ಮುಂದಿನ ತಿಂಗಳು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಒಂದೆರಡು ಸ್ಥಾನಗಳಲ್ಲಿಆಮ್ ಆದ್ಮಿ ಪಕ್ಷ (ಎಎಪಿ) ಸ್ಪರ್ಧಿಸುವ ಬಗ್ಗೆ ಯೋಜಿಸುತ್ತಿದೆ ಎಂದು ಪಕ್ಷವೂ ಹೇಳಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ವಿರೋಧ ಪಕ್ಷದ ಇಂಡಿಯಾ ಒಕ್ಕೂಟದ ಭಾಗವಾಗಿದೆ. ಮಹಾರಾಷ್ಟ್ರ ಚುನಾವಣೆ
ಮಹಾರಾಷ್ಟ್ರದಲ್ಲಿ ಇಂಡಿಯಾ ಒಕ್ಕೂಟದ ಮೂರು ಪಕ್ಷಗಳಾದ ಶಿವಸೇನೆ (ಯುಬಿಟಿ), ಕಾಂಗ್ರೆಸ್ ಮತ್ತು ಎನ್‌ಸಿಪಿ (ಎಸ್‌ಪಿ) ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ವಿರುದ್ಧ ಮಹಾ ವಿಕಾಸ್ ಅಘಾಡಿ (ಎಂವಿಎ) ಎಂಬ ಮೈತ್ರಿ ಮಾಡಿಕೊಂಡು ಚುನಾವಣೆಗಳನ್ನು ಎದುರಿಸುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಮಹಾರಾಷ್ಟ್ರದ ಕರಾವಳಿ ಸಿಂಧುದುರ್ಗ ಜಿಲ್ಲೆಯ ಕುಡಾಲ್‌ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಎಪಿಯ ಗೋವಾ ಘಟಕದ ಅಧ್ಯಕ್ಷ ಅಮಿತ್ ಪಾಲೇಕರ್, ಕೊಂಕಣ ಪ್ರದೇಶಗಳಲ್ಲಿ ವಿಶೇಷವಾಗಿ ಸಿಂಧುದುರ್ಗ ಮತ್ತು ರತ್ನಗಿರಿ ಜಿಲ್ಲೆಗಳಲ್ಲಿ ಹಾಗೂ ಪಶ್ಚಿಮ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ಚುನಾವಣೆ
ಕೊಂಕಣ ಪ್ರದೇಶದಲ್ಲಿ ಪಕ್ಷವು ಗಣನೀಯವಾಗಿ ಬೆಳೆದಿದ್ದು, ಸ್ಥಳೀಯ ಜನರು ಬಿಜೆಪಿಯ ಕೇಂದ್ರ ಸಚಿವ ನಾರಾಯಣ ರಾಣೆ ಮತ್ತು ಅವರ “ಸೆಡಿನ ರಾಜಕೀಯ”ಕ್ಕೆ ಪರ್ಯಾಯಗಳನ್ನು ಎದುರು ನೋಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
“ನವೆಂಬರ್ 20 ರ ಮಹಾರಾಷ್ಟ್ರ ಚುನಾವಣೆಯಲ್ಲಿ ಎಎಪಿ ಇಂಡಿಯಾ ಒಕ್ಕೂಟದ ಮಿತ್ರಪಕ್ಷಗಳೊಂದಿಗೆ ಗಟ್ಟಿಯಾಗಿದ್ದು ನಿಂತಿದ್ದು, ರಾಜಕೀಯ ಬೆಳವಣಿಗೆಗಳನ್ನು ಗಮನಿಸಿ ಪಕ್ಷವು ಗೆಲ್ಲಬಹುದಾದ ಒಂದೆರಡು ಸ್ಥಾನಗಳಲ್ಲಿ ಸ್ಪರ್ಧಿಸುವ ಬಗ್ಗೆ ಯೋಜಿಸುತ್ತಿದ್ದೇವೆ. ಮುಂಬರುವ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವಂತೆ ಕೊಲ್ಹಾಪುರ ಹಾಗೂ ಸಿಂಧುದುರ್ಗದ ಸ್ಥಳೀಯ ಪಕ್ಷದ ಕಾರ್ಯಕರ್ತರಿಂದ ಸಾಕಷ್ಟು ಒತ್ತಡವಿದೆ” ಎಂದು ಅವರು ಹೇಳಿದ್ದಾರೆ.
ಪಕ್ಷದ ಸಿಂಧುದುರ್ಗ ಜಿಲ್ಲಾ ಉಸ್ತುವಾರಿಯಾಗಿರುವ ಪಾಲೇಕರ್, ಕೊಂಕಣ ಪ್ರದೇಶದ ಜನರು ಗೌರವಾನ್ವಿತರಾಗಿದ್ದು, ರಾಣೆ ಕುಟುಂಬದ “ಅಹಂಕಾರದ ಭಾಷೆ” ಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಸ್ವಚ್ಛ ಮತ್ತು ಪ್ರಾಮಾಣಿಕ ರಾಜಕಾರಣ ಇಂದಿನ ಅಗತ್ಯವಾಗಿದ್ದು, ಬದ್ಧತೆ ಇರುವ ರಾಜಕಾರಣಿಗಳು ಮಾತ್ರ ಅದನ್ನು ಮಾಡಲು ಸಾಧ್ಯ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ನ್ಯಾಯಾಲಯಕ್ಕೆ ಹಾಜರುಪಡಿಸದ ಪೊಲೀಸರು | ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಎಲ್ಗರ್ ಪರಿಷತ್ ಪ್ರಕರಣದ ಬಂಧಿತರು
ನ್ಯಾಯಾಲಯಕ್ಕೆ ಹಾಜರುಪಡಿಸದ ಪೊಲೀಸರು | ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಎಲ್ಗರ್ ಪರಿಷತ್ ಪ್ರಕರಣದ ಬಂಧಿತರು


