Homeಮುಖಪುಟಬಿಹಾರ | ಅಕ್ರಮ ಮದ್ಯ ಸೇವಿಸಿ ಮತ್ತೆ 10 ಮಂದಿ ಮೃತ; ಸಾವಿನ ಸಂಖ್ಯೆ 35ಕ್ಕೆ...

ಬಿಹಾರ | ಅಕ್ರಮ ಮದ್ಯ ಸೇವಿಸಿ ಮತ್ತೆ 10 ಮಂದಿ ಮೃತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ

- Advertisement -
- Advertisement -

ಬಿಹಾರದ ಸಿವಾನ್ ಮತ್ತು ಸರನ್ ಜಿಲ್ಲೆಗಳಲ್ಲಿ ಅಕ್ರಮ ಮದ್ಯ ಸೇವಿಸಿ ಮತ್ತೆ ಹತ್ತು ಮಂದಿ ಸಾವನ್ನಪ್ಪಿದ್ದು, ಕಳ್ಳಭಟ್ಟಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಸಿವಾನ್‌ನಲ್ಲಿ 28 ಸಾವುಗಳಾಗಿದ್ದು, ಸರನ್‌ನಲ್ಲಿ ಏಳು ಸಾವುಗಳು ವರದಿಯಾಗಿವೆ ಎಂದು ಪೊಲೀಸ್ ಉಪ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ನೀಲೇಶ್ ಕುಮಾರ್ ಶುಕ್ರವಾರ ಹೇಳಿದ್ದಾರೆ.

“ಸಿವಾನ್ ಜಿಲ್ಲೆಯ ಮಘರ್ ಮತ್ತು ಔರಿಯಾ ಪಂಚಾಯತ್‌ಗಳಲ್ಲಿ ಇದುವರೆಗೆ 28 ​​ಜನರು ಶಂಕಿತ ಅಕ್ರಮ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ. ಸರನ್ ಜಿಲ್ಲೆಯ ಮಶ್ರಖ್ ಪೊಲೀಸ್ ಠಾಣಾ ವ್ಯಾಪ್ತಿಯ ಇಬ್ರಾಹಿಂಪುರ ಪ್ರದೇಶದಲ್ಲಿ ಏಳು ಮಂದಿ ಶಂಕಿತ ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ” ಎಂದು ಡಿಐಜಿ ಶುಕ್ರವಾರ ಪಿಟಿಐಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸುಮಾರು ಎಂಟು ವರ್ಷಗಳ ಹಿಂದೆ ನಿತೀಶ್ ಕುಮಾರ್ ಸರ್ಕಾರವು ರಾಜ್ಯದಲ್ಲಿ ಮದ್ಯದ ಮಾರಾಟ ಮತ್ತು ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಈ ದುರಂತವು ಮದ್ಯ ನಿಷೇಧದ ಪರಿಣಾಮಕಾರಿತ್ವದ ಬಗ್ಗೆ ಮತ್ತಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಎರಡೂ ಜಿಲ್ಲೆಗಳಲ್ಲಿ ಜನರು ಅಕ್ರಮ ಮದ್ಯ ಸೇವಿಸಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

ಸಿವಾನ್, ಸರನ್ ಮತ್ತು ಪಾಟ್ನಾ ಜಿಲ್ಲೆಗಳ ವಿವಿಧ ಆಸ್ಪತ್ರೆಗಳಲ್ಲಿ ಎರಡೂ ಜಿಲ್ಲೆಗಳ 25 ಕ್ಕೂ ಹೆಚ್ಚು ಜನರು ಇನ್ನೂ ಜೀವಕ್ಕಾಗಿ ಹೋರಾಡುತ್ತಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.  ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಶವಪರೀಕ್ಷೆ ವರದಿ ಬಂದ ನಂತರವಷ್ಟೇ ಘಟನೆಗೆ ನಿಖರ ಕಾರಣ ತಿಳಿಯಲಿದೆ ಎಂದು ಡಿಐಜಿ ತಿಳಿಸಿದ್ದಾರೆ. ಮೃತರ ಮತ್ತು ಚಿಕಿತ್ಸೆಯಲ್ಲಿರುವವರ ಗುರುತುಗಳನ್ನು ಅಧಿಕಾರಿಗಳು ಇದುವರೆಗೆ ಬಹಿರಂಗಪಡಿಸಿಲ್ಲ.

