ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಶೋಧ ನಡೆಸಿದೆ ಎಂದು ವರದಿಯಾಗಿದೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಸದಸ್ಯರು ಮತ್ತು ಇತರ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.ಮುಡಾ ಕಚೇರಿ
20 ಕ್ಕೂ ಹೆಚ್ಚು ಇಡಿ ಅಧಿಕಾರಿಗಳ ತಂಡ, ಕೇಂದ್ರ ಅರೆಸೇನಾ ಪಡೆಗಳೊಂದಿಗೆ ಮೈಸೂರಿನ ಮುಡಾ ಕಚೇರಿ ಮತ್ತು ಇತರ ಸ್ಥಳಗಳಲ್ಲಿ ದಾಳಿ ನಡೆಸಿ, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಮುಡಾ ವ್ಯಾಪ್ತಿಯಲ್ಲಿ ನಡೆದ ₹5,000 ಕೋಟಿ ಅವ್ಯವಹಾರ ಸೇರಿದಂತೆ ದೊಡ್ಡ ಪ್ರಮಾಣದ ಅವ್ಯವಹಾರ ನಡೆದಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಮುಖ್ಯಮಂತ್ರಿ ಸೇರಿದಂತೆ ಹಿರಿಯ ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ ದೂರಿನಂತೆ ಇಡಿ ಈ ತನಿಖೆ ನಡೆಸುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ. ಮುಡಾ ಕಚೇರಿ
ಈ ದಾಳಿಯು ಸಿಎಂ ಸಿದ್ದರಾಮಯ್ಯ ಅಥವಾ ಅವರ ಕುಟುಂಬಕ್ಕೆ ಸೇರಿದ ಯಾವುದೇ ನಿವೇಶನಗಳನ್ನು ಒಳಗೊಂಡಿಲ್ಲವಾದರೂ, ಮುಖ್ಯಮಂತ್ರಿ ಮತ್ತು ಇತರರನ್ನು ಈ ಹಿಂದೆ ಇಡಿ ಸಲ್ಲಿಸಿದ ಎಫ್‌ಐಆರ್‌ಗೆ ಸಮಾನವಾದ ಜಾರಿ ಪ್ರಕರಣ ಮಾಹಿತಿ ವರದಿಯಲ್ಲಿ (ಇಸಿಐಆರ್) ಹೆಸರಿಸಲಾಗಿತ್ತು. ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಇತ್ತೀಚೆಗೆ ಲೋಕಾಯುಕ್ತ ಎಫ್‌ಐಆರ್ ದಾಖಲಿಸಿದ ನಂತರ ಇಡಿ ಇಸಿಐಆರ್ ದಾಖಲಿಸಿತ್ತು.
ಸೆಪ್ಟೆಂಬರ್ 27ರಂದು ದಾಖಲಾಗಿರುವ ಲೋಕಾಯುಕ್ತ ಎಫ್‌ಐಆರ್‌ನಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಬಿಎಂ ಪಾರ್ವತಿ ಅವರಿಗೆ ನೀಡಿದ್ದ 14 ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. ಎಫ್‌ಐಆರ್‌ನಲ್ಲಿ ಸಿದ್ದರಾಮಯ್ಯ ಅವರ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ಹೆಸರನ್ನೂ ಹೆಸರಿಸಲಾಗಿದೆ. ಮಲ್ಲಿಕಾರ್ಜುನ ಸ್ವಾಮಿ ಅವರು ಭೂಮಿ ಖರೀದಿಸಿ ನಂತರ ಅದನ್ನು ಪಾರ್ವತಿ ಅವರಿಗೆ ಉಡುಗೊರೆಯಾಗಿ ನೀಡಿದ್ದರು.
ಆರೋಪಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು ತಾನು ಯಾವುದೇ ತಪ್ಪೆಸಗಿಲ್ಲ ಎಂದು ಪ್ರತಿಪಾದಿಸಿದ್ದು, ಪ್ರತಿಪಕ್ಷಗಳು ನನ್ನನ್ನು ಕಂಡು ಹೆದರಿದ್ದಾರೆ ಎಂದು ಆರೋಪಿಸಿದ್ದಾರೆ. ಇದು ನನ್ನ ವಿರುದ್ಧ ಇದೇ ಮೊದಲ ರಾಜಕೀಯ ಪ್ರಕರಣವಾಗಿದೆ ಎಂದು ಅವರು ಹೇಳಿದ್ದಾರೆ. ಇಡಿ ತನ್ನ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಯ ನಿಬಂಧನೆಗಳನ್ನು ಸಹ ಸೇರಿಸಿದ್ದು, ಲೋಕಾಯುಕ್ತದಿಂದ ಸಮಾನಾಂತರ ತನಿಖೆಯೊಂದಿಗೆ ತನಿಖೆಗಳು ಮುಂದುವರಿಯುತ್ತವೆ.
ಇದನ್ನೂ ಓದಿ: ಹಣ ಅಕ್ರಮ ವರ್ಗಾವಣೆ ಪ್ರಕರಣ | 2 ವರ್ಷಗಳ ನಂತರ ಎಎಪಿ ನಾಯಕ ಸತ್ಯೇಂದ್ರ ಜೈನ್‌ಗೆ ಜಾಮೀನು
ಹಣ ಅಕ್ರಮ ವರ್ಗಾವಣೆ ಪ್ರಕರಣ | 2 ವರ್ಷಗಳ ನಂತರ ಎಎಪಿ ನಾಯಕ ಸತ್ಯೇಂದ್ರ ಜೈನ್‌ಗೆ ಜಾಮೀನು


