Homeಮುಖಪುಟಮಹಾ ವಿಕಾಸ್ ಅಘಾಡಿ ಮೈತ್ರಿಯ ಸೀಟು ಹಂಚಿಕೆಯ 99% ಕೆಲಸ ಪೂರ್ಣ: ಸಂಜಯ್ ರಾವತ್

ಮಹಾ ವಿಕಾಸ್ ಅಘಾಡಿ ಮೈತ್ರಿಯ ಸೀಟು ಹಂಚಿಕೆಯ 99% ಕೆಲಸ ಪೂರ್ಣ: ಸಂಜಯ್ ರಾವತ್

- Advertisement -
- Advertisement -

ಮಹಾರಾಷ್ಟ್ರದ ವಿಪಕ್ಷಗಳ ಮಹಾ ವಿಕಾಸ್ ಅಘಾಡಿ ಮೈತ್ರಿಯ ಸೀಟು ಹಂಚಿಕೆಯ 99% ದಷ್ಟು ಕೆಲಸ ಪೂರ್ಣಗೊಂಡಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಅವರು ಬುಧವಾರ ಹೇಳಿದ್ದಾರೆ. ಮೂರು ಮೈತ್ರಿ ಪಕ್ಷಗಳ ನಾಯಕರು ಸಂಜೆ ವೇಳೆ ಸೀಟು ಹಂಚಿಕೆಯನ್ನು ಪ್ರಕಟಿಸುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ರಾವತ್, ತಮ್ಮ ಪಕ್ಷ 100 ಸ್ಥಾನಗಳಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಸೂಚಿಸಿದ್ದಾರೆ. ವಿಪಕ್ಷಗಳ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ಉನ್ನತ ನಾಯಕರು ಮಂಗಳವಾರ ತಡರಾತ್ರಿ ಮುಂಬೈಯಲ್ಲಿ ಸಭೆ ನಡೆಸಿ, ವಿಧಾನಸಭೆ ಚುನಾವಣೆಗೆ ಸೀಟು ಹಂಚಿಕೆಯ ಮಾತುಕತೆಯನ್ನು ಅಂತಿಮಗೊಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20 ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ವಿಪಕ್ಷಗಳ ಮಹಾ ವಿಕಾಸ್ ಅಘಾಡಿ ಮೈತ್ರಿಯಲ್ಲಿ ಶಿವಸೇನೆ (UBT), ಕಾಂಗ್ರೆಸ್ ಮತ್ತು NCP (SP) ಪಕ್ಷಗಳು ಇವೆ.

ಈ ಹಿಂದೆ ಸೀಟು ಹಂಚಿಕೆಯ ವಿಚಾರವಾಗಿ ಕಾಂಗ್ರೆಸ್ ಮತ್ತು ಶಿವಸೇನೆ (ಯುಬಿಟಿ) ಬಹಿರಂಗವಾಗಿ ಪರಸ್ಪರ ವಾಗ್ದಾಳಿ ನಡೆಸಿದ್ದವು. ಇದರ ನಂತರ ಹಿರಿಯ ರಾಜ್ಯ ಕಾಂಗ್ರೆಸ್ ನಾಯಕ ಬಾಳಾಸಾಹೇಬ್ ಥೋರಟ್ ಮಂಗಳವಾರ ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷ ಶರದ್ ಪವಾರ್ ಮತ್ತು ನಂತರ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿ ಭಿನ್ನಾಭಿಪ್ರಾಯ ಶಮನಮಾಡುವ ಪ್ರಯತ್ನ ಮಾಡಿದ್ದಾರೆ.

ನಂತರ, ಥೋರಟ್ ಮತ್ತು ಎಂವಿಎಯ ಇತರ ನಾಯಕರು ಮುಂಬೈನ ಹೋಟೆಲ್‌ನಲ್ಲಿ ಹಲವಾರು ಗಂಟೆಗಳ ಕಾಲ ಸಭೆ ನಡೆಸಿ ಚರ್ಚಿಸಿದ್ದಾರೆ. ಈ ಸಭೆ ಮಂಗಳವಾರ ತಡರಾತ್ರಿಯವರೆಗೂ ಮುಂದುವರೆದು ಸೀಟು ಹಂಚಿಕೆಯ ಬಗ್ಗೆ ಅಂತಿಮ ತೀರ್ಮಾನಕ್ಕೆ ಬಂದಿದ್ದಾರೆ.

ಸೀಟು ಹಂಚಿಕೆಯ ಶೇಕಡಾ ತೊಂಬತ್ತೊಂಬತ್ತು ಕೆಲಸ ಪೂರ್ಣಗೊಂಡಿದೆ. ಇಂದು ಸಂಜೆ ವೇಳೆಗೆ ಮೂರು ಪಕ್ಷಗಳ ನಾಯಕರು ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ರಾವತ್ ಬುಧವಾರ ಹೇಳಿದ್ದಾರೆ. “ಶಿವಸೇನೆ (ಉದ್ಧವ್ ಠಾಕ್ರೆ ನೇತೃತ್ವದ ಅವರ ಬಣವನ್ನು ಉಲ್ಲೇಖಿಸಿ) ಅನುಭವಿ ಆಟಗಾರ, ಆದ್ದರಿಂದ ಅದು ಶತಕ ಬಾರಿಸಬೇಕು. ಸೀಟುಗಳಲ್ಲಿ ಶತಕ ಬಾರಿಸಬೇಕು ಮತ್ತು ಒಟ್ಟಾರೆ ಗೆಲುವು ಪಡೆಯಬೇಕು ಎಂಬ ನಿರೀಕ್ಷೆ ಜನರಲ್ಲಿದೆ” ಎಂದು ಅವರು ಹೇಳಿದ್ದಾರೆ.

ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಶಿವಸೇನೆ (ಸಿಎಂ ಏಕನಾಥ್ ಶಿಂಧೆ ನೇತೃತ್ವದ), ಬಿಜೆಪಿ ಮತ್ತು ಎಂಎನ್‌ಎಸ್ ಅನ್ನು ತರಾಟೆಗೆ ತೆಗೆದುಕೊಂಡ ಸಂಜಯ್ ರಾವತ್, “ಎಂವಿಎ ಮೈತ್ರಿ ಸರ್ಕಾರವನ್ನು ರಚಿಸುತ್ತದೆ. ಅದಕ್ಕಾಗಿಯೇ ಮಿತ್ರಪಕ್ಷಗಳು ಸಮಯ ತೆಗೆದುಕೊಂಡಿವೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ಬಗ್ಗೆಯೂ ಚರ್ಚಿಸಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಇಂಡಸ್ಟ್ರಿಯಲ್ ಆಲ್ಕೋಹಾಲ್’ ಮಾರಾಟದ ಮೇಲೆ ರಾಜ್ಯ ಸರ್ಕಾರಗಳು ಕಾನೂನು ರೂಪಿಸಬಹುದು: ಸುಪ್ರೀಂ ಕೋರ್ಟ್

‘ಇಂಡಸ್ಟ್ರಿಯಲ್ ಆಲ್ಕೋಹಾಲ್’ ಮಾರಾಟದ ಮೇಲೆ ರಾಜ್ಯ ಸರ್ಕಾರಗಳು ಕಾನೂನು ರೂಪಿಸಬಹುದು: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...