ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣಕ್ಕೆ ಸಂಬಂಧಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಆದೇಶವನ್ನು ಎತ್ತಿಹಿಡಿದ ಏಕಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ರಾಜ್ಯಪಾಲರ ವಿರುದ್ಧ
ಅಕ್ಟೋಬರ್ 23 ರಂದು ಮೇಲ್ಮನವಿ ಸಲ್ಲಿಸಲಾಗಿದ್ದು, ಸೆಪ್ಟೆಂಬರ್ 24 ರಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ನೀಡಿದ್ದ ಆದೇಶವನ್ನು ರದ್ದುಗೊಳಿಸುವಂತೆ ಸಿದ್ದರಾಮಯ್ಯ ಕೋರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರ ಕಚೇರಿ, ದೂರುದಾರರಾದ ಟಿಜೆ ಅಬ್ರಹಾಂ, ಸ್ನೇಹಮಯಿ ಕೃಷ್ಣ ಮತ್ತು ಎಸ್ಪಿ ಪ್ರದೀಪ್ ಕುಮಾರ್ ಅವರನ್ನು ಈ ಪ್ರಕರಣದಲ್ಲಿ ಪ್ರತಿವಾದಿಗಳನ್ನಾಗಿ ಮಾಡಿದ್ದಾರೆ. ಮೇಲ್ಮನವಿಯನ್ನು ಹೈಕೋರ್ಟ್ ರಿಜಿಸ್ಟ್ರಿ ಪಟ್ಟಿ ಮಾಡಿದ್ದರೂ, ಅದನ್ನು ಇನ್ನಷ್ಟೆ ವಿಚಾರಣೆಗೆ ತೆಗೆದುಕೊಳ್ಳಬೇಕಾಗಿದೆ. ರಾಜ್ಯಪಾಲರ ವಿರುದ್ಧ
ಕಳೆದ ತಿಂಗಳು, ನ್ಯಾಯಮೂರ್ತಿ ನಾಗಪ್ರಸನ್ನ ಅವರು ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಗೆ ಮಂಜೂರು ಮಾಡಿದ ಮುಡಾ ಭೂಮಿಗೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳನ್ನು ದಾಖಲಿಸಲು ಮೂವರು ದೂರುದಾರರು ಸಲ್ಲಿಸಿದ್ದ ಅರ್ಜಿಗಳಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಆದೇಶ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದರು.
ಇದಾದ ನಂತರ ಕರ್ನಾಟಕ ಲೋಕಾಯುಕ್ತರು ಸಿದ್ದರಾಮಯ್ಯ ಮತ್ತು ಇತರ ಮೂವರ ವಿರುದ್ಧ ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಭ್ರಷ್ಟಾಚಾರ, ವಂಚನೆ ಮತ್ತು ಫೋರ್ಜರಿ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ್ದರು. ಅಲ್ಲದೆ, ಈ ಎಫ್‌ಐಆರ್ ಹಿನ್ನಲೆ ಇಡಿ ಕೂಡಾ ತನಿಖೆ ಪ್ರಾರಂಭಿಸಿದ್ದು, ಮೈಸೂರಿನ ಮುಡಾ ಕಚೇರಿ ಮೇಲೆ ದಾಳಿ ಮಾಡಿತ್ತು.
ಇದನ್ನೂ ಓದಿ: ಮುಡಾ ಪ್ರಕರಣ: ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿಹಿಡಿದ ಹೈಕೋರ್ಟ್, ಸಿದ್ದರಾಮಯ್ಯ ಅರ್ಜಿ ವಜಾ
ಮುಡಾ ಪ್ರಕರಣ: ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿಹಿಡಿದ ಹೈಕೋರ್ಟ್, ಸಿದ್ದರಾಮಯ್ಯ ಅರ್ಜಿ ವಜಾ


