Homeಮುಖಪುಟನಾಡಗೀತೆ ವಿವಾದ | ತಮಿಳುನಾಡು ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ಕೇಂದ್ರಕ್ಕೆ ಸ್ಟಾಲಿನ್ ಆಗ್ರಹ

ನಾಡಗೀತೆ ವಿವಾದ | ತಮಿಳುನಾಡು ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ಕೇಂದ್ರಕ್ಕೆ ಸ್ಟಾಲಿನ್ ಆಗ್ರಹ

- Advertisement -
- Advertisement -

ತಮಿಳುನಾಡು ರಾಜ್ಯಪಾಲ ಆರ್‌ಎನ್‌ ರವಿ ಮುಖ್ಯ ಅಥಿಯಾಗಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನಾಡಗೀತೆ (ತಮಿಳ್‌ ತಾಯಿ ವಝುತ್ತು) ಹಾಡುವಾಗ, ಅದರಲ್ಲಿನ ‘ದ್ರಾವಿಡ’ ಪದವಿರುವ ವಾಕ್ಯವನ್ನು ಕೈ ಬಿಟ್ಟಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಶುಕ್ರವಾರ (ಅ.18) ಚೆನ್ನೈನ ದೂರದರ್ಶನ ಕೇಂದ್ರದಲ್ಲಿ ‘ಹಿಂದಿ ಮಾಸಾಚಾರಣೆಯ ಸಮಾರೋಪ ಕಾರ್ಯಕ್ರಮ’ದಲ್ಲಿ ತಮಿಳು ನಾಡಗೀತೆ ಹಾಡುವಾಗ, ಅದರಲ್ಲಿನ ದ್ರಾವಿಡ ನೆಲದ ಹಿರಿಮೆಯನ್ನು ಉಲ್ಲೇಖಿಸುವ ‘ತೆಕ್ಕನಮುಮುಂ ಅಧಿರ್‌ಸಿರಂಧ ದ್ರಾವಿಡ ನಾಲ್ ತಿರುನಾಡುಂ” ಎಂಬ ವಾಕ್ಯವನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆ ಎಂದು ಆರೋಪಿಸಲಾಗಿದೆ.

ತಮಿಳುನಾಡು ಸರ್ಕಾರ ಮತ್ತು ಅಲ್ಲಿನ ಜನರ ವಿರುದ್ದ ಭಾವನೆ ಹೊಂದಿರುವ ರಾಜ್ಯಪಾಲರು ಬೇಕಂತಲೇ ದ್ರಾವಿಡ ಪದ ತೆಗೆಸಿದ್ದಾರೆ ಎಂದು ಅನೇಕರು ಆರೋಪಿಸಿದ್ದಾರೆ. ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಿ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

“ರಾಜ್ಯಪಾಲ ರವಿ ಅವರು ರಾಷ್ಟ್ರಗೀತೆಯಿಂದ ಒಂದು ವಾಕ್ಯ ಅಥವಾ ಪದವನ್ನು ಬಿಟ್ಟು ಬಿಡುವ ಧೈರ್ಯ ಮಾಡುತ್ತಾರೆಯೇ? ಎಂದು ಪ್ರಶ್ನಿಸಿರುವ ಸಿಎಂ ಸ್ಟಾಲಿನ್, ನಾಡ ಗೀತೆಯಿಂದ ‘ದ್ರಾವಿಡ’ ಪದವಿರುವ ಸಾಲನ್ನು ಕೈ ಬಿಟ್ಟಿರುವುದು ತಮಿಳುನಾಡು ಮತ್ತು ತಮಿಳು ಭಾಷೆಗೆ ಮಾಡಿದ ಅವಮಾನ. ರಾಜ್ಯಪಾಲ ರವಿ ಅವರಿಗೆ ‘ದ್ರಾವಿಡ ಅಲರ್ಜಿ’ ಇದೆ” ಎಂದಿದ್ದಾರೆ.

“ದ್ರಾವಿಡ’ ಪದವನ್ನು ಕೈ ಬಿಟ್ಟು ತಮಿಳು ನಾಡಗೀತೆ ಹಾಡುವುದು ತಮಿಳುನಾಡಿನ ಕಾನೂನಿಗೆ ವಿರುದ್ಧವಾಗಿದೆ. ಕಾನೂನಿನ ಪ್ರಕಾರ ನಡೆಯದೆ, ತನ್ನ ಇಚ್ಛೆಗೆ ತಕ್ಕಂತೆ ವರ್ತಿಸುವ ವ್ಯಕ್ತಿಯು ರಾಜ್ಯಪಾಲ ಹುದ್ದೆಯನ್ನು ಅಲಂಕರಿಸಲು ಯೋಗ್ಯನಲ್ಲ. ಭಾರತವನ್ನು ಆಚರಿಸುವ ನೆಪದಲ್ಲಿ, ರಾಜ್ಯಪಾಲರು ದೇಶದ ಏಕತೆ ಮತ್ತು ಈ ನೆಲದಲ್ಲಿ ವಾಸಿಸುವ ವಿವಿಧ ಜನಾಂಗದ ಜನರನ್ನು ಅವಮಾನಿಸುತ್ತಿದ್ದಾರೆ” ಎಂದು ಸ್ಟಾಲಿನ್ ಕಿಡಿಕಾರಿದ್ದಾರೆ.

