HomeUncategorizedಗೌರಿ ಲಂಕೇಶ್ ಹತ್ಯೆ ಆರೋಪಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆ

ಗೌರಿ ಲಂಕೇಶ್ ಹತ್ಯೆ ಆರೋಪಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆ

- Advertisement -
- Advertisement -

ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗರ್ಕರ್ ಮಹಾರಾಷ್ಟ್ರ ವಿಧಾನಸಭಾ ಚುನವಣೆಗೆ ಮುನ್ನ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಪಕ್ಷವನ್ನು ರಾಜ್ಯದ ಜಲ್ನಾದಲ್ಲಿ ಸೇರಿಕೊಂಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಗೌರಿ ಲಂಕೇಶ್ ಅವರನ್ನು 2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ಅವರ ಮನೆಯ ಹೊರಗೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

2001 ಮತ್ತು 2006 ರ ನಡುವೆ ಅವಿಭಜಿತ ಶಿವಸೇನೆಯ ಜಲ್ನಾ ಪುರಸಭೆಯ ಕೌನ್ಸಿಲರ್ ಆಗಿದ್ದ ಪಂಗರ್ಕರ್ ಅವರನ್ನು ಆಗಸ್ಟ್ 2018 ರಲ್ಲಿ ಬಂಧಿಸಲಾಗಿತ್ತು. ಆರೋಪಿಗೆ ಈ ವರ್ಷ ಸೆಪ್ಟೆಂಬರ್ 4 ರಂದು ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. 2011 ರಲ್ಲಿ ಶಿವಸೇನೆಯಿಂದ ಟಿಕೆಟ್ ನಿರಾಕರಿಸಿದ ಕಾರಣಕ್ಕೆ, ಪಂಗರ್ಕರ್ ಬಲಪಂಥೀಯ ಸಂಘಟನೆಯಾದ ಹಿಂದೂ ಜನಜಾಗೃತಿ ಸಮಿತಿಗೆ ಸೇರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆರೋಪಿ ಶುಕ್ರವಾರ ಪಕ್ಷದ ನಾಯಕ ಮತ್ತು ಮಾಜಿ ರಾಜ್ಯ ಸಚಿವ ಅರ್ಜುನ್ ಖೋಟ್ಕರ್ ಅವರ ಸಮ್ಮುಖದಲ್ಲಿ ಶಿಂಧೆ ನೇತೃತ್ವದ ಶಿವಸೇನೆಗೆ ಸೇರಿದ್ದಾರೆ. “ಪಂಗಾರ್ಕರ್ ಅವರು ಮಾಜಿ ಶಿವಸೈನಿಕನಾಗಿದ್ದು, ಪಕ್ಷಕ್ಕೆ ಮರಳಿದ್ದಾರೆ. ಅವರನ್ನು ಜಲ್ನಾ ವಿಧಾನಸಭಾ ಚುನಾವಣಾ ಪ್ರಚಾರದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ” ಎಂದು ಖೋಟ್ಕರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಖೋಟ್ಕರ್ ಅವರು ಜಲ್ನಾದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವುದಾಗಿ ಹೇಳಿದ್ದಾರೆ. ಅದಾಗ್ಯೂ, ಶಿವಸೇನೆ, ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯ ಮಹಾಯುತಿ ಮೈತ್ರಿಯಲ್ಲಿ ಸೀಟು ಹಂಚಿಕೆ ಚರ್ಚೆಗಳು ಇನ್ನೂ ನಡೆಯುತ್ತಿವೆ. ಈ ಕ್ಷೇತ್ರವನ್ನು ಕಾಂಗ್ರೆಸ್‌ನ ಕೈಲಾಶ್ ಗೊರಂಟ್ಯಾಲ್ ಅವರು ಪ್ರತಿನಿಧಿಸುತ್ತಿದ್ದಾರೆ.

ನವೆಂಬರ್ 20 ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ. ಪ್ರಸ್ತುತ ವಿಧಾನಸಭೆಯ ಅವಧಿ ನವೆಂಬರ್ 26 ರಂದು ಕೊನೆಗೊಳ್ಳುತ್ತದೆ.

ಇದನ್ನೂ ಓದಿ: ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ಸನ್ಮಾನ

ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ಸನ್ಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...