ಬೆಂಗಳೂರಿನ ಬಾಬುಸಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಮಂಗಳವಾರ ಕುಸಿದು ಬಿದ್ದ ಪರಿಣಾಮ ಕನಿಷ್ಠ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕಟ್ಟಡದ ಅಡಿಯಲ್ಲಿ 17 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಭಾರೀ ಮಳೆಯ ನಡುವೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿಶಾಮಕ ಮತ್ತು ತುರ್ತು ವಿಭಾಗದ ಎರಡು ರಕ್ಷಣಾ ವ್ಯಾನ್‌ಗಳನ್ನು ಒಳಗೊಂಡ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಬೆಂಗಳೂರು
“17 ಜನರು ಕಟ್ಟಡದೊಳಗೆ ಸಿಲುಕಿರುವ ಆತಂಕವಿದೆ. ಇತರ ತಂಡಗಳ ಸಹಾಯದಿಂದ ಸಂಘಟಿತ ಪ್ರಯತ್ನದ ಮೂಲಕ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ಹೇಳಿದ್ದಾರೆ ಎಂದು ವರದಿಯಾಗಿದೆ. ಕಟ್ಟಡವು ಸಂಪೂರ್ಣವಾಗಿ ಕುಸಿದಿದ್ದು, ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತೋರುತ್ತಿದೆ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಬೆಂಗಳೂರಿನಲ್ಲಿ ಇತ್ತೀಚೆಗೆ ದಾಖಲೆಯ ಮಳೆ ಸುರಿಯುತ್ತಿದ್ದು, ಭಾನುವಾರ ಬೆಳಿಗ್ಗೆ 8:30 ರವರೆಗೆ GKVK ವೀಕ್ಷಣಾಲಯದಲ್ಲಿ 186.2 mm ಮಳೆ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ವರದಿ ಮಾಡಿದೆ. ಈ ಹಿಂದೆ 24 ಗಂಟೆಗಳ ದಾಖಲೆಯ ಮಳೆ 1997ರ ಅಕ್ಟೋಬರ್ 1ದಂದು 178.9 mm ಆಗಿತ್ತು. ಪ್ರಸ್ತತ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ವಿಶೇಷವಾಗಿ ಉತ್ತರ ಬೆಂಗಳೂರಿನಲ್ಲಿ ತೀವ್ರ ಪರಿಣಾಮ ಬೀರಿದೆ. ಬೆಂಗಳೂರು
ನಗರದ ಯಲಹಂಕ ಮತ್ತು ದೊಡ್ಡಬೊಮ್ಮಸಂದ್ರದಂತಹ ಪ್ರದೇಶಗಳು ಜಲಾವೃತಗೊಂಡಿದ್ದು, ರಕ್ಷಣೆ ಮತ್ತು ಸ್ಥಳಾಂತರಿಸುವ ಪ್ರಯತ್ನಗಳಿಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಯ ಐದು ತಂಡಗಳನ್ನು ನಿಯೋಜಿಸಲು ಸಿದ್ದರಾಗಿದ್ದಾರೆ.
#WATCH | Karnataka: Severe waterlogging witnessed at Kendriya Vihar apartment in Yelahanka area of Bengaluru. pic.twitter.com/02ueSx9j85
— ANI (@ANI) October 22, 2024
ಯಲಹಂಕದ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್ ಸಮುಚ್ಚಯದ ಸುತ್ತಲಿನ ಮನೆಗಳಿಗೆ ಸೊಂಟದವರೆಗೆ ನೀರು ನುಗ್ಗಿದೆ. ನೀರಿನಲ್ಲಿ ಮುಳುಗಿರುವ ವಾಹನಗಳು ಮತ್ತು ನಿವಾಸಿಗಳನ್ನು ರಕ್ಷಿಸುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಬೆಂಗಳೂರು ಅಭಿವೃದ್ಧಿ ಉಸ್ತುವಾರಿ ಸಚಿವರಾಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಂಗಳವಾರ ಮಾಧ್ಯಮಗಳೊಂದಿಗೆ ಪರಿಸ್ಥಿತಿ ಕುರಿತು ಮಾತನಾಡಿ,”ದುಬೈ ಮತ್ತು ದೆಹಲಿಯಲ್ಲಿ ಕೂಡಾ ಮಳೆಯಾಗುತ್ತಿದೆ ಎಂದು ನೀವು ಮಾಧ್ಯಮಗಳಲ್ಲಿ ಗಮನಿಸಿರಬಹುದು. ದೆಹಲಿಯಲ್ಲಿ ಮಾಲಿನ್ಯವಿದ್ದು, ಬರಪೀಡಿತ ಪ್ರದೇಶವಾದ ದುಬೈನಲ್ಲಿ ಮಳೆಯಾಗಿದೆ. ದೇಶದ ಹಲವು ಭಾಗಗಳಲ್ಲಿ ಇದೇ ರೀತಿಯ ಪರಿಸ್ಥಿತಿ ಇದೆ. ಇದನ್ನು ನಾವು ನಿರ್ವಹಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.
20 ಪಂಪ್‌ಗಳ ಮೂಲಕ ತಗ್ಗು ಪ್ರದೇಶಗಳಿಂದ ನೀರನ್ನು ತೆಗೆದುಹಾಕಲಾಗುತ್ತಿದೆ ಎಂದು ಶಿವಕುಮಾರ್ ಹೇಳಿದ್ದು, ರಕ್ಷಣಾ ತಂಡಗಳ ನಿಯೋಜನೆಯ ಬಗ್ಗೆ ದೃಢಪಡಿಸಿದ್ದಾರೆ. “ಪೀಡಿತ ಪ್ರದೇಶದಲ್ಲಿ ಇರುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅವರು ಕಳೆದ 48 ಗಂಟೆಗಳಿಂದ ಕೆಲಸ ಮಾಡುತ್ತಿದ್ದಾರೆ. ಪ್ರವಾಹದಿಂದ ಉಂಟಾಗುವ ಅಪಾಯಗಳಿಂದಾಗಿ ಕೇಂದ್ರೀಯ ವಿಹಾರ್ ಮತ್ತು ಟಾಟಾ ನಗರದಿಂದ 604 ಕುಟುಂಬಗಳನ್ನು ಸ್ಥಳಾಂತರಿಸಲಾಗುವುದು” ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಬೆಂಗಳೂರು | ಗೌರಿ ಹತ್ಯೆ ಆರೋಪಿಗಳಿಗೆ ಸನ್ಮಾನ ಖಂಡಿಸಿ ಪ್ರತಿಭಟನೆ


