ಮುಂಬರುವ ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಸೀಟು ಹಂಚಿಕೆ ಕುರಿತು ಎನ್‌ಡಿಎ ಒಮ್ಮತಕ್ಕೆ ಬಂದಿದೆ ಎಂದು ವರದಿಯಾಗಿದ್ದು, ರಾಂಚಿಯ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಮತ್ತು ಜಾರ್ಖಂಡ್‌ನ ಸಹ ಚುನಾವಣಾ ಉಸ್ತುವಾರಿಯು ಆಗಿರುವ ಹಿಮಂತ ಬಿಸ್ವಾ ಶರ್ಮಾ ಈ ಬಗ್ಗೆ ಘೋಷಿಸಿದ್ದಾರೆ. ಜಾರ್ಖಂಡ್ ಚುನಾವಣೆ
ಎನ್‌ಡಿಎ ನೇತೃತ್ವದ ಮೈತ್ರಿಯಲ್ಲಿ ಎಜೆಎಸ್‌ಯು 10 ಸ್ಥಾನಗಳಲ್ಲಿ, ಜೆಡಿಯು 2 ಸ್ಥಾನ, ಎಲ್‌ಜೆಪಿ 1 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಹಿಮಂತ ಶರ್ಮಾ ಘೋಷಿಸಿದ್ದು, ಉಳಿದ 68 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ ಎಂದು ಅವರು ತಿಳಿಸಿದ್ದಾರೆ. ನಾಮ ಪತ್ರ ಸಲ್ಲಿಸುವ ಅಂತಿಮ ದಿನಾಂಕದ ಮೊದಲು ಪರಿಸ್ಥಿತಿಯನ್ನು ಅವಲಂಬಿಸಿ ಒಂದು ಅಥವಾ ಎರಡು ಸ್ಥಾನಗಳಿಗೆ ಕೊನೆಯ ಕ್ಷಣದ ಬದಲಾವಣೆಗಳೂ ಸಂಭವಿಸಬಹುದು ಎಂದು ಅವರು ಹೇಳಿದ್ದಾರೆ. ಜಾರ್ಖಂಡ್ ಚುನಾವಣೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಅಭ್ಯರ್ಥಿಗಳ ಘೋಷಣೆ ಕುರಿತು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ‘‘ಅದರ ಬಗ್ಗೆ ಕೂಡಾ ಶೀಘ್ರದಲ್ಲೆ, ಒಂದು ಅಥವಾ ಎರಡು ದಿನಗಳಲ್ಲಿ ತೀರ್ಮಾನಿಸಲಾಗುವುದು’’ ಎಂದು ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಮತ್ತು ಎಜೆಎಸ್‌ಯು ಮುಖ್ಯಸ್ಥ ಸುದೇಶ್ ಮಹತೋ ಉಪಸ್ಥಿತರಿದ್ದರು.
ಈ ಹಿಂದೆ, ಕೇಂದ್ರ ಸಚಿವ ಮತ್ತು ಜಾರ್ಖಂಡ್ ಚುನಾವಣಾ ಉಸ್ತುವಾರಿ ಶಿವರಾಜ್ ಸಿಂಗ್ ಚೌಹಾಣ್, ಬಿಜೆಪಿ, ಎಜೆಎಸ್‌ಯು, ಜೆಡಿಯು ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ಎನ್‌ಡಿಎ ಮೈತ್ರಿಯ ಅಡಿಯಲ್ಲಿ ಒಟ್ಟಾಗಿ ಚುನಾವಣೆಗಳನ್ನು ಎದುರಿಸಲಿವೆ ಮತ್ತು ಜಂಟಿಯಾಗಿ ಪ್ರಚಾರ ಮಾಡಲಿವೆ ಎಂದು ಖಚಿತಪಡಿಸಿದ್ದಾರೆ.
2024 ರ ಜಾರ್ಖಂಡ್ ವಿಧಾನಸಭಾ ಚುನಾವಣೆಯು ನವೆಂಬರ್ 13 ಮತ್ತು 20 ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.
ಇದನ್ನೂ ಓದಿ: ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿಗೆ ಅಗೌರವ; ಐಪಿಎಸ್ ಅಧಿಕಾರಿ ಪಾಂಡಿಯನ್ ವಿರುದ್ಧ ದಲಿತರ ಪ್ರತಿಭಟನೆ
ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿಗೆ ಅಗೌರವ; ಐಪಿಎಸ್ ಅಧಿಕಾರಿ ಪಾಂಡಿಯನ್ ವಿರುದ್ಧ ದಲಿತರ ಪ್ರತಿಭಟನೆ


