Homeಮುಖಪುಟ"ನಿಮಗೆ ಮದ್ರಸಾ ಮೇಲೆ ಮಾತ್ರ ಏಕೆ ಕಣ್ಣು"? ಮಕ್ಕಳ ಹಕ್ಕುಗಳ ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

“ನಿಮಗೆ ಮದ್ರಸಾ ಮೇಲೆ ಮಾತ್ರ ಏಕೆ ಕಣ್ಣು”? ಮಕ್ಕಳ ಹಕ್ಕುಗಳ ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

- Advertisement -
- Advertisement -

“ಇತರ ಧರ್ಮಗಳ ಸಂಸ್ಥೆಗಳ ವಿರುದ್ಧ ಇದೇ ನಿಲುವನ್ನು ತೆಗೆದುಕೊಂಡಿದ್ದೀರಾ?” ಎಂದು ಮದ್ರಸಾ ಶಿಕ್ಷಣ ವ್ಯವಸ್ಥೆಯ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ (ಎನ್‌ಸಿಪಿಸಿಆರ್) ತೆಗೆದುಕೊಂಡ ನಿಲುವಿಗೆ ಪ್ರತಿಕ್ರಿಯೆಯಾಗಿ ಸುಪ್ರೀಂ ಕೋರ್ಟ್ ಮಂಗಳವಾರ (ಅ. 22) ಪ್ರಶ್ನಿಸಿದೆ.

ಇತರ ಧರ್ಮಗಳ ಮಕ್ಕಳು ಧಾರ್ಮಿಕ ಅಧ್ಯಯನ ಮತ್ತು ಪುರೋಹಿತಶಾಹಿ ತರಬೇತಿಗಾಗಿ ಸೇರುವ ಇದೇ ರೀತಿಯ ಸಂಸ್ಥೆಗಳಿವೆ ಎಂದು ಸೂಚಿಸಿದ ಸುಪ್ರೀಂ ಕೋರ್ಟ್, “ನಿಮಗೆ ಮದ್ರಸಾಗಳ ಮೇಲೆ ಮಾತ್ರ ಏಕೆ ಕಣ್ಣು ಅಥವಾ ಕಾಳಜಿ?” ಎಂದು ಕೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಅಲಹಾಬಾದ್ ಹೈಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿರುವ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿದ್ದಾಗ ಈ ಪ್ರಸಂಗ ನಡೆಯಿತು.

2004ರ ಉತ್ತರ ಪ್ರದೇಶದ ಮದರಸಾಗಳ ಕಾನೂನು ಜಾತ್ಯತೀತತೆಯ ತತ್ವಗಳನ್ನು ಉಲ್ಲಂಘಿಸುತ್ತದೆ ಎಂದಿರುವ ಹೈಕೋರ್ಟ್, ಅದನ್ನು ಅಸಂವಿಧಾನಿಕ ಎಂದು ಘೋಷಿಸಿದೆ.

ಪ್ರಸ್ತುತ ವಿಷಯದಲ್ಲಿ ಮಧ್ಯಪ್ರವೇಶಿಸಿರುವ ಎನ್‌ಸಿಪಿಸಿಆರ್, ಮದ್ರಸಾ ವ್ಯವಸ್ಥೆಗೆ ವಿವಿಧ ಆಕ್ಷೇಪಣೆಗಳನ್ನು ಎತ್ತುವ ವರದಿಯನ್ನು ಸಲ್ಲಿಸಿದ್ದು, ಮದ್ರಸಾ ಶಿಕ್ಷಣ ವ್ಯವಸ್ಥೆಯ ಮಾನದಂಡಗಳು ಶಿಕ್ಷಣ ಹಕ್ಕು ಕಾಯ್ದೆಗೆ (ಆರ್‌ಟಿಐ) ಅನುಗುಣವಾಗಿಲ್ಲ” ಎಂದು ಹೇಳಿದೆ.

ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಮೂರ್ತಿ ಪರ್ದಿವಾಲಾ ಅವರು, ಮದ್ರಸಾ ಪಠ್ಯಕ್ರಮದ ಕುರಿತು ಎನ್‌ಸಿಪಿಸಿಆರ್ ಆಳವಾದ ಅಧ್ಯಯನವನ್ನು ನಡೆಸಿದೆಯೇ? ಎಂದು ಪ್ರಶ್ನಿಸಿದ್ದಾರೆ.

“ಮದ್ರಸಾ ಪಠ್ಯಕ್ರಮವು ಧಾರ್ಮಿಕ ಬೋಧನೆಯ ಬಗ್ಗೆ ಮಾತನಾಡುತ್ತದೆಯೇ? ಧಾರ್ಮಿಕ ಬೋಧನೆ ಎಂದರೇನು? ನೀವು ಏನು ಅರ್ಥಮಾಡಿಕೊಂಡಿದ್ದೀರಿ? ನಿಮ್ಮ ವಾದದಲ್ಲಿ ‘ಧಾರ್ಮಿಕ ಭೋದನೆಗಳು’ ಎಂಬ ಪದವು ನಿಮ್ಮನ್ನು ಅತ್ತ ಸೆಳೆದಿರುವಂತೆ ಕಾಣುತ್ತಿದೆ. ಅದೇ ನಿಮ್ಮ ತಲೆಗೆ ಹೊಕ್ಕಿದೆ. ಅದಕ್ಕಾಗಿಯೇ ನೀವು ಅದರಿಂದ ಹೊರಬರುತ್ತಿಲ್ಲ. ನಿಮ್ಮ ವಾದವು ಸರಿಯಿಲ್ಲ” ಎಂದು ಚಾಟಿ ಬೀಸಿದ್ದಾರೆ.

ಇದನ್ನೂ ಓದಿ : ‘ಇಂಡಸ್ಟ್ರಿಯಲ್ ಆಲ್ಕೋಹಾಲ್’ ಮಾರಾಟದ ಮೇಲೆ ರಾಜ್ಯ ಸರ್ಕಾರಗಳು ಕಾನೂನು ರೂಪಿಸಬಹುದು: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....