Homeಮುಖಪುಟಜಾರ್ಖಂಡ್ | ಜೆಎಂಎಂ-ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧೆ; 'ಏಕಪಕ್ಷೀಯ' ನಿರ್ಧಾರ ಎಂದ ಆರ್‌ಜೆಡಿ!

ಜಾರ್ಖಂಡ್ | ಜೆಎಂಎಂ-ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧೆ; ‘ಏಕಪಕ್ಷೀಯ’ ನಿರ್ಧಾರ ಎಂದ ಆರ್‌ಜೆಡಿ!

- Advertisement -
- Advertisement -

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮತ್ತು ಕಾಂಗ್ರೆಸ್ ಶನಿವಾರದಂದು 81 ವಿಧಾನಸಭಾ ಸ್ಥಾನಗಳಲ್ಲಿ 70 ಸ್ಥಾನಗಳಲ್ಲಿ ಒಟ್ಟಾಗಿ ಸ್ಪರ್ಧಿಸುವ ನಿರ್ಧಾರವನ್ನು ಪ್ರಕಟಿಸುತ್ತಿದ್ದಂತೆ ಇಂಡಿಯಾ ಒಕ್ಕೂಟದಲ್ಲಿ ಬಿರುಕುಗಳು ಬಹಿರಂಗವಾಗಿದೆ. ಉಳಿದ 11 ಸ್ಥಾನಗಳನ್ನು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮತ್ತು ಎಡಪಕ್ಷಗಳ ನಡುವೆ ಹಂಚಲಾಗುವುದು ಎಂದು ಮುಖ್ಯಮಂತ್ರಿ ಹೇಮಂತ್ ಸೊರೆನ್ ಜಾರ್ಖಂಡ್ ಕಾಂಗ್ರೆಸ್ ಉಸ್ತುವಾರಿ ಗುಲಾಮ್ ಅಹ್ಮದ್ ಮಿರ್ ಮತ್ತು ರಾಜ್ಯದ ಹಿರಿಯ ಸಚಿವ ರಾಮೇಶ್ವರ್ ಓರಾನ್ ಅವರ ಸಮ್ಮುಖದಲ್ಲಿ ಹೇಳಿದ್ದಾರೆ.

ಜಾರ್ಖಂಡ್‌ನಲ್ಲಿ ನವೆಂಬರ್ 13 ಮತ್ತು 20 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 23 ರಂದು ಮತಗಳ ಎಣಿಕೆ ನಡೆಯಲಿದೆ. ಆಡಳಿತಾರೂಢ ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸಲು ಜೆಎಂಎಂ ಮತ್ತು ಕಾಂಗ್ರೆಸ್‌ನ ಹಿರಿಯ ನಾಯಕರ ನಡುವೆ ನಡೆದ ಸಭೆಯ ನಂತರ ಈ ಘೋಷಣೆ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆರ್‌ಜೆಡಿ ಮತ್ತು ಎಡಪಕ್ಷಗಳಿಗೆ ಮೀಸಲಾದ 11 ಸ್ಥಾನಗಳು ಅವರು ಪ್ರಬಲವಾಗಿರುವ ಕ್ಷೇತ್ರಗಳಿಗೆ ಮೀಸಲಿಡಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. ಆದಾಗ್ಯೂ, ಇಂಡಿಯಾ ಒಕ್ಕೂಟದ ಪಕ್ಷವಾಗಿರುವ ಆರ್‌ಜೆಡಿ ಈ ಸೀಟು ಹಂಚಿಕೆಯ ಘೋಷಣೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ ಎಂದು ವರದಿಯಾಗಿದೆ. ರಾಂಚಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಆರ್‌ಜೆಡಿ ರಾಜ್ಯಸಭಾ ಸಂಸದ ಮನೋಜ್ ಝಾ, ಮೈತ್ರಿ ಕುರಿತು ಜೆಎಂಎಂ ಮತ್ತು ಕಾಂಗ್ರೆಸ್ ಏಕಪಕ್ಷೀಯವಾಗಿ ನಿರ್ಧರಿಸಿದ ರೀತಿ ಸರಿಯಲ್ಲ ಎಂದು ಹೇಳಿದ್ದಾರೆ.

ಆರ್‌ಜೆಡಿ ಪಕ್ಷದ ಮುಖಂಡ ತೇಜಸ್ವಿ ಯಾದವ್ ರಾಂಚಿಯಲ್ಲಿ ಉಪಸ್ಥಿತರಿದ್ದರೂ, ಮೈತ್ರಿ ಬಗ್ಗೆ ಮಾಡಬೇಕಾದ ಘೋಷಣೆಯ ಬಗ್ಗೆ ಅವರಿಗೆ ತಿಳಿಸಲಾಗಿಲ್ಲ ಎಂದು ಮನೋಜ್ ಝಾ ಹೇಳಿದ್ದಾರೆ. ರಾಜ್ಯದಲ್ಲಿ ಆರ್‌ಜೆಡಿ ಪಕ್ಷವೂ ಏಕಾಂಗಿಯಾಗಿ 12 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಸಾರ್ಮರ್ಥ್ಯ ಇದೆ ಎಂದು ಅವರು ಹೇಳಿದ್ದಾರೆ.

“ಕಾಂಗ್ರೆಸ್ ಮತ್ತು ಜೆಎಂಎಂ ಏಕಪಕ್ಷೀಯವಾಗಿ 70 ಸ್ಥಾನಗಳಲ್ಲಿ ಮೈತ್ರಿಯನ್ನು ಘೋಷಿಸಿ ನಮಗೆ ಕೇವಲ 5 ಸ್ಥಾನಗಳನ್ನು ನೀಡುತ್ತೇವೆ ಎಂದು ಹೇಳಿದ್ದಾರೆ. ಆದರೆ 2019 ರಲ್ಲಿ ನಮ್ಮ ಅಭ್ಯರ್ಥಿಗಳು 5 ಸ್ಥಾನಗಳಲ್ಲಿ ಎರಡನೇ ಸ್ಥಾನದಲ್ಲಿ ಇದ್ದರು. ನಾವು ಜಾರ್ಖಂಡ್‌ನಲ್ಲಿ ಒಂದು ಡಜನ್‌ಗಿಂತಲೂ ಹೆಚ್ಚು ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಸಮರ್ಥರಾಗಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮುನ್ನ ಶುಕ್ರವಾರ ಜಾರ್ಖಂಡ್‌ನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸೀಟು ಹಂಚಿಕೆ ಸೂತ್ರದ ಬಗ್ಗೆ ಒಮ್ಮತಕ್ಕೆ ಬಂದಿದೆ. ಸೂತ್ರದ ಪ್ರಕಾರ, ಎಜೆಎಸ್‌ಯು ಪಕ್ಷ 10 ಸ್ಥಾನಗಳಲ್ಲಿ, ಜೆಡಿ (ಯು) ಎರಡು ಸ್ಥಾನಗಳಲ್ಲಿ ಮತ್ತು ಲೋಕ ಜನಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್ ಬಣ ಒಂದು ಸ್ಥಾನದಲ್ಲಿ ಸ್ಪರ್ಧಿಸಲಿದೆ. ಉಳಿದ 68 ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ.

ರಾಂಚಿಯ ರಾಜ್ಯ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಮತ್ತು ಜಾರ್ಖಂಡ್‌ನ ಸಹ-ಚುನಾವಣೆ ಉಸ್ತುವಾರಿ ಆಗಿರುವ ಹಿಮಂತ ಬಿಸ್ವಾ ಶರ್ಮಾ ಅವರು ಇನ್ನು ಮುಂದೆ ಎನ್‌ಡಿಎಯಾಗಿ ಒಟ್ಟಾಗಿ ಕೆಲಸ ಮಾಡಲಿದ್ದೇವೆಯೇ ಹೊರತು ಬಿಜೆಪಿ ಅಥವಾ ಎಜೆಎಸ್‌ಯುನಂತಹ ವೈಯಕ್ತಿಕ ಪಕ್ಷಗಳಾಗಿ ಅಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವಹೇಳನ ಆರೋಪ : ಯತ್ನಾಳ್ ವಿರುದ್ಧ ಎಫ್‌ಐಆರ್

ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವಹೇಳನ ಆರೋಪ : ಯತ್ನಾಳ್ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...