ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ 48 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ಸಕೋಲಿ ಕ್ಷೇತ್ರದಿಂದ ರಾಜ್ಯ ಘಟಕದ ಅಧ್ಯಕ್ಷ ನಾನಾ ಪಟೋಲೆ, ಕರದ್ ದಕ್ಷಿಣ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಮತ್ತು ಬ್ರಹ್ಮಪುರಿ ಕ್ಷೇತ್ರದಿಂದ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಜಯ್ ವಾಡೆತ್ತಿವಾರ್ ಅವರನ್ನು ಕಣಕ್ಕಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಪಕ್ಷವು ಬಿಡುಗಡೆ ಮಾಡಿದ 48 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 25 ಹಾಲಿ ಶಾಸಕರನ್ನು ಉಳಿಸಿಕೊಂಡಿದೆ. ವಿಪಕ್ಷಗಳ ಒಕ್ಕೂಟವಾದ ಮಹಾ ವಿಕಾಸ್ ಅಘಾಡಿ ರಾಜ್ಯದ ಒಟ್ಟು 288 ಸ್ಥಾನಗಳಲ್ಲಿ 255 ಕ್ಷೇತ್ರಗಳನ್ನು ಹಂಚಿಕೊಂಡಿದೆ. ಉಳಿದ 33 ಸ್ಥಾನಗಳನ್ನು ತಮ್ಮ ನಡುವೆ ಮತ್ತು ಇಂಡಿಯಾ ಮೈತ್ರಿಯ ಇತರ ಸಣ್ಣ ಪಕ್ಷಗಳ ನಡುವೆ ಹಂಚಿಕೊಳ್ಳುವ ಬಗ್ಗೆ ಮೂರು ಮಿತ್ರಪಕ್ಷಗಳು ಚರ್ಚಿಸುತ್ತಿವೆ.
ಗುರುವರ ಸಂಜೆ ಇಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ 288 ಸ್ಥಾನಗಳಲ್ಲಿ 270 ಸ್ಥಾನಗಳಿಗೆ ಒಮ್ಮತಕ್ಕೆ ಬರಲಾಗಿದೆ ಎಂದು ಹೇಳಿದ್ದಾರೆ.
“ನಾವು ಸಮಾಜವಾದಿ ಪಕ್ಷ, PWP, CPI(M), CPI ಮತ್ತು AAP ಅನ್ನು ಸೇರಿಸಿಕೊಳ್ಳುತ್ತೇವೆ. ಉಳಿದ ಸ್ಥಾನಗಳಿಗೆ ಇನ್ನೂ ಚರ್ಚೆಗಳು ನಡೆಯುತ್ತಿವೆ. ನಾವು 270 ಸ್ಥಾನಗಳಲ್ಲಿ ಸೌಹಾರ್ದಯುತವಾಗಿ ಒಮ್ಮತಕ್ಕೆ ಬಂದಿದ್ದೇವೆ. ಮಹಾಯುತಿ ಸರ್ಕಾರವನ್ನು ಸೋಲಿಸಲು ಮಹಾವಿಕಾಸ್ ಅಘಾಡಿ ಒಗ್ಗಟ್ಟಿನಿಂದ ನಿಂತಿದೆ” ಎಂದು ರಾವತ್ ಹೇಳಿದ್ದಾರೆ.
ಸಂಜಯ್ ರಾವತ್ ಅವರ ಮಾತನ್ನೆ ಕಾಂಗ್ರೆಸ್ ಅಧ್ಯಕ್ಷ ಪಟೋಲೆ ಕೂಡಾ ಹೇಳಿದ್ದು, ಉಳಿದ ಸ್ಥಾನಗಳನ್ನು ಸಣ್ಣ ಪಕ್ಷಗಳಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಆಡಳಿತಾರೂಢ ಮಹಾಯುತಿ ಮೈತ್ರಿಕೂಟವು ಏಕನಾಥ್ ಶಿಂಧೆ ಅವರ ಶಿವಸೇನೆ, ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯನ್ನು ಒಳಗೊಂಡಿದೆ. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.
ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಹೆಸರು ಶಿಫಾರಸು
ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಹೆಸರು ಶಿಫಾರಸು


