Homeಕರ್ನಾಟಕರಾಹುಲ್ ಗಾಂಧಿ, ಸಿದ್ದರಾಮಯ್ಯ ಅವಹೇಳನ ಆರೋಪ : ಯತ್ನಾಳ್ ವಿರುದ್ಧ ಎಫ್‌ಐಆರ್

ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವಹೇಳನ ಆರೋಪ : ಯತ್ನಾಳ್ ವಿರುದ್ಧ ಎಫ್‌ಐಆರ್

- Advertisement -
- Advertisement -

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಝಮೀರ್ ಅಹ್ಮದ್ ಖಾನ್ ವಿರುದ್ಧ ಅವಾಚ್ಯ ಶಬ್ಧ ಬಳಕೆ ಮಾಡಿದ ಆರೋಪದಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಇತರರ ವಿರುದ್ಧ ವಿಜಯಪುರ ನಗರದ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ವಿಜಯಪುರ ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯ ಪರಶುರಾಮ ಹೊಸಮಿ ಎಂಬವರು ನೀಡಿದ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

“ಯತ್ನಾಳ್ ಮತ್ತು ಇತರರು ಹಿಂದೂ-ಮುಸ್ಲಿಮರ ನಡುವೆ ಗಲಭೆ ಸೃಷ್ಟಿಸುವ ಉದ್ದೇಶದಿಂದ ಭಾಷಣ ಮಾಡಿದ್ದು, ಕೋಮುಗಲಭೆ ಆಗುವ ಲಕ್ಷಣಗಳು ಕಂಡು ಬರುತ್ತಿವೆ. ಭಯದ ವಾತಾವರಣ ಮೂಡಿಸಿದ ಕಾರಣ ಶಾಸಕ ಯತ್ನಾಳ್ ಹಾಗೂ ವೇದಿಕೆ ಮೇಲಿದ್ದ ಇತರರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಪರಶುರಾಮ ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಖಾಸಗಿ ಸುದ್ದಿ ವಾಹಿನಿಯ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರವಾದ ಯತ್ನಾಳ್ ಭಾಷಣ ಕೇಳಿ ಪರಶುರಾಮ ಅವರು ದೂರು ಕೊಟ್ಟಿದ್ದಾರೆ. ದೂರು ಆಧರಿಸಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ ಯು/ಎಸ್‌-352(3) ಅಡಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ : ಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹ 2 ಕೋಟಿ ಸುಲಿಗೆ ಪ್ರಕರಣ : ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...