ಮಧ್ಯಪ್ರದೇಶದ ರೇವಾ ಜಿಲ್ಲೆಯ ಗುರ್ಹ್ ಪ್ರದೇಶದ ಭೈರವ್ ಬಾಬಾ ದೇವಸ್ಥಾನದಲ್ಲಿ ಪತಿಯೊಂದಿಗೆ ವಿಹಾರಕ್ಕೆ ಹೋಗುತ್ತಿದ್ದ ನವವಿವಾಹಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಪೊಲೀಸರು ಈ ವರೆಗೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ದೇವಸ್ಥಾನಕ್ಕೆ ತೆರಳಿದ್ದ
ಘಟನೆ ಅಕ್ಟೋಬರ್ 21 ರಂದು ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಡಿದ ಅಮಲಿನಲ್ಲಿ 7-8 ಮಂದಿ ದುಷ್ಕರ್ಮಿಗಳು ನವವಿವಾಹಿತ ದಂಪತಿಯನ್ನು ಹಿಡಿದಿಟ್ಟು ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಇದೇ ವೇಳೆ ಆರೋಪಿಗಳು ಮಹಿಳೆಯ ಖಾಸಗಿ ವೀಡಿಯೊವನ್ನು ಚಿತ್ರೀಕರಿಸಿದ್ದು, ಘಟನೆಯನ್ನು ಪೊಲೀಸರಿಗೆ ತಿಳಿಸಿದರೆ ಅದನ್ನು ಸಾರ್ವಜನಿಕಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಆರೋಪಿಗಳ ಬೆದರಿಕೆಯಿಂದ ಹೆದರಿದ ದಂಪತಿಗಳು ಒಂದು ದಿನ ಮೌನವಾಗಿದ್ದರು. ಆದರೆ ನಂತರ ಮರುದಿನ ಗುರ್ಹ್ ಪೊಲೀಸ್ ಠಾಣೆಗೆ ತೆರಳಿ ಈ ಭಯಾನಕ ಘಟನೆಯ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.
“ಇದು ಸೂಕ್ಷ್ಮ ಪ್ರಕರಣವಾಗಿದ್ದು, ಪೊಲೀಸರು ಮತ್ತು ವಿಧಿವಿಜ್ಞಾನ ತಜ್ಞರ ಬಹು ತಂಡಗಳು ತನಿಖೆ ನಡೆಸುತ್ತಿವೆ” ಎಂದು ರೇವಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿವೇಕ್ ಸಿಂಗ್ ಅವರು ಹೇಳಿದ್ದಾರೆ. ದೇವಸ್ಥಾನಕ್ಕೆ ತೆರಳಿದ್ದ
ಆಪಾದಿತ ಸಾಮೂಹಿಕ ಅತ್ಯಾಚಾರವನ್ನು ಸೂಕ್ಷ್ಮ ಪ್ರಕರಣ ಎಂದು ಕರೆದ ಅವರು, ಸಂತ್ರಸ್ತರ ಗುರುತನ್ನು ಬಹಿರಂಗಪಡಿಸದಂತೆ ಖಚಿತಪಡಿಸಿಕೊಳ್ಳಲು ಪೊಲೀಸರು ಎಚ್ಚರಿಕೆಯಿಂದ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಐವರಲ್ಲಿ ಒಬ್ಬನ ಕೈ ಮತ್ತು ಎದೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.
“ನಾವು ಇದುವರೆಗೆ ಐವರು ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದೇವೆ. ಉಳಿದ ಆರೋಪಿಗಳ ಪತ್ತೆಗಾಗಿ ರೇವಾ ಮತ್ತು ಅಕ್ಕಪಕ್ಕದ ಜಿಲ್ಲೆಗಳಲ್ಲಿ ದಾಳಿ ನಡೆಸಲಾಗುತ್ತಿದೆ” ಎಂದು ವಿವೇಕ್ ಸಿಂಗ್ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಆರೋಪಿಗಳು ಮಹಿಳೆಯ ಪತಿಯನ್ನು ಮರಕ್ಕೆ ಕಟ್ಟಿಹಾಕಿ, ಅವರ ಹೆಂಡತಿಯನ್ನು ಅವರ ಮುಂದೆಯೆ ಐವರು ಆರೋಪಿಗಳು ಅತ್ಯಾಚಾರ ಮಾಡಿದ್ದಾರೆ ಎಂದು ವರದಿಗಳಿವೆ. ಅದಾಗ್ಯೂ, ಈ ವರದಿಯನ್ನು ಪೊಲೀಸರು ನಿರಾಕರಿಸಿದ್ದಾರೆ.
“ಪತಿಯನ್ನು ಕೆಲವು ಪುರುಷರು ಹಿಡಿದಿಟ್ಟಿದ್ದರು. ಆದರೆ ಯಾವುದೇ ಮರಕ್ಕೆ ಕಟ್ಟಿ ಹಾಕಿಲ್ಲ ಎಂದು ದಂಪತಿಗಳ ಹೇಳಿಕೆಗಳು ಬಹಿರಂಗಪಡಿಸುತ್ತವೆ. ಆದರೆ ಅವರ ಹೆಂಡತಿಯನ್ನು ಐವರು ದುಷ್ಕರ್ಮಿಗಳು ಅಲ್ಲೆ ