Homeಕರ್ನಾಟಕಕೊಲೆ ಪ್ರಕರಣ : ಕೆಳ ನ್ಯಾಯಾಲಯ ಖುಲಾಸೆಗೊಳಿಸಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಕೊಲೆ ಪ್ರಕರಣ : ಕೆಳ ನ್ಯಾಯಾಲಯ ಖುಲಾಸೆಗೊಳಿಸಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

- Advertisement -
- Advertisement -

ಪತ್ನಿ ತವರು ಮನೆಯಿಂದ ವಾಪಸ್‌ ಆಗದಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಆಕೆಯ ಸಹೋದರಿಯ ಆರು ವರ್ಷದ ಮಗನನ್ನು ಕೊಲೆಗೈದ ಮೈಸೂರಿನ ಎಚ್‌ಡಿ ಕೋಟೆ ತಾಲೂಕಿನ ಕರಿಗಾಲ ಗ್ರಾಮದ ನಿವಾಸಿ ನಾರಾಯಣ ಎಂಬಾತನಿಗೆ ಕರ್ನಾಟಕ ಹೈಕೋರ್ಟ್‌ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ಬಾರ್‌ & ಬೆಂಚ್ ವರದಿ ಮಾಡಿದೆ.

ಆರೋಪಿ ನಾರಾಯಣನನ್ನು ಖುಲಾಸೆಗೊಳಿಸಿದ್ದ ಮೈಸೂರಿನ ಸತ್ರ ನ್ಯಾಯಾಲಯದ ತೀರ್ಪನ್ನು ನ್ಯಾಯಮೂರ್ತಿಗಳಾದ ಶ್ರೀನಿವಾಸ ಹರೀಶ್‌ ಕುಮಾರ್‌ ಮತ್ತು ಉಮೇಶ್‌ ಎಂ. ಅಡಿಗ ಅವರ ವಿಭಾಗೀಯ ಪೀಠ ರದ್ದುಪಡಿಸಿದೆ ಎಂದು ವರದಿ ಹೇಳಿದೆ.

ಕೆಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಎಚ್‌ಡಿ ಕೋಟೆ ಠಾಣಾ ಪೊಲೀಸರು ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿಯನ್ನು ಪುರಸ್ಕರಿಸಿದ ಹೈಕೋರ್ಟ್ ವಿಭಾಗೀಯ ಪೀಠ, ನಾರಾಯಣನನ್ನು ದೋಷಿಯಾಗಿ ತೀರ್ಮಾನಿಸಿ ಶಿಕ್ಷೆ ವಿಧಿಸಿದೆ.

ನಾರಾಯಣನನ್ನು ಖುಲಾಸೆಗೊಳಿಸಿ ಮೈಸೂರಿನ 3ನೇ ಹೆಚ್ಚುವರಿ ಸತ್ರ ನ್ಯಾಯಾಲಯ 2016ರ ಆಗಸ್ಟ್‌ 28ರಂದು ಆದೇಶ ಹೊರಡಿಸಿತ್ತು. ಈ ಆದೇಶ ಪ್ರಶ್ನಿಸಿ ಎಚ್‌ಡಿ ಕೋಟೆ ಠಾಣಾ ಪೊಲೀಸರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಪ್ರಕರಣದ ವಿವರ : ಕರಿಗಾಲ ಗ್ರಾಮದ ನಿವಾಸಿ ಸಿದ್ದೇಗೌಡ ಅವರ ಪುತ್ರಿ ಸುಶೀಲಾಳನ್ನು ನಾರಾಯಣ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳು. ಟ್ರ್ಯಾಕ್ಟರ್‌ ಚಾಲನಾಗಿದ್ದ ನಾರಾಯಣ ಮದ್ಯ ವ್ಯಸನಿಯಾಗಿದ್ದ. ಆತನ ಪತ್ನಿಗೆ ಅದೇ ಗ್ರಾಮದಲ್ಲಿ ಅಂಗನವಾಡಿ ಶಿಕ್ಷಕಿಯಾಗಿ ಕೆಲಸ ಸಿಕ್ಕಿತ್ತು. ಆದರೆ ಉದ್ಯೋಗ ಬಿಡುವಂತೆ ಪತ್ನಿಗೆ ಒತ್ತಾಯಿಸುತ್ತಿದ್ದ ಹಾಗೂ ಆಕೆಯ ಶೀಲ ಶಂಕಿಸುತ್ತಿದ್ದ. ಇದೇ ವಿಚಾರವಾಗಿ ಪತ್ನಿಯೊಂದಿಗೆ ಜಗಳವಾಡಿ ಹಲ್ಲೆ ನಡೆಸುತ್ತಿದ್ದ. ಇದರಿಂದ ಬೇಸತ್ತ ಸುಶೀಲ ಅದೇ ಗ್ರಾಮದಲ್ಲಿದ್ದ ತಂದೆ ಮನೆಗೆ ತೆರಳಿ ನೆಲೆಸಿದ್ದರು.

ನಾರಾಯಣ ಹಲವು ಬಾರಿ ಮನವಿ ಮಾಡಿದ್ದರೂ ಸುಶೀಲ ಗಂಡನ ಮನೆಗೆ ಹಿಂದಿರುಗಿರಲಿಲ್ಲ. ಇದರಿಂದ ಸೇಡು ತೀರಿಸಿಕೊಳ್ಳಲು ನಾರಾಯಣ, 2014ರಲ್ಲಿ ಸುಶೀಲ ಅವರ ತಂದೆಯ ಮನೆಯಲ್ಲಿದ್ದ ಆಕೆಯ ಅಕ್ಕನ ಪುತ್ರ ಮದನ್‌ಗೆ ಬಿಸ್ಕೆಟ್‌ ಕೊಡಿಸುವುದಾಗಿ ಪುಸಲಾಯಿಸಿ ಕರೆದೊಯ್ದು ಕತ್ತು ಹಿಸುಕಿ ಕೊಲೆ ಮಾಡಿದ್ದ. ಈ ಕುರಿತು ಸುಶೀಲ ತಂದೆ ಎಚ್ ಡಿ ಕೋಟೆ ಠಾಣಾ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಪೊಲೀಸರು ತನಿಖೆ ನಡೆಸಿ ಕೊಲೆ ಅಪರಾಧದಡಿ ಆರೋಪ ಪಟ್ಟಿ ಸಲ್ಲಿಸಿದ್ದರು.

ಇದನ್ನೂ ಓದಿ : ಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹ 2 ಕೋಟಿ ಸುಲಿಗೆ ಆರೋಪ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರರ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುಣಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...