Homeಮುಖಪುಟಅಸ್ಸಾಂ | ಹಳಿತಪ್ಪಿದ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್‌ನ 8 ಬೋಗಿಗಳು!

ಅಸ್ಸಾಂ | ಹಳಿತಪ್ಪಿದ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್‌ನ 8 ಬೋಗಿಗಳು!

- Advertisement -
- Advertisement -

ಗುರುವಾರ ಬೆಳಗ್ಗೆ ಅಗರ್ತಲಾದಿಂದ ಹೊರಟು ಮುಂಬೈಗೆ ತೆರಳುತ್ತಿದ್ದ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ಮಧ್ಯಾಹ್ನ 3:55 ರ ಸುಮಾರಿಗೆ ಅಸ್ಸಾಂನ ದಿಬಾಲಾಂಗ್ ನಿಲ್ದಾಣದಲ್ಲಿ ಹಳಿತಪ್ಪಿದೆ ಎಂದು ರೈಲ್ವೇ ವಕ್ತಾರರು ತಿಳಿಸಿದ್ದಾರೆ. ರೈಲಿನ 8 ಬೋಗಿಗಳು ಹಳಿತಪ್ಪಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅವರು ಹೇಳಿದ್ದಾರೆ. ಅಸ್ಸಾಂ

“ಪವರ್ ಕಾರ್ ಮತ್ತು ರೈಲಿನ ಇಂಜಿನ್ ಸೇರಿದಂತೆ ಎಂಟು ಬೋಗಿಗಳು ಹಳಿತಪ್ಪಿದವು. ಆದರೆ, ಯಾವುದೇ ಪ್ರಾಣಹಾನಿ ಅಥವಾ ಹೆಚ್ಚಿನ ಗಾಯಗಳ ಬಗ್ಗೆ ವರದಿಯಾಗಿಲ್ಲ” ಎಂದು ಈಶಾನ್ಯ ಗಡಿ ರೈಲ್ವೆ ವಲಯದ ಸಿಪಿಆರ್ಒ ತಿಳಿಸಿದ್ದಾರೆ. ಲುಮ್ಡಿಂಗ್ ವಿಭಾಗದ ಅಡಿಯಲ್ಲಿ ಲುಮ್ಡಿಂಗ್-ಬರ್ದರ್‌ಪುರ್ ಹಿಲ್ ವಿಭಾಗದಲ್ಲಿ ಅಪಘಾತ ಸಂಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಪಘಾತ ಪರಿಹಾರ, ವೈದ್ಯಕೀಯ ಸೇವೆ, ರಕ್ಷಣೆ ಮತ್ತು ರೈಲು ಮರುಸ್ಥಾಪನೆ ಕಾರ್ಯಗಳ ಮೇಲ್ವಿಚಾರಣೆಗಾಗಿ ವಿಭಾಗದ ಹಿರಿಯ ಅಧಿಕಾರಿಗಳೊಂದಿಗೆ ಲುಮ್ಡಿಂಗ್‌ನಿಂದ ಸ್ಥಳಕ್ಕೆ ತೆರಳಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. “ಲುಮ್ಡಿಂಗ್-ಬದರ್‌ಪುರ್ ಸಿಂಗಲ್ ಲೈನ್ ವಿಭಾಗದಲ್ಲಿ ರೈಲುಗಳ ಓಡಾಟವನ್ನು ಸ್ಥಗಿತಗೊಳಿಸಲಾಗಿದೆ. ಲುಮ್‌ಡಿಂಗ್‌ನಲ್ಲಿರುವ ಸಹಾಯವಾಣಿ ಸಂಖ್ಯೆಗಳು 03674 263120, 03674 263126” ಎಂದು ಸಿಪಿಆರ್‌ಒ ಹೇಳಿದ್ದಾರೆ. ಅಸ್ಸಾಂ

ಇತ್ತಿಚೆಗಷ್ಟೆ, ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು – ದರ್ಭಾಂಗ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ 19 ಪ್ರಯಾಣಿಕರು ಗಾಯಗೊಂಡಿದ್ದರು. ಈ ವೇಳೆ ಪ್ಯಾಸೆಂಜರ್ ರೈಲಿನ 12 ರಿಂದ 13 ಬೋಗಿಗಳು ಹಳಿ ತಪ್ಪಿವೆ ಎಂದು ವರದಿಯಾಗಿದೆ. ಗಂಟೆಗೆ 75 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದ ಎಕ್ಸ್‌ಪ್ರೆಸ್ ರೈಲು, ಮುಖ್ಯ ಮಾರ್ಗದ ಬದಲಿಗೆ ಲೂಪ್ ಲೈನ್ ಅನ್ನು ತಪ್ಪಾಗಿ ಪ್ರವೇಶಿಸಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು.

ಇದನ್ನೂ ಓದಿ: ‘ನಿಂಬೆ ಕತ್ತರಿಸಿ ದೆವ್ವ ಓಡಿಸುತ್ತೇನೆ’ | ಸರ್ಕಾರಿ ಅಧಿಕಾರಿಗಳಿಗೆ ಮಾಟ, ಮಂತ್ರದ ಬೆದರಿಕೆ ಹಾಕಿದ ಬಿಜೆಪಿ ಸಂಸದ!

‘ನಿಂಬೆ ಕತ್ತರಿಸಿ ದೆವ್ವ ಓಡಿಸುತ್ತೇನೆ’ | ಸರ್ಕಾರಿ ಅಧಿಕಾರಿಗಳಿಗೆ ಮಾಟ, ಮಂತ್ರದ ಬೆದರಿಕೆ ಹಾಕಿದ ಬಿಜೆಪಿ ಸಂಸದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...