ಪ್ರಕರಣದ ಸಾಕ್ಷ್ಯ ನಾಶಪಡಿಸಲು ಮುಡಾದಿಂದ ತೆಗೆದುಕೊಂಡು ದಾಖಲೆಗಳನ್ನು ಸುಟ್ಟು ಹಾಕಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಂಜೆ ಶನಿವಾರ ಆರೋಪಿಸಿದ್ದಾರೆ. ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರನ್ನು ಕೂಡಲೇ ಬಂಧಿಸಿ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಮುಡಾ ಕಡತ
1997ರ ನಂತರ ನಿವೇಶನ ಹಂಚಿಕೆಗೆ ಸಂಬಂಧಿಸಿದ ಕಡತಗಳನ್ನು ಮುಡಾ ಕಚೇರಿಯಿಂದ ಸುರೇಶ್ ತೆಗೆದುಕೊಂಡು ಹೋಗಿದ್ದಾರೆ ಎಂದು ಸಚಿವೆ ಶೋಭಾ ಕರಂದ್ಲಾಂಜೆ ಆರೋಪಿಸಿದ್ದಾರೆ. “ಸುರೇಶ್ ಮೈಸೂರಿಗೆ ಹೋಗಿ ಎಲ್ಲಾ ಫೈಲ್‌ಗಳನ್ನು ತಂದಿದ್ದರು. ಆ ಕಡತಗಳು ಎಲ್ಲಿವೆ? ಕಡತಗಳನ್ನು ಸುಟ್ಟು ಹಾಕಲಾಗಿದೆ,” ಎಂದು ಅವರು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಮುಡಾ ಅಧ್ಯಕ್ಷ ಮರಿಗೌಡ ರಾಜೀನಾಮೆ ಅಂಗೀಕರಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ ಕರಂದ್ಲಾಜೆ, ಈಗ ಹಗರಣದ ಹೊಣೆ ಹೊರಲು ಅವರು ಹೊರಟಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ. ಮುಡಾ ಕಡತ
ಮುಡಾ ಸಿದ್ದರಾಮಯ್ಯ ಅವರ ಪತ್ನಿಗೆ ನಿವೇಶನ ಹಂಚಿಕೆ ಮಾಡುವ ನಿರ್ಧಾರ ಕೈಗೊಂಡಾಗ ಅವರು ಸಾಂವಿಧಾನಿಕ ಹುದ್ದೆಯಲ್ಲಿದ್ದರು. ಹಾಗಾಗಿ ಸಿದ್ದರಾಮಯ್ಯ ಅವರ ರಾಜೀನಾಮೆ ನೀಡಬೇಕು ಎಂದು ಶೋಭಾ ಒತ್ತಾಯಿಸಿದದ್ದಾರೆ. ಆಗ ಶಾಸಕರಾಗಿದ್ದ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಭೆಯಲ್ಲಿ ಹಾಜರಿದ್ದರು ಎಂದು ಅವರು ಆರೋಪಿಸಿದ್ದಾರೆ.
ಸೈಟ್‌ಗಳನ್ನು ಹಿಂದಿರುಗಿಸುವುದು ಎಂದರೆ ಅಪರಾಧವನ್ನು ಒಪ್ಪಿಕೊಳ್ಳುವುದಾಗಿದೆ ಎಂದ ಅವರು, ”ಸಿದ್ದರಾಮಯ್ಯನವರು ಸಿಎಂ ಆದ ಮೊದಲ ಅವಧಿಯಲ್ಲಿ ಪ್ರಕರಣಗಳಿಂದ ರಕ್ಷಿಸಿಕೊಳ್ಳಲು ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸಲು ಯತ್ನಿಸಿದ್ದರು” ಎಂದು ಆರೋಪಿಸಿದ್ದಾರೆ.
ಟರ್ಫ್ ಕ್ಲಬ್‌ನಲ್ಲಿ ಉಸ್ತುವಾರಿ ನೇಮಕಕ್ಕಾಗಿ 1.3 ಕೋಟಿ ರೂಪಾಯಿ ತೆಗೆದುಕೊಂಡ ಆರೋಪವನ್ನೂ ಅವರು ಎದುರಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದು, ಎಸ್ಟಿ ನಿಗಮದ ಪ್ರಕರಣದಲ್ಲಿ, ಸರ್ಕಾರದ ಖಜಾನೆಯ ಹಣವನ್ನು ಚುನಾವಣೆಗಾಗಿ ಕಾಂಗ್ರೆಸ್‌ಗೆ ವರ್ಗಾಯಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಆರೋಪಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆ
ಗೌರಿ ಲಂಕೇಶ್ ಹತ್ಯೆ ಆರೋಪಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆ


