ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ನೋಯ್ ಬಂಧನಕ್ಕೆ ಮಾಹಿತಿ ನೀಡುವವರಿಗೆ ಎನ್‌ಐಎ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ಪ್ರಸ್ತುತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಬಂಧನದಲ್ಲಿದ್ದು ಜೈಲಿನಲ್ಲಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಸಹೋದರ
2022ರಲ್ಲಿ ದಾಖಲಾದ ಎರಡು ಎನ್‌ಐಎ ಪ್ರಕರಣಗಳಲ್ಲಿ ಅನ್ಮೋಲ್ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದ್ದು, ನಕಲಿ ಪಾಸ್‌ಪೋರ್ಟ್ ಮೂಲಕ ಭಾರತದಿಂದ ಪರಾರಿಯಾಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಏಪ್ರಿಲ್‌ನಲ್ಲಿ ನಡೆದ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಯ ಹೊಣೆಯನ್ನು ಅನ್ಮೋಲ್ ಫೇಸ್‌ಬುಕ್ ಮೂಲಕ ಹೊತ್ತುಕೊಂಡಿದ್ದ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಅನ್ಮೋಲ್ ಅಲಿಯಾಸ್ ಭಾನು ಮೇ 29, 2022 ರಂದು ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಕೊಂದ ಆರೋಪಿಗಳಿಗೆ ಶಸ್ತ್ರಾಸ್ತ್ರಗಳು ಮತ್ತು ಲಾಜಿಸ್ಟಿಕ್ಸ್ ಪೂರೈಕೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಆತನ ವಿರುದ್ಧ ಸುಲಿಗೆಗೆ ಸಂಬಂಧಿಸಿದ 18 ಪ್ರಕರಣಗಳು ದಾಖಲಾಗಿವೆ. ಲಾರೆನ್ಸ್ ಬಿಷ್ಣೋಯ್ ಸಹೋದರ
ಸಂಘಟಿತ ಅಪರಾಧದಲ್ಲಿ ಭಾಗಿಯಾಗಿರುವ ಕಾರಣ ಎನ್‌ಐಎ ಅನ್ಮೋಲ್‌ಗಾಗಿ ಹುಡುಕಾಟವನ್ನು ತೀವ್ರಗೊಳಿಸುತ್ತಿದೆ ಮತ್ತು ಅಧಿಕಾರಿಗಳು ಅವನನ್ನು ಪತ್ತೆಹಚ್ಚಲು ಸಹಾಯ ಮಾಡುವ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಲು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.
ಕಳೆದ ವರ್ಷ ಕೇಂದ್ರ ಗೃಹ ಸಚಿವಾಲಯ ಸಿದ್ಧಪಡಿಸಿದ ಕುಖ್ಯಾತ ದರೋಡೆಕೋರರ ಪಟ್ಟಿಯಲ್ಲಿ ಈತ ಇದ್ದಾನೆ. 2023 ರಲ್ಲಿ, ಎನ್‌ಐಎ ಲಾರೆನ್ಸ್ ಮತ್ತು ಅನ್ಮೋಲ್ ಸೇರಿದಂತೆ 14 ಜನರ ವಿರುದ್ಧ ಚಾರ್ಜ್‌ಶೀಟ್ ಅನ್ನು ಸಲ್ಲಿಸಿತ್ತು. ಭಯೋತ್ಪಾದನೆ ಸೃಷ್ಟಿಸುವ ಮತ್ತು ಪ್ರಸಿದ್ಧ ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರು, ಚಲನಚಿತ್ರ ತಾರೆಯರು, ಗಾಯಕರು ಮತ್ತು ಉದ್ಯಮಿಗಳ ಉದ್ದೇಶಿತ ಹತ್ಯೆಗಳನ್ನು ನಡೆಸಲು ಕ್ರಿಮಿನಲ್ ಪಿತೂರಿ ನಡೆಸಿದ್ದಾರೆ ಎಂದು ಅದು ಆರೋಪ ಹೊರಿಸಿತ್ತು.
ಇದನ್ನೂ ಓದಿ: ಕಲಬುರಗಿ: ದಲಿತ ಸಮುದಾಯದ ಅಂಗನವಾಡಿ ಕಾರ್ಯಕರ್ತೆ ಮೇಲೆ ಎಸ್‌ಡಿಎಂಸಿ ಅಧ್ಯಕ್ಷರಿಂದ ಹಲ್ಲೆ
ಕಲಬುರಗಿ: ದಲಿತ ಸಮುದಾಯದ ಅಂಗನವಾಡಿ ಕಾರ್ಯಕರ್ತೆ ಮೇಲೆ ಎಸ್‌ಡಿಎಂಸಿ ಅಧ್ಯಕ್ಷರಿಂದ ಹಲ್ಲೆ


