Homeಕರ್ನಾಟಕಬೆಂಗಳೂರು ಕಂಬಳದ ವಿರುದ್ಧ ಪಿಐಎಲ್‌ : ನಾಳೆಗೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು ಕಂಬಳದ ವಿರುದ್ಧ ಪಿಐಎಲ್‌ : ನಾಳೆಗೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

- Advertisement -
- Advertisement -

ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಕ್ಟೋಬರ್ 25 ಮತ್ತು 26ರಂದು ಕಂಬಳ (ಕೋಣಗಳ ಓಟ) ಸ್ಪರ್ಧೆ ನಡೆಸಲು ಬೆಂಗಳೂರು ಕಂಬಳ ಸಮಿತಿಗೆ ಅನುಮತಿ ನೀಡದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲುಕೋರಿ ಪ್ರಾಣಿ ದಯಾ ಸಂಘ ಪೆಟಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಬುಧವಾರಕ್ಕೆ ಮುಂದೂಡಿದೆ ಎಂದು ವರದಿಯಾಗಿದೆ.

ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು ಇಂದು ದೆಹಲಿಯಲ್ಲಿದ್ದಾರೆ. ಪ್ರಕರಣದಲ್ಲಿ ಸಾಕಷ್ಟು ಕಾನೂನಿನ ಅಂಶಗಳಿದ್ದು, ಈ ಕುರಿತು ಸರ್ಕಾರದಿಂದ ಸೂಚನೆ ಪಡೆದು ಅವರು ವಾದ ಮಂಡಿಸಲಿದ್ದಾರೆ. ಹೀಗಾಗಿ, ಅರ್ಜಿಯ ವಿಚಾರಣೆಯನ್ನು ನಾಳೆ ಅಥವಾ ನಾಡಿದ್ದಿಗೆ ಮುಂದೂಡಬೇಕು ಎಂದು ರಾಜ್ಯ ಸರ್ಕಾರದ ಪರವಾಗಿ ಹಾಜರಿದ್ದ ವಕೀಲೆ ನಿಲೋಫರ್‌ ಅಕ್ಬರ್‌ ಅವರು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ ವಿಭಾಗೀಯ ಪೀಠಕ್ಕೆ ಕೋರಿದ್ದರು.

ಅದನ್ನು ಪುರಸ್ಕರಿಸಿದ ಪೀಠ, ಬುಧವಾರ ಮಧ್ಯಾಹ್ನ 2.30ಕ್ಕೆ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳಲಾಗುವುದು ಎಂದು ಆದೇಶಿಸಿ, ವಿಚಾರಣೆ ಮುಂದೂಡಿದೆ ಎಂದು ತಿಳಿದು ಬಂದಿದೆ.

ಇದಕ್ಕೂ ಮುನ್ನ, ಪೆಟಾ ಪ್ರತಿನಿಧಿಸಿದ್ದ ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ ಅವರು “ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಕಂಬಳ ಸ್ಪರ್ಧೆಗೆ ಅವಕಾಶವಿದೆ. ಆದರೆ, ಕಳೆದ ವರ್ಷದಿಂದ ಅದನ್ನು ಬೆಂಗಳೂರಿನಲ್ಲಿ ಆನಂತರ ಶಿವಮೊಗ್ಗದಲ್ಲೂ ನಡೆಸುವ ಚಿಂತನೆಯನ್ನು ಕಂಬಳ ಆಯೋಜನಾ ಸಮಿತಿ ಹೊಂದಿದೆ. ಇದಕ್ಕಾಗಿ 200 ಕೋಣಗಳನ್ನು 300 ಕಿ ಮೀ ದೂರವಿರುವ ದಕ್ಷಿಣ ಕನ್ನಡದಿಂದ ಟ್ರಕ್‌ನಲ್ಲಿ ತರಲಾಗಿದೆ. ಇದಕ್ಕೆ ನಿರ್ಬಂಧ ವಿಧಿಸಬೇಕು” ಎಂದು ಕೋರಿದರು.

“ಪ್ರಾಣಿ ಹಿಂಸೆ ನಿಷೇಧ ಕಾಯ್ದೆಗೆ ತಿದ್ದುಪಡಿ ತಂದು ಕರ್ನಾಟಕದಲ್ಲಿ ಕಂಬಳ, ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸ್ಪರ್ಧೆಯಂಥ ಸಾಂಪ್ರದಾಯಿಕ ಸ್ಪರ್ಧೆಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಆದರೆ, ಈಗ ಅದನ್ನು ವಾಣಿಜ್ಯೀಕರಣಗೊಳಿಸಲಾಗುತ್ತಿದೆ. ನ್ಯಾಯಾಲಯ ನಿರ್ಧರಿಸುವವರೆಗೆ ಕೋಣಗಳನ್ನು ಬೆಂಗಳೂರಿಗೆ ಟ್ರಕ್‌ನಲ್ಲಿ ತರದಂತೆ ಕಂಬಳ ಆಯೋಜನಾ ಸಮಿತಿಗೆ ಆದೇಶಿಸಬೇಕು” ಎಂದು ಕೋರಿದರು. ಅಂತಿಮವಾಗಿ ಪೀಠವು ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಇದನ್ನೂ ಓದಿ : ಬೆಂಗಳೂರು | ಗೌರಿ ಹತ್ಯೆ ಆರೋಪಿಗಳಿಗೆ ಸನ್ಮಾನ ಖಂಡಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...