Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ ಪ್ರಾಂತ್ಯಗಳ ಬಡತನ ಈ ವರ್ಷ ದ್ವಿಗುಣ; 74.3% ಕ್ಕೆ ಏರಿಕೆ - ವಿಶ್ವಸಂಸ್ಥೆ

ಪ್ಯಾಲೆಸ್ತೀನ್‌ ಪ್ರಾಂತ್ಯಗಳ ಬಡತನ ಈ ವರ್ಷ ದ್ವಿಗುಣ; 74.3% ಕ್ಕೆ ಏರಿಕೆ – ವಿಶ್ವಸಂಸ್ಥೆ

- Advertisement -
- Advertisement -

ಗಾಜಾದಲ್ಲಿ ಆಕ್ರಮಣಕಾರ ಇಸ್ರೇಲ್ ಹಲವು ತಿಂಗಳಿನಿಂದ ನಡೆಸುತ್ತಿರುವ ವಿನಾಶದ ನಂತರ ಪ್ಯಾಲೇಸ್ತೀನಿನ ಪ್ರಾಂತ್ಯಗಳಾದ್ಯಂತ ಬಡತನದ ಪ್ರಮಾಣವು ಈ ವರ್ಷ ಸುಮಾರು ದ್ವಿಗುಣಗೊಳ್ಳಲಿದ್ದು 74.3%ಕ್ಕೆ ತಲುಪಲಿದೆ ಎಂದು ಮಂಗಳವಾರ ಬಿಡುಗಡೆಯಾದ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್‌ಡಿಪಿ) ವರದಿಯೊಂದು ತಿಳಿಸಿದೆ. ಪ್ಯಾಲೆಸ್ತೀನ್‌ ಪ್ರಾಂತ್ಯಗಳ ಬಡತನ

“ಯುದ್ಧದ ತಕ್ಷಣದ ಪರಿಣಾಮವೆಂದರೆ ಕೇವಲ ಭೌತಿಕ ಮೂಲಸೌಕರ್ಯ ವಿನಾಶ ಮಾತ್ರವಲ್ಲ. ಬದಲಾಗಿ ಬಡತನ, ಜೀವನೋಪಾಯ ಮತ್ತು ಜೀವನೋಪಾಯದ ನಷ್ಟದ ವಿಷಯದಲ್ಲಿಯೂ ಅಗಾಧ ನಾಶವಾಗಿದೆ” ಎಂದು ಯುಎನ್‌ಡಿಪಿ ಮುಖ್ಯಸ್ಥ ಅಚಿಮ್ ಸ್ಟೈನರ್ ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2023 ರ ಅಂತ್ಯದ ವೇಳೆಗೆ ಪ್ಯಾಲೆಸ್ತೀನ್‌ನಲ್ಲಿ ಬಡತನದ ಪ್ರಮಾಣವು 38.8% ದಷ್ಟಿತ್ತು. ಆದರೆ ಈ ವರ್ಷ ಇನ್ನೂ 26 ಲಕ್ಷ ಪ್ಯಾಲೆಸ್ತೀನಿಯನ್ನರು ಬಡತನಕ್ಕೆ ಸಿಲುಕಿದ್ದಾರೆ, ಒಟ್ಟು 41 ಲಕ್ಷ ಪ್ಯಾಲೆಸ್ತೀನಿಯನ್ನರು ಬಡತನಕ್ಕೆ ಸಿಲುಕಿದ್ದಾರೆ ಎಂದು ಅವರು ಹೇಳಿದ್ದಾರೆ. ಪ್ಯಾಲೆಸ್ತೀನ್‌ ಪ್ರಾಂತ್ಯಗಳ ಬಡತನ

“ಈ ಸಾಮಾಜಿಕ-ಆರ್ಥಿಕ ಮೌಲ್ಯಮಾಪನದ ಮೂಲಕ, ವಿನಾಶದ ಮಟ್ಟವು ಪ್ಯಾಲೆಸ್ತೀನ್‌ ರಾಷ್ಟ್ರದ ಅಭಿವೃದ್ಧಿಯ ಹಾದಿಯಯನ್ನು ವರ್ಷಗಳಷ್ಟು ಅಲ್ಲ, ದಶಕಗಳಷ್ಟು ಹಿಮ್ಮೆಟ್ಟಿಸಿದೆ ಎಂದು ಸ್ಪಷ್ಟವಾಗಿದೆ ತಿಳಿಯುತ್ತದೆ” ಎಂದು ಸ್ಟೈನರ್ ಹೇಳಿದ್ದಾರೆ.

ಈ ವರ್ಷ ಪ್ಯಾಲೆಸ್ತೀನ್‌ ಪ್ರಾಂತ್ಯಗಳಲ್ಲಿ ನಿರುದ್ಯೋಗವು 49.9% ಕ್ಕೆ ಏರಬಹುದು ಮತ್ತು ಗಾಜಾದಲ್ಲಿ ಯುದ್ಧವಿಲ್ಲದೆ GDP 35.1% ಕಡಿಮೆ ಇರುತ್ತದೆ ಎಂದು ಅಧ್ಯಯನವು ಅಂದಾಜಿಸಿದೆ.

ಪ್ರತಿ ವರ್ಷ ಮಾನವೀಯ ನೆರವು ನೀಡಿದ್ದರೂ ಸಹ, ಪ್ಯಾಲೇಸ್ತೀನಿ ಆರ್ಥಿಕತೆಯು ಒಂದು ದಶಕ ಅಥವಾ ಅದಕ್ಕಿಂತ ಹೆಚ್ಚು ಕಾಲ ಬಿಕ್ಕಟ್ಟಿಗಿಂತ ಪೂರ್ವದಲ್ಲಿ ಇದ್ದ ಸ್ಥಿತಿಗೆ ಹಿಂತಿರುಗಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಆಕ್ರಮಣಕಾರ ಇಸ್ರೇಲ್‌ನ ಬಾಂಬ್ ದಾಳಿಯ ಕಾರ್ಯಾಚರಣೆಯಿಂದ ಗಾಜಾದಲ್ಲಿ 42 ಮಿಲಿಯನ್ ಟನ್‌ಗಳಷ್ಟು ಕಲ್ಲುಮಣ್ಣುಗಳನ್ನು ಸೃಷ್ಟಿಸಿದೆ ಎಂದು ಅಧ್ಯಯನವು ಹೇಳುತ್ತದೆ. ಇದು ಸೀಸ ಮತ್ತು ಇತರ ಲೋಹಗಳನ್ನು ಬಿಡುಗಡೆ ಮಾಡುವುದರಿಂದ ಆರೋಗ್ಯಕ್ಕೆ ಹಾನಿಕಾರಕವಾಗಿದೆ.

ಗಾಜಾದಲ್ಲಿ ಆಕ್ರಮಣಕಾರ ಇಸ್ರೇಲ್‌ ನಡೆಸುತ್ತಿರುವ ಬಾಂಬ್ ಮತ್ತು ಭೂ ಸೇನೆಯ ದಾಳಿಯಿಂದ ಸುಮಾರು 42,603 ​​ಜನರು ಮೃತಪಟ್ಟಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರಾಗಿದ್ದು ಅದರಲ್ಲೂ ಮಹಿಳೆ ಮತ್ತು ಮಕ್ಕಳು ಹೆಚ್ಚಿದ್ದಾರೆ.

ಇದನ್ನೂ ಓದಿ: ಗೌರಿ ಹತ್ಯೆ ಆರೋಪಿಯನ್ನು ಹುದ್ದೆಯಿಂದ ಹೊರಗಿಟ್ಟ ಶಿವಸೇನೆ | ಚುನಾವಣೆಗಾಗಿ ನೈತಿಕತೆಯ ಮುಸುಕು : ಸುಪ್ರಿಯಾ ಸುಳೆ

ಗೌರಿ ಹತ್ಯೆ ಆರೋಪಿಯನ್ನು ಹುದ್ದೆಯಿಂದ ಹೊರಗಿಟ್ಟ ಶಿವಸೇನೆ | ಚುನಾವಣೆಗಾಗಿ ನೈತಿಕತೆಯ ಮುಸುಕು : ಸುಪ್ರಿಯಾ ಸುಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....