“ಘಟನೆಯ ನಂತರ ಎರಡು ವಿಶೇಷ ತನಿಖಾ ತಂಡಗಳನ್ನು ಸಹ ರಚಿಸಲಾಗಿದೆ. ಸ್ಥಳೀಯ ಮಟ್ಟದಲ್ಲಿ ಸ್ಥಾಪಿಸಲಾದ ಈ ತಂಡವು ಇತ್ತೀಚಿನ ಘಟನೆಗಳ ಅಪರಾಧವನ್ನು ಪರಿಶೀಲಿಸುತ್ತದೆ” ಎಂದು ಪೊಲೀಸ್ ಮಹಾನಿರ್ದೇಶಕ ಅಲೋಕ್ ರಾಜ್ ಗುರುವಾರ ತಿಳಿಸಿದ್ದಾರೆ.

“ಪಾಟ್ನಾದಲ್ಲಿ ಇಲಾಖೆಯು ಮತ್ತೊಂದು ಎಸ್‌ಐಟಿಯನ್ನು ರಚಿಸಿದ್ದು, ಇದು ಇತ್ತೀಚಿನ ದಿನಗಳಲ್ಲಿ ನಡೆದಿರುವ ಇಂತಹ ಎಲ್ಲಾ ಘಟನೆಗಳ ಸಮಗ್ರ ಅಧ್ಯಯನವನ್ನು ನಡೆಸುತ್ತದೆ. ಅದರ ಆಧಾರದ ಮೇಲೆ ಕ್ರಮದ ಯೋಜನೆಯನ್ನು ರೂಪಿಸಲಾಗುವುದು” ಎಂದು ಅವರು ಹೇಳಿದ್ದಾರೆ.

ಎರಡೂ ಜಿಲ್ಲೆಗಳಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಸುಮಾರು 15 ಜನರನ್ನು ಬಂಧಿಸಿದ್ದಾರೆ. ಘಟನೆಯ ನಂತರ ಎರಡೂ ಜಿಲ್ಲಾಡಳಿತಗಳು ಮಘರ್, ಔರಿಯಾ ಮತ್ತು ಇಬ್ರಾಹಿಂಪುರ ಪ್ರದೇಶದ ಮೂವರು ಚೌಕಿದಾರರನ್ನು ಅಮಾನತುಗೊಳಿಸಿವೆ. ಕನಿಷ್ಠ ಐವರು ಪೊಲೀಸ್ ಸಿಬ್ಬಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಗುರುವಾರ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಿವಾನ್ ಮತ್ತು ಸರನ್‌ನಲ್ಲಿ ಶಂಕಿತ ಅಕ್ರಮ ಮದ್ಯೆ ಪ್ರಕರಣದ ಸಾವುಗಳ ತನಿಖೆಯ ಪ್ರಗತಿಯನ್ನು ಕೇಳಿದ್ದಾರೆ ಎಂದು ವರದಿಯಾಗಿದೆ. ಪರಿಸ್ಥಿತಿಯನ್ನು ಖುದ್ದು ನಿಗಾ ವಹಿಸಿ, ಅಪರಾಧದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಡಿಜಿಪಿಗೆ ಸಿಎಂ ಸೂಚಿಸಿದ್ದಾರೆ ಎಂದು ಅದು ಹೇಳಿದೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, “ರಾಜ್ಯದಲ್ಲಿ ಇತ್ತೀಚಿನ ಅಕ್ರಮ ಮದ್ಯ ಪ್ರಕರಣದ ಸಾವುಗಳಿಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಹೊಣೆ ಮಾಡಬೇಕು. ಇದು ಸಾಮೂಹಿಕ ಹತ್ಯೆಯಾಗಿದೆ. ಮದ್ಯ ನಿಷೇಧವನ್ನು ನಿತೀಶ್ ಕುಮಾರ್‌ ನೇತೃತ್ವದ ಸರ್ಕಾರ ಜಾರಿಗೆ ತಂದಿದ್ದರೆ ಅದನ್ನು ಸಮರ್ಥವಾಗಿ ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಆದರೆ ಅದು ನಡೆಯುತ್ತಿಲ್ಲ.” ಎಂದು ಹೇಳಿದ್ದಾರೆ.

“ಬಿಹಾರದಲ್ಲಿ ಮದ್ಯ ನಿಷೇಧವು ಸೂಪರ್ ಫ್ಲಾಪ್ ಆಗಿದೆ. ಆಡಳಿತಾರೂಢ ರಾಜಕಾರಣಿಗಳು-ಪೊಲೀಸ್ ಮತ್ತು ಲಿಕ್ಕರ್ ಮಾಫಿಯಾದ ನಡುವಿನ ಅಪವಿತ್ರ ಸಂಬಂಧದಿಂದಾಗಿ, ಬಿಹಾರದಲ್ಲಿ 30,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಅಕ್ರಮ ಮದ್ಯದ ಕಪ್ಪು ಮಾರುಕಟ್ಟೆ ಪ್ರವರ್ಧಮಾನಕ್ಕೆ ಬಂದಿದೆ” ಎಂದು ತೇಜಸ್ವಿ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹ 2 ಕೋಟಿ ಸುಲಿಗೆ ಆರೋಪ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರರ ವಿರುದ್ಧ ಎಫ್‌ಐಆರ್

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹ 2 ಕೋಟಿ ಸುಲಿಗೆ ಆರೋಪ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರರ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಮೋದಿ ಎಂಬ ರಾವಣನನ್ನು ಕೆಳಗಿಳಿಸಲು ವಾನರ ಸೇನೆ ಬಂದಿದೆ”: ದೆಹಲಿಯಲ್ಲಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಾಗ್ದಾಳಿ!

ದೇಶದಲ್ಲಿ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೂಲಕ ಸದ್ದಿಲ್ಲದೆ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲ್ಲಾಡಿಸಲಾಗುತ್ತಿದೆ ಎಂಬ ಆರೋಪಗಳ ನಡುವೆ, ರಾಜಧಾನಿ ನವದೆಹಲಿ ಬೃಹತ್ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಯಿತು. 'ಇಂಡಿಯಾ' (INDIA) ಒಕ್ಕೂಟ...

ಕರ್ನಾಟಕ SIR | ಎರಡು ಫಾರಂ-6 ಹಾಕಿದ ವ್ಯಕ್ತಿಗೆ 5 ವೋಟರ್ ಐಡಿ ನೀಡಿದ ಚು. ಆಯೋಗ!

ವಿಶೇಷ ತೀವ್ರ ಪರಿಷ್ಕರಣೆಯ ಬಳಿಕ ಕರ್ನಾಟಕದ ಮತದಾರರ ಪಟ್ಟಿ ಶುದ್ದವಾಗಿದೆ. ಅನರ್ಹ ಮತದಾರರ ಹೆಸರುಗಳನ್ನು ತೆಗೆದು ಹಾಕಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಒ) ಅನ್ಬುಕುಮಾರ್ ಪ್ರತಿಪಾದಿಸುತ್ತಿದ್ದಾರೆ. ಆದರೆ, ಅಕ್ಟೋಬರ್ 27ರಂದು ಅಂತಿಮ...

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್: ವಿಡಿಯೋ ಅಪ್‌ಲೋಡ್‌ಗೆ ಬಳಸಿದ ಫೋನ್ ಕುಮಾರಸ್ವಾಮಿ ದೆಹಲಿ ನಿವಾಸದಲ್ಲಿ ಹಸ್ತಾಂತರ: ಬೆಂಗಳೂರು ಪೊಲೀಸ್ ಆಯುಕ್ತರ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದಂತೆ ವೈರಲ್ ಆಗಿದ್ದ ವಿವಾದಾತ್ಮಕ ‘ಸ್ಟಿಂಗ್ ಆಪರೇಷನ್’ ವಿಡಿಯೊವನ್ನು ಅಪ್‌ಲೋಡ್ ಮಾಡಲು ಬಳಸಿದ್ದ ಮೊಬೈಲ್ ಫೋನ್ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನವದೆಹಲಿಯ ಅಧಿಕೃತ ನಿವಾಸದಲ್ಲಿ...

‘ಗ್ಯಾನೇಶ್ ಕುಮಾರ್ ನಂತರ ನಿಮ್ಮ ಸರದಿ’: ಮತಗಳ್ಳತನಕ್ಕೆ ಮೋದಿ, ಅಮಿತ್ ಶಾ ಕೂಡ ಕಾನೂನು ಕ್ರಮ ಎದುರಿಸಬೇಕಾಗುತ್ತದೆ; ರಾಹುಲ್ ಗಾಂಧಿ ಎಚ್ಚರಿಕೆ

ನವದೆಹಲಿ: ಮತಗಳ್ಳತನದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ನಂತರ...

‘ಅಗತ್ಯಬಿದ್ದರೆ ನಿಮ್ಮನ್ನು ನೆಲದಿಂದಲೇ ಕಿತ್ತು ಹಾಕುತ್ತೇವೆ’: ಸಿಇಸಿ ಗ್ಯಾನೇಶ್ ಕುಮಾರ್‌ಗೆ ಖರ್ಗೆ ಎಚ್ಚರಿಕೆ; ಹೋರಾಟ ಮುಂದುವರಿಸುವ ಪ್ರತಿಜ್ಞೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆ ಪಡೆಯುವವರೆಗೂ ವಿರೋಧ ಪಕ್ಷಗಳ ಹೋರಾಟ ನಿಲ್ಲುವುದಿಲ್ಲ. ಅಗತ್ಯ ಬಿದ್ದರೆ ನಿಮ್ಮನ್ನು ನೆಲದಿಂದಲೇ ಕಿತ್ತು ಹಾಕುತ್ತೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ...

ಕನ್ನಾಟ್ ಪ್ಲೇಸ್‌ನಲ್ಲಿ ಬಿಜೆಪಿ ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಿದೆ; ವ್ಯಾಪಾರಿಗಳಿಗೆ ನಷ್ಟ ಉಂಟುಮಾಡುತ್ತಿದೆ: ರಾಹುಲ್ ಗಾಂಧಿ ಆರೋಪ

ನವದೆಹಲಿ: ಚುನಾವಣಾ ಅಕ್ರಮಗಳು ಮತ್ತು ಮತದಾರರ ಹಕ್ಕುಗಳ ಮೇಲಿನ ದಾಳಿಯ ವಿರುದ್ಧ ಇಂಡಿಯಾ ಬ್ಲಾಕ್ ನಡೆಸುತ್ತಿರುವ ಬೃಹತ್ ‘ಚಲೋ ದಿಲ್ಲಿ’ ಪ್ರತಿಭಟನೆಗೆ ರಾಷ್ಟ್ರ ರಾಜಧಾನಿಯಲ್ಲಿ ಜನಸಾಗರವೇ ಹರಿದುಬಂದಿದೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಭಾನುವಾರ...

ಸಿಇಸಿ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಬ್ಲಾಕ್ ಪ್ರತಿಭಟನೆ: ಮೋದಿ, ಅಮಿತ್ ಶಾಗೆ ಇದು ಕಠಿಣ ಎಚ್ಚರಿಕೆ; ಕೆ.ಸಿ. ವೇಣುಗೋಪಾಲ್

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಬ್ಲಾಕ್ ಆಯೋಜಿಸಿರುವ ಬೃಹತ್ ಪ್ರತಿಭಟನಾ ರ್ಯಾಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ...

ಇಂಡಿಯಾ ಬ್ಲಾಕ್‌ನ ‘ಚಲೋ ದಿಲ್ಲಿ’ಗೆ ವೇದಿಕೆ ಸಜ್ಜು; ದೆಹಲಿಯಾದ್ಯಂತ ರಾರಾಜಿಸುತ್ತಿರುವ ಪ್ರತಿಭಟನೆಯ ಪೋಸ್ಟರ್‌ಗಳು 

ನವದೆಹಲಿ: ಚುನಾವಣಾ ಅಕ್ರಮಗಳು ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂಡಿಯಾ ಬ್ಲಾಕ್ ಆಯೋಜಿಸಿರುವ...

ನ್ಯಾಯಾಂಗದ ವಿರುದ್ಧ ಟೀಕೆ ಆರೋಪ: ಸಿಜೆಪಿ ವಕ್ತಾರ ಸೌರವ್ ದಾಸ್ ವಿರುದ್ಧ ತನಿಖೆಗೆ ಮದ್ರಾಸ್ ಹೈಕೋರ್ಟ್‌ನಲ್ಲಿ ಪಿಐಎಲ್

ಚೆನ್ನೈ: ಭಾರತದ ನ್ಯಾಯಾಂಗ, ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್‌ನ ಇತರ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್...

ಕರ್ನಾಟಕ ಎಸ್‌ಐಆರ್: 192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳು ಡಿಲೀಟ್; 2028ಕ್ಕೆ ಯಾರಿಗೆ ಅಧಿಕಾರ?

ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. 2026ರ ಅಕ್ಟೋಬರ್ 27ರಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಅಂತಿಮ ಮತದಾರರ...