ಕೊಲೆಗಳು ಆಗಾಗ ವರದಿಯಾಗುತ್ತಲೇ ಇರುತ್ತದೆ. ಕಳೆದ ತಿಂಗಳು, ಬಲೋದಬಝಾರ್-ಭಟಪರಾ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿ, ಅವರ ಇಬ್ಬರು ಸಹೋದರಿಯರು ಮತ್ತು 11 ತಿಂಗಳ ಸೋದರಳಿಯನ ಕೊಲೆ ನಡೆದಿತ್ತು. ಇದರ ಹಿಂದೆ ಸಂಬಂಧಿಕರೊಬ್ಬರು ಮಾಟ ಮಂತ್ರ ಮಾಡಿದ ಶಂಕೆ ವ್ಯಕ್ತವಾಗಿದೆ.

ಮಾಟ, ಮಂತ್ರ, ದೆವ್ವ ಬಿಡಿಸುವುದು ಇತ್ಯಾದಿ ಕೃತ್ಯಗಳನ್ನು ತಡೆಗಟ್ಟಲು ಛತ್ತೀಸ್‌ಗಢದಲ್ಲಿ 2005ರಲ್ಲಿ ತೋನಾಹಿ ಪ್ರತದ್ನಾ ನಿವಾರಣ್ ಕಾಯ್ದೆ ಜಾರಿಗೆ ತರಲಾಗಿದೆ. ಆದರೂ, ಅಂತಹ ಪ್ರಕರಣಗಳು ನಡೆಯುತ್ತಲೇ ಇವೆ.

ಇದನ್ನೂ ಓದಿ : ಮಹಾರಾಷ್ಟ್ರ | 200 ಕ್ಷೇತ್ರಗಳಲ್ಲಿ ಮಹಾ ವಿಕಾಸ್ ಅಘಾಡಿ ಒಮ್ಮತ – ಶರದ್ ಪವಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...