Homeಮುಖಪುಟಬೆಂಗಳೂರಿನ ಟ್ರಾಫಿಕ್ ಜಾಮ್‌ಗೆ ಬೇಸತ್ತ ಟೆಕ್ಕಿಗಳು; ಫ್ಲೈಓವರ್ ಮೇಲೆ ವಾಹನಬಿಟ್ಟು ಮನೆಗೆ ತೆರಳಿದ ಜನರು

ಬೆಂಗಳೂರಿನ ಟ್ರಾಫಿಕ್ ಜಾಮ್‌ಗೆ ಬೇಸತ್ತ ಟೆಕ್ಕಿಗಳು; ಫ್ಲೈಓವರ್ ಮೇಲೆ ವಾಹನಬಿಟ್ಟು ಮನೆಗೆ ತೆರಳಿದ ಜನರು

- Advertisement -
- Advertisement -

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ಭಾರಿ ಮಳೆಯಿಂದಾಗಿ ಬುಧವಾರ ರಾತ್ರಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಅನೇಕ ಟೆಕ್ ವೃತ್ತಿಪರರು ಸೇರಿದಂತೆ ಸಾವಿರಾರು ಪ್ರಯಾಣಿಕರು ಮೂರು ಗಂಟೆಗಳಿಗೂ ಹೆಚ್ಚು ಕಾಲ ಮೇಲ್ಸೇತುವೆ ಮೇಲೆ ಸಿಲುಕಿಕೊಂಡಿದ್ದಾರೆ. ಇದರಿಂದ ಬೇಸತ್ತ ಕೆಲವರು ತಮ್ಮ ವಾಹನಗಳನ್ನು ಅಲ್ಲಿಯೇ ಬಿಟ್ಟು ಮನೆಗೆ ತೆರಳಿದ್ದಾರೆ.

ಜನರು ತಮ್ಮ ವಾಹನಗಳನ್ನು ಬಿಟ್ಟು ಕಾಲ್ನಡಿಗೆಯಲ್ಲಿ ತೆರಳುತ್ತಿರು ವಿಡಿಯೊಗಳು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

ಭಾರಿ ಮಳೆಯಿಂದಾಗಿ ಮೇಲ್ಸೇತುವೆಯ ರೂಪೇನಾ ಅಗ್ರಹಾರದಲ್ಲಿ ಗ್ರಿಡ್ಲಾಕ್ ಹದಗೆಟ್ಟಿದೆ, ತಮಿಳುನಾಡಿನಿಂದ ಬೆಂಗಳೂರಿನ ನಗರ ಕೇಂದ್ರಕ್ಕೆ ಟೆಕ್ ಕಾರಿಡಾರ್ ಅನ್ನು ಸಂಪರ್ಕಿಸುವ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ರಸ್ತೆಗಳಲ್ಲಿ ಮಳೆ ನೀರು ಸಂಗ್ರಹಗೊಂಡಿದ್ದರಿಂದ, ಹೆಚ್ಚಿನ ದಟ್ಟಣೆಯನ್ನು ತಡೆಯಲು ಸಂಚಾರ ಪೊಲೀಸರು ಮೇಲ್ಸೇತುವೆಯ ಒಂದು ಬದಿಯನ್ನು ಅನಿವಾರ್ಯವಾಗಿ ಮುಚ್ಚಿದರು.

ಬೆಂಗಳೂರಿನಲ್ಲಿ ಇಂದು ಮುಂಜಾನೆಯ ವೇಳೆಗೆ ಬಹುತೇಕ ಪ್ರದೇಶಗಳಲ್ಲಿ ನೀರು ಕಡಿಮೆಯಾದರೂ ಜಲಾವೃತಗೊಂಡ ಜಾಗಗಳಲ್ಲಿ ಪರಿಸ್ಥಿತಿಯನ್ನು ಇನ್ನಷ್ಟು ಸಂಕೀರ್ಣಗೊಳಿಸಿದವು. ಯಲಹಂಕದ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್ ಸೇರಿದಂತೆ ಕೆಲವು ಭಾಗಗಳಲ್ಲಿ ಈಗಲೂ ನೀರು ನಿಂತಿದೆ.

ಫ್ಲೈಓವರ್‌ ಮೇಲೆ ಸಿಲುಕಿ ಹತಾಶೆಗೊಂಡ ಪ್ರಯಾಣಿಕರಿಂದ ಸಾಮಾಜಿಕ ಮಾಧ್ಯಮಗಳು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಮನೆಯಿಂದ ಕೆಲಸ ಮಾಡುವ ಸರ್ಕಾರದ ಸಲಹೆಯನ್ನು ಕಂಪನಿಗಳು ಏಕೆ ಅನುಸರಿಸುತ್ತಿಲ್ಲ ಎಂದು ಎಕ್ಸ್‌ನಲ್ಲಿ ಪ್ರಶ್ನಿಸಿದ್ದಾರೆ. ಅಕ್ಟೋಬರ್ 23 ರಂದು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವಂತೆ ಕರ್ನಾಟಕ ಸರ್ಕಾರ ಈಗಾಗಲೇ ಖಾಸಗಿ ಕಂಪನಿಗಳಿಗೆ ಸಲಹೆ ನೀಡಿತ್ತು.

1.5 ಗಂಟೆಗಳ ಕಾಲ ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ಸಿಲುಕಿಕೊಂಡಿದ್ದಾಗಿ ಎಕ್ಸ್‌ನಲ್ಲಿ ಒಬ್ಬರು ಪೋಸ್ಟ್ ಮಾಡಿದ್ದಾರೆ. ಇಷ್ಟೊತ್ತಿಗೆ ನಾನು 30 ಕಿಮೀ ದೂರದಲ್ಲಿರುವ ನನ್ನ ಮನೆಗೆ ತಲುಪಿರಬೇಕಿತ್ತು ಎಂದು ಹೇಳಿದ್ದಾರೆ. ಸಂಜೆ 5:20 ಕ್ಕೆ ಲಾಗ್ ಔಟ್ ಮಾಡಿದರೂ, ನಾನು ಇನ್ನೂ ಸಿಕ್ಕಿಬಿದ್ದಿದ್ದೇನೆ. ದೀರ್ಘ ಕಾಳದ ಕಾಯುವಿಕೆಯಿಂದ ಬೇಸತ್ತ ಹಲವರು ಅನಿವಾರ್ಯವಾಗಿ ವಾಹನ ಬಿಟ್ಟು ನಡೆಯಲು ಪ್ರಾರಂಭಿಸಿದರು ಎಂದು ಹೇಳಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿಯಿಂದ ತಮ್ಮ ಪ್ರಯಾಣ ತಪ್ಪಿಸುವಂತೆ ಮತ್ತೊಬ್ಬ ಎಕ್ಸ್‌ ಬಳಕೆದಾರರು ಇತರರಿಗೆ ಎಚ್ಚರಿಕೆ ನೀಡಿದರು. “ಟ್ರಾಫಿಕ್‌ ಜಾಮ್‌ನಿಂದ ಸಂಪೂರ್ಣ ನರಕ. ಯಾರಾದರೂ ಈಗ ಎಲೆಕ್ಟ್ರಾನಿಕ್ ಸಿಟಿಗೆ ಪ್ರಯಾಣಿಸಲು ಯೋಜಿಸುತ್ತಿದ್ದರೆ, ಅದನ್ನು ಮಾಡಬೇಡಿ. ನನಗೆ ದ್ವಿಚಕ್ರ ವಾಹನದಲ್ಲಿ ಸಾಮಾನ್ಯ ಸಮಯಕ್ಕಿಂತ 4 ಪಟ್ಟು ಹೆಚ್ಚು ತೆಗೆದುಕೊಂಡಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ; ಪ್ರವಾಹದ ಭೀತಿ | ಭಾರೀ ಮಳೆಗೆ ಬೆಂಗಳೂರಿನ 100 ಕೆರೆಗಳು ಭರ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....