Homeಮುಖಪುಟಹಣ ಅಕ್ರಮ ವರ್ಗಾವಣೆ ಪ್ರಕರಣ | 2 ವರ್ಷಗಳ ನಂತರ ಎಎಪಿ ನಾಯಕ ಸತ್ಯೇಂದ್ರ ಜೈನ್‌ಗೆ...

ಹಣ ಅಕ್ರಮ ವರ್ಗಾವಣೆ ಪ್ರಕರಣ | 2 ವರ್ಷಗಳ ನಂತರ ಎಎಪಿ ನಾಯಕ ಸತ್ಯೇಂದ್ರ ಜೈನ್‌ಗೆ ಜಾಮೀನು

- Advertisement -
- Advertisement -

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಎಎಪಿ ನಾಯಕ, ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ದೆಹಲಿ ನ್ಯಾಯಾಲಯವು ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಪ್ರಕಣದ ವಿಚಾರಣೆಯು ವಿಳಂಬವಾಗುತ್ತಿದ್ದು, ಜೊತೆಗೆ ಆರೋಪಿ ದೀರ್ಘ ಕಾಲದಿಂದ ಸೆರೆವಾಸದಲ್ಲಿದ್ದಾರೆ ಎಂಬ ವಿಚಾರವನ್ನು ನ್ಯಾಯಾಲಯ ಉಲ್ಲೇಖಿಸಿದೆ.

ಸತ್ಯೇಂದ್ರ ಜೈನ್ ಅವರಿಗೆ ಸಂಬಂಧಿಸಿರುವ ನಾಲ್ಕು ಕಂಪನಿಗಳ ಮೂಲಕ ಹಣ ಅಕ್ರಮ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ 2022ರ ಮೇ 30ರಂದು ಜಾರಿ ನಿರ್ದೇಶನಾಲಯ (ಇಡಿ) ಅವರನ್ನು ಬಂಧಿಸಿತ್ತು. ಅಂದಿನಿಂದ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದಾಗ್ಯೂ, ಅವರು 2023ರ ಮೇ ಮತ್ತು 2024ರ ಮಾರ್ಚ್ ನಡುವೆ ವೈದ್ಯಕೀಯ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ವಿಚಾರಣೆಯಲ್ಲಿನ ವಿಳಂಬ ಮತ್ತು 18 ತಿಂಗಳ ಸುದೀರ್ಘ ಸೆರೆವಾಸವನ್ನು ಪರಿಗಣಿಸಿ ಮತ್ತು ಪ್ರಕರಣದ ತನಿಖೆ ಪ್ರಾರಂಭಿಸಲು ಬಹಳ ಸಮಯ ತೆಗೆದುಕೊಳ್ಳುತ್ತದೆ ಎಂಬ ಅಂಶವನ್ನು ಪರಿಗಣಿಸಿ ಈ ತೀರ್ಮಾನಕ್ಕೆ ಬಂದಿದ್ದು, ಆರೋಪಿಯು ಜಾಮೀನಿಗೆ ಅರ್ಹರಾಗಿದ್ದಾರೆ” ಎಂದು ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಹೇಳಿದ್ದಾರೆ.

ಅಷ್ಟೇ ಮೊತ್ತದ ಇಬ್ಬರ ಶ್ಯೂರಿಟಿಯೊಂದಿಗೆ 50,000 ರೂಪಾಯಿ ಜಾಮೀನಿನ ಮೇಲೆ ನ್ಯಾಯಾಧೀಶರು  ಜಾಮೀನು ಮಂಜೂರು ಮಾಡಿದ್ದಾರೆ. ಭ್ರಷ್ಟಾಚಾರ ತಡೆ ಕಾಯಿದೆಯಡಿ 2017ರಲ್ಲಿ ಕೇಂದ್ರೀಯ ತನಿಖಾ ದಳವು(ಸಿಬಿಐ) ಸತ್ಯೇಂದ್ರ ಜೈನ್ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಹಿನ್ನೆಲೆಯಲ್ಲಿ ಇಡಿ ಪ್ರಕರಣದ ದಾಖಲಿಸಿತ್ತು.

ವಿಚಾರಣಾ ನ್ಯಾಯಾಲಯವು ಈ ಹಿಂದೆ 2022ರ ನವೆಂಬರ್ 17ರಂದು ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ನಂತರ ಅವರು ದೆಹಲಿ ಹೈಕೋರ್ಟ್‌ನಲ್ಲಿ ಆದೇಶವನ್ನು ಪ್ರಶ್ನಿಸಿದ್ದರು. 2023ರ ಏಪ್ರಿಲ್‌ನಲ್ಲಿ ಹೈಕೋರ್ಟ್ ಅವರ ಮನವಿಯನ್ನು ತಿರಸ್ಕರಿಸಿತು. ಈ ವರ್ಷದ ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್ ಕೂಡಾ ಅವರಿಗೆ ಜಾಮೀನು ನಿರಾಕರಿಸಿತ್ತು.

ಇದನ್ನೂ ಓದಿ: ಛತ್ತೀಸ್‌ಗಢ | ‘ಹಸ್‌ದೇವ್ ಅರಣ್ಯ’ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ

ಛತ್ತೀಸ್‌ಗಢ | ‘ಹಸ್‌ದೇವ್ ಅರಣ್ಯ’ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....