ಎಲ್ಲೆಡೆಯಿಂದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಪ್ರಕಟಣೆ ಹೊರಡಿಸಿರುವ ರಾಜ್ಯಪಾಲ ಕಚೇರಿ “ರಾಜ್ಯಪಾಲರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಷ್ಟೆ, ನಾಡಗೀತೆಯಿಂದ ಒಂದು ಸಾಲು ಕೈಬಿಟ್ಟಿರುವ ವಿಷಯದಲ್ಲಿ ಅವರ ಪಾತ್ರವೇನು ಇಲ್ಲ. ರಾಜ್ಯಪಾಲರು ತಮಿಳುನಾಡು ಮತ್ತು ಇಲ್ಲಿನ ಜನರ ಮೇಲೆ ಉನ್ನತ ಗೌರವನ್ನು ಹೊಂದಿದ್ದಾರೆ. ಅದನ್ನು ಉಳಿಸಿಕೊಳ್ಳಲಿದ್ದಾರೆ” ಎಂದಿದೆ.

ಸಿಎಂ ಸ್ಟಾಲಿನ್ ವಿರುದ್ದ ರಾಜ್ಯಪಾಲ ರವಿ ಕಿಡಿಕಾರಿದ್ದು, ಅವರನ್ನು ‘ಜನಾಂಗೀಯ ವಾದಿ’ ಎಂದು ಕರೆದಿದ್ದಾರೆ. “ನಾನು ಪ್ರತಿ ಕಾರ್ಯಕ್ರಮಗಳಲ್ಲಿ ತಮಿಳು ನಾಡಗೀತೆಯನ್ನು ಸಂಪೂರ್ಣವಾಗಿ ಹಾಡಿಸುತ್ತೇನೆ. ದೂರದರ್ಶನದ ಕಾರ್ಯಕ್ರಮದಲ್ಲಿ ‘ದ್ರಾವಿಡ’ ಪದ ಕೈ ಬಿಡಲಾಗಿದೆ ಎಂದು ಸಿಎಂ ಸುಳ್ಳಾರೋಪ ಮಾಡಿದ್ದಾರೆ. ನನಗೆ ತಮಿಳು ನಾಡಗೀತೆಯ ಬಗ್ಗೆ ಗೌರವ ಇದೆ” ಎಂದಿದ್ದಾರೆ.

ಹಿಂದಿ ಮಾಸಾಚರಣೆಗೆ ಸ್ಟಾಲಿನ್ ಖಂಡನೆ 

ಚೆನ್ನೈ ದೂರದರ್ಶನದ ಸುವರ್ಣ ಮಹೋತ್ಸವದ ಜೊತೆ ಹಿಂದಿ ಮಾಸಾಚರಣೆ ಸಮಾರೋಪ ಸಮಾರಂಭ ಆಯೋಜಿಸಿದ್ದನ್ನು ಕೂಡ ಸಿಎಂ ಎಂ.ಕೆ ಸ್ಟಾಲಿನ್ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಪ್ರಧಾನಿ ಮೋದಿಯವರಿಗೆ ಟ್ಯಾಗ್‌ ಮಾಡಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಸ್ಟಾಲಿನ್ “ಚೆನ್ನೈ ದೂರದರ್ಶನದ ಸುವರ್ಣ ಮಹೋತ್ಸವದ ಸಂಭ್ರಮಾಚರಣೆಯ ಜೊತೆಗೆ ಹಿಂದಿ ತಿಂಗಳ ಸಮಾರೋಪ ಸಮಾರಂಭ ಆಯೋಜಿಸಿದ್ದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.

ಮಾನ್ಯ ಪ್ರಧಾನಿಯವರೇ..ಭಾರತದ ಸಂವಿಧಾನವು ಯಾವುದೇ ಭಾಷೆಗೆ ರಾಷ್ಟ್ರೀಯ ಭಾಷಾ ಸ್ಥಾನಮಾನವನ್ನು ನೀಡಿಲ್ಲ. ಬಹುಭಾಷಾ ರಾಷ್ಟ್ರದಲ್ಲಿ, ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ಮಾಸವನ್ನು ಆಚರಿಸುವುದು ಇತರ ಭಾಷೆಗಳನ್ನು ಕೀಳಾಗಿ ಕಾಣುವ ಪ್ರಯತ್ನವಾಗಿದೆ.

ಆದ್ದರಿಂದ, ಹಿಂದಿಯೇತರ ರಾಜ್ಯಗಳಲ್ಲಿ ಇಂತಹ ಹಿಂದಿ ಆಧಾರಿತ ಕಾರ್ಯಕ್ರಮಗಳನ್ನು ನಡೆಸುವುದನ್ನು ನಿಲ್ಲಿಸಿ, ಬದಲಿಗೆ ಆಯಾ ರಾಜ್ಯಗಳಲ್ಲಿ ಸ್ಥಳೀಯ ಭಾಷಾ ತಿಂಗಳ ಆಚರಣೆಯನ್ನು ಪ್ರೋತ್ಸಾಹಿಸಬೇಕು ಎಂದು ನಾನು ಸಲಹೆ ನೀಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ : ಮಹಿಳೆಯರ ಅಕ್ರಮ ಬಂಧನ ಆರೋಪ : ಇಶಾ ಫೌಂಡೇಶನ್ ವಿರುದ್ದದ ಪ್ರಕರಣ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...