Homeಮುಖಪುಟಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳ ನಂಬರ್ ಪಡೆದು ಪಕ್ಷದ ಸದಸ್ಯರನ್ನಾಗಿಸಿದ ಬಿಜೆಪಿ ಕಾರ್ಯಕರ್ತರು

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳ ನಂಬರ್ ಪಡೆದು ಪಕ್ಷದ ಸದಸ್ಯರನ್ನಾಗಿಸಿದ ಬಿಜೆಪಿ ಕಾರ್ಯಕರ್ತರು

- Advertisement -
- Advertisement -

ಗುಜರಾತಿನ ರಾಜ್‌ಕೋಟ್‌ನ ಆಸ್ಪತ್ರೆಯೊಂದರಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಂದ ನಂಬರ್ ಪಡೆದು, ಅವರ ಒಪ್ಪಿಗೆಯಿಲ್ಲದೆ 350 ಜನರನ್ನು ಬಿಜೆಪಿ ಸದಸ್ಯರನ್ನಾಗಿ ಮಾಡಿಕೊಂಡಿರುವ ಘಟನೆಯ ವಿಡಿಯೋ ಆನ್‌ಲೈನ್‌ನಲ್ಲಿ ಇದೀಗ ವೈರಲ್ ಆಗಿದೆ.

ರೋಗಿಗಳಲ್ಲಿ ಒಬ್ಬರಾದ ಜುನಾಗಢ್‌ನ ಕಮಲೇಶ್ ತುಮ್ಮರ್ ಅವರು ವೀಡಿಯೊವನ್ನು ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದ ತಮ್ಮ ಖಾತೆಯನ್ನು ಹಂಚಿಕೊಂಡಾಗ ವಿವಾದ ಪ್ರಾರಂಭವಾಯಿತು.

ಕಣ್ಣಿನ ಶಸ್ತ್ರಚಿಕಿತ್ಸೆಗಾಗಿ ರಾಂಚೋಡ್ ದಾಸ್ ಟ್ರಸ್ಟ್ ಆಸ್ಪತ್ರೆಗೆ ಭೇಟಿ ನೀಡಿದ್ದ ತುಮ್ಮರ್, ಇದೇ ರೀತಿಯ ಪರಿಸ್ಥಿತಿಯಲ್ಲಿರುವ ಇತರ 350 ರೋಗಿಗಳಲ್ಲಿ ತಾನೂ ಇದ್ದೇನೆ ಎಂದು ಹೇಳಿಕೊಂಡರು. ಅವರ ಪ್ರಕಾರ, ತಡರಾತ್ರಿ ರೋಗಿಗಳು ಮಲಗಿದ್ದಾಗ ಈ ಘಟನೆ ಸಂಭವಿಸಿದೆ.

“ಯಾರೋ ಬಂದು ನಮ್ಮ ಮೊಬೈಲ್ ಸಂಖ್ಯೆ ಮತ್ತು ಒಟಿಪಿಗಳನ್ನು ಕೇಳಿದರು. ನಾನು ನನ್ನದನ್ನು ನೀಡಿದ್ದೇನೆ ಮತ್ತು ಸ್ವಲ್ಪ ಸಮಯದ ನಂತರ, ‘ನೀವು ಬಿಜೆಪಿ ಸದಸ್ಯರಾಗಿದ್ದಿರಿ’ ಎಂದು ನನಗೆ ಸಂದೇಶ ಬಂದಿತು” ಎಂದು ತುಮ್ಮರ್ ವಿವರಿಸಿದರು.

“ಮೊಬೈಲ್ ನಂಬರ್ ನೀಡದಿದ್ದರೆ, ಯಾರಿಗೂ ಶಸ್ತ್ರಚಿಕಿತ್ಸೆ ಮಡಲಾಗುವುದಿಲ್ಲ ಎಂದು ನನಗೆ ಹೇಳಲಾಯಿತು. ಆಗ ನಾನು ವೀಡಿಯೊವನ್ನು ರೆಕಾರ್ಡ್ ಮಾಡಲು ಮತ್ತು ಅದನ್ನು ವೈರಲ್ ಮಾಡಲು ನಿರ್ಧರಿಸಿದೆ” ಎಂದು ತುಮ್ಮರ್ ವಿವರಿಸಿದರು.

ಈ ಆರೋಪಗಳಿಗೆ ಪ್ರತಿಕ್ರಿಯಿಸಿದ ರಾಂಚೋಡ್ ದಾಸ್ ಆಸ್ಪತ್ರೆಯ ಶಾಂತಿ ಬಡೋಲಿಯಾ, “ಈ ವ್ಯಕ್ತಿಯು ನಮ್ಮ ಸಿಬ್ಬಂದಿಯ ಭಾಗವಲ್ಲ. ಅವರು ರೋಗಿಗಳಲ್ಲಿ ಒಬ್ಬರ ಸಂಪರ್ಕದಲ್ಲಿದ್ದರು. ನಾವು ವಿಷಯವನ್ನು ಕೂಲಂಕಷವಾಗಿ ತನಿಖೆ ಮಾಡುತ್ತೇವೆ” ಎಂದು ಹೇಳಿದರು.

“ಈ ಪ್ರಕ್ರಿಯೆಯಲ್ಲಿ ಪಕ್ಷದಿಂದ ಯಹಾರೂ ಭಾಗಿಯಾಗಿಲ್ಲ” ಎಂದು ಗುಜರಾತ್ ಬಿಜೆಪಿ ಉಪಾಧ್ಯಕ್ಷ ಗೋರ್ಧನ್ ಜಡಾಫಿಯಾ ಹೇಳಿದ್ದಾರೆ. “ಈ ರೀತಿ ಬಿಜೆಪಿಗೆ ಜನರನ್ನು ಸೇರಿಸಿಕೊಳ್ಳುವಂತೆ ನಾವು ಯಾರಿಗೂ ಸೂಚನೆ ನೀಡಿಲ್ಲ; ನಮ್ಮ ಕಚೇರಿಯಿಂದ ಯಾರೂ ಭಾಗಿಯಾಗಿಲ್ಲ. ಇಂತಹ ಚಟುವಟಿಕೆಗಳು ನಡೆಯುತ್ತಿದ್ದರೆ ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ” ಎಂದರು.

ಇದನ್ನೂ ಓದಿ; ಗುಜರಾತ್: ಹೈಕೋರ್ಟ್ ನಿರ್ದೇಶನದ ನಂತರ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...