Homeಮುಖಪುಟಸಂಸದೀಯ ಸಮಿತಿ ಮುಂದೆ ಹಾಜರಾಗದ ಸೆಬಿ ಮುಖ್ಯಸ್ಥೆ ಬುಚ್

ಸಂಸದೀಯ ಸಮಿತಿ ಮುಂದೆ ಹಾಜರಾಗದ ಸೆಬಿ ಮುಖ್ಯಸ್ಥೆ ಬುಚ್

- Advertisement -
- Advertisement -

ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಅವರು ಗುರುವಾರ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಗೆ ಗೈರಾಗಿದ್ದು, ಸಭೆಯನ್ನು ಮುಂದೂಡಲಾಗಿದೆ. ಈ ನಡುವೆ ಸಮಿತಿಯ ಮುಖ್ಯಸ್ಥ ಕೆ.ಸಿ. ವೇಣುಗೋಪಾಲ್ ಅವರು ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಎನ್‌ಡಿಎ ಸದಸ್ಯರು ಲೋಕಸಭೆ ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ. ಸಂಸದೀಯ ಸಮಿತಿ

“ಬೆಳಿಗ್ಗೆ 9.30 ಕ್ಕೆ ಬುಚ್‌ ಅವರಿಂದ ಸಮಿತಿಗೆ ಮಾಹಿತಿ ಬಂದಿದ್ದು, ಅತ್ಯಗತ್ಯ ಕಾರಣಕ್ಕೆ ಅವರು ಮತ್ತು ಅವರ ತಂಡವು ಸಮಿತಿಯ ಮುಂದೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ” ಎಂದು ವೇಣುಗೋಪಾಲ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ತನ್ನ ಮೇಲಿನ ಸಮನ್ಸ್‌ನಗೆ ವಿನಾಯಿತಿ ನೀಡುವಂತೆ ಬುಚ್‌ ಅವರ ಕೋರಿಕೆಯನ್ನು ಈ ಹಿಂದೆ ಸಮಿತಿ ನಿರಾಕರಿಸಿತ್ತು ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮಹಿಳೆಯೊಬ್ಬರ ಕೋರಿಕೆಯನ್ನು ಪರಿಗಣಿಸಿ, ಇಂದಿನ ಸಭೆಯನ್ನು ಇನ್ನೊಂದು ದಿನಕ್ಕೆ ಮುಂದೂಡುವುದು ಉತ್ತಮ ಎಂದು ನಾವು ಭಾವಿಸಿದ್ದೇವೆ” ಎಂದು ವೇಣುಗೋಪಾಲ್ ಅವರು ಹೇಳಿದ್ದಾರೆ. ಈ ವೇಳೆ ಇತರ ವಿರೋಧ ಪಕ್ಷದ ಸದಸ್ಯರೊಂದಿಗೆ ಅವರು ಅಲ್ಲಿಂದ ನಿರ್ಗಮಿಸಿದ್ದಾರೆ. ಸಭೆ ಪ್ರಾರಂಭವಾದ ಕೆಲವೇ ನಿಮಿಷಗಳ ನಂತರ ಆಡಳಿತ ಮೈತ್ರಿಕೂಟ ಮತ್ತು ಇಂಡಿಯಾ ಒಕ್ಕೂಟದ ಸಂಸದರ ನಡುವೆ ಚಕಮಕಿ ನಡೆದಿದೆ ಎಂದು ವರದಿಯಾಗಿದೆ. ಸಂಸದೀಯ ಸಮಿತಿ

ಸಭೆ ಪ್ರಾರಂಭವಾಗಲು ಎರಡು ಗಂಟೆಗಳ ಅವಧಿಯಲ್ಲಿ ಬುಚ್ ತನ್ನ ನಿರ್ಧಾರದ ಬಗ್ಗೆ ಸಮಿತಿಗೆ ತಿಳಿಸುವುದು ಸಂಸದೀಯ ಸಮಿತಿಯ ತಿರಸ್ಕಾರಕ್ಕೆ ಸಮಾನವಾಗಿದೆ ಎಂದು ವಿರೋಧ ಪಕ್ಷದ ಸದಸ್ಯರೊಬ್ಬರು ಆರೋಪಿಸಿದ್ದಾರೆ. ಈ ನಡುವೆ ಕಾಂಗ್ರೆಸ್‌ನ ಹಿರಿಯ ನಾಯಕ ವೇಣುಗೋಪಾಲ್‌ ಅವರು ತಮ್ಮ ಅಭಿಪ್ರಾಯಗಳನ್ನು ಹೇಳಲು ಬಿಡುತ್ತಿಲ್ಲ ಎಂದು ಬಿಜೆಪಿ ಸದಸ್ಯರು ಆರೋಪಿಸಿದ್ದಾರೆ.

ಸಮಿತಿಯ ಸದಸ್ಯ ಮತ್ತು ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಸುದ್ದಿಗಾರರೊಂದಿಗೆ ಮಾತನಾಡಿ, ಹಲವು ಸ್ಥಾಯಿ ಸಮಿತಿಗಳು ವಿವಿಧ ಸಂಸ್ಥೆಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸುತ್ತವೆ ಎಂದು ಅವರು ಹೇಳಿದ್ದಾರೆ.

ಉದಾಹರಣೆಗೆ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಕೆಲಸವನ್ನು ಹಣಕಾಸು ಸಮಿತಿಯು ಪರಿಶೀಲಿಸುತ್ತದೆ. ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಮಿತಿಯು ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರವನ್ನು ಪರಿಶೀಲಿಸುತ್ತದೆ” ಎಂದು ಅವರು ಹೇಳಿದ್ದಾರೆ.

“ನಮ್ಮ ಮುಖ್ಯ ಆಕ್ಷೇಪವೆಂದರೆ ಅವರು (ವೇಣುಗೋಪಾಲ್) ಇತರ ಸದಸ್ಯರನ್ನು ಸಂಪರ್ಕಿಸದೆ ಸ್ವಯಂ ಪ್ರೇರಿತ ವಿಷಯಗಳ ಆಯ್ಕೆಯನ್ನು ಮಾಡುತ್ತಿದ್ದಾರೆ. ಅವರು ಸಿದ್ಧಪಡಿಸಿದ ಪಟ್ಟಿಯ ಬಗ್ಗೆ ಯಾರಿಗೂ ಸುಳಿವು ಇರಲಿಲ್ಲ” ಎಂದು ರವಿಶಂಕರ್ ಪ್ರಸಾದ್ ಅವರು ಹೇಳಿದ್ದಾರೆ.

ವೇಣುಗೋಪಾಲ್ ವಿರುದ್ಧ ತಮ್ಮ ಪ್ರತಿಭಟನೆಯನ್ನು ದಾಖಲಿಸಲು ಎನ್‌ಡಿಎ ಸದಸ್ಯರು ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿದ್ದಾರೆ. ಬುಚ್ ಅವರು ಅದಾನಿಗೆ ಸಹಾಯ ಮಾಡಿದ್ದಾರೆ ಎಂದು ಹಿಂಡೆನ್ ಬರ್ಗ್ ವರದಿಯ ನಂತರ ಅವರ ವಿರುದ್ಧ ಭಾರಿ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿತ್ತು.

ಇದನ್ನೂ ಓದಿ: ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್

ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...