ರಾಜ್ಯದ ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯನ್ನು ಇನ್ನೂ ಹೆಸರಿಸಲಾಗಿಲ್ಲ. ಅಕ್ಟೋಬರ್ 19ರ ಶನಿವಾರದಂದು ಪಕ್ಷವು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬಿ. ಬೊಮ್ಮಾಯಿ ಅವರನ್ನು ಶಿಗ್ಗಾಂವಿ ಕ್ಷೇತ್ರದಿಂದ ಮತ್ತು ರಾಜ್ಯ ಎಸ್ಟಿ ಮೋರ್ಚಾ ಮುಖ್ಯಸ್ಥ ಬಂಗಾರು ಹನುಮಂತು ಅವರನ್ನು ಸಂಡೂರು ಕ್ಷೇತ್ರದಿಂದ ಕಣಕ್ಕಿಳಿಸಿದೆ. ಶಿಗ್ಗಾಂವಿ ಉಪ ಚುನಾವಣೆ
ಶಿಗ್ಗಾಂವಿ ಕ್ಷೇತ್ರವನ್ನು ಬಸವರಾಜ ಬೊಮ್ಮಾಯಿ ಪ್ರತಿನಿಧಿಸುತ್ತಿದ್ದು, ಹಾವೇರಿ ಲೋಕಸಭಾ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿ ಗೆದ್ದ ನಂತರ ತೆರವಾಗಿತ್ತು. ಭರತ್ ಬೊಮ್ಮಾಯಿ ಅವರು ಯುಎಸ್‌ನ ಪರ್ಡ್ಯೂ ವಿಶ್ವವಿದ್ಯಾಲಯದಿಂದ ಬ್ಯಾಚುಲರ್ ಆಫ್ ಎಂಜಿನಿಯರಿಂಗ್ ಪದವಿಯನ್ನು ಪೂರ್ಣಗೊಳಿಸಿದ ನಂತರ ಸಿಂಗಾಪುರ್ ಮ್ಯಾನೇಜ್‌ಮೆಂಟ್ ವಿಶ್ವವಿದ್ಯಾಲಯದಿಂದ ಎಂಬಿಎ ಪದವಿಯನ್ನು ಪಡೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಬಂಗಾರು ಹನುಮಂತು ಬಿಎ, ಬಿಎಡ್ ಮಾಡಿದ್ದಾರೆ. ಸಂಡೂರು (ಎಸ್‌ಟಿ ಮೀಸಲು) ಕ್ಷೇತ್ರದಿಂದ ಬಿಜೆಪಿ ಪಕ್ಷ ಎಂದಿಗೂ ಗೆದ್ದಿಲ್ಲ. ಕರ್ನಾಟಕ ಬಿಜೆಪಿ ಮುಖ್ಯಸ್ಥ ಬಿ.ವೈ. ರಾಘವೇಂಧ್ರೆ ಅವರು ಈ ಸ್ಥಾನವನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸುವಂತೆ ಕಾರ್ಯಕ್ರಮವೊಂದರಲ್ಲಿ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಶಿಗ್ಗಾಂವಿ ಉಪ ಚುನಾವಣೆ
ಪಕ್ಷದ ಅಭ್ಯರ್ಥಿಗಳಾಗಿ ಆಯ್ಕೆಯಾದ ಭರತ್ ಬೊಮ್ಮಾಯಿ ಮತ್ತು ಬಂಗಾರು ಹನುಮಂತು ಅವರನ್ನು ವಿಜಯೇಂದ್ರ ಅಭಿನಂದಿಸಿದ್ದು, ಮೂರೂ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವನ್ನು ಖಚಿತಪಡಿಸಿಕೊಳ್ಳಲು ಪಕ್ಷದ ಕಾರ್ಯಕರ್ತರು ಈ ಕ್ಷಣದಿಂದಲೇ ಯೋಧರಂತೆ ಚುನಾವಣಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಉತ್ತರಾಖಂಡ | ಮುಸ್ಲಿಂ ಕುಟುಂಬಗಳು ಡಿಸೆಂಬರ್ 31 ರೊಳಗೆ ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸಿದ ವ್ಯಾಪಾರಿಗಳು!
ವಾಲ್ಮೀಕಿ ನಿಗಮ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ಈ ಸ್ಥಾನವನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ. ಬಿಜೆಪಿ ಸೇರಿರುವ ಗಣಿ ಉದ್ಯಮಿ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಸಂಡೂರು ಉಪಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ.
ಸಂಡೂರು ಕ್ಷೇತ್ರವನ್ನು ಹಾಲಿ ಕಾಂಗ್ರೆಸ್ ಸಂಸದ ಇ.ತುಕಾರಾಂ ಪ್ರತಿನಿಧಿಸಿದ್ದರು. ಲೋಕಸಭೆ ಚುನಾವಣೆಗೆ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಕ್ಷೇತ್ರದಲ್ಲಿ ತುಕಾರಾಂ ಅವರು ಬಿಜೆಪಿಯ ಅಭ್ಯರ್ಥಿ ಬಿ.ಶ್ರೀರಾಮುಲು ಅವರನ್ನು ಸೋಲಿಸಿದ್ದರು. ಈ ಮಧ್ಯೆ ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಇನ್ನೂ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ, ಈ ಹಿಂದೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.
ಹಿರಿಯ ನಾಯಕ ಸಿ.ಪಿ. ಯೋಗೇಶ್ವರ ಚನ್ನಪಟ್ಟಣದಿಂದ ಕಣಕ್ಕಿಳಿಸಲು ಕುಮಾರಸ್ವಾಮಿ ಅವರೊಂದಿಗೆ ಬಿಜೆಪಿ ಮಾತುಕತೆ ನಡೆಸುತ್ತಿದೆ. ಆದರೆ, ಕುಮಾರಸ್ವಾಮಿ ತಮ್ಮ ಪಕ್ಷ ಜೆಡಿಎಸ್‌ನಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಒತ್ತಾಯಿಸುತ್ತಿದ್ದಾರೆ. ಮೂಲಗಳ ಪ್ರಕಾರ ಚನ್ನಪಟ್ಟಣದಿಂದ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲು ಕುಮಾರಸ್ವಾಮಿ ಬಯಸಿದ್ದು, ಇನ್ನೆರಡು ದಿನದಲ್ಲಿ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.
ಇದನ್ನೂ ಓದಿ: ಎಂವಿಎ ಮೈತ್ರಿ ಸರ್ಕಾರ ರಚಿಸದಂತೆ ಮಹಾರಾಷ್ಟ್ರ ಚುನಾವಣೆ ನಿಗದಿ; ಬಿಜೆಪಿಗೆ ಲಾಭ ಮಾಡುವ ಉದ್ದೇಶ: ಆರೋಪ
ಎಂವಿಎ ಮೈತ್ರಿ ಸರ್ಕಾರ ರಚಿಸದಂತೆ ಮಹಾರಾಷ್ಟ್ರ ಚುನಾವಣೆ ನಿಗದಿ; ಬಿಜೆಪಿಗೆ ಲಾಭ ಮಾಡುವ ಉದ್ದೇಶ: ಆರೋಪ
ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು
ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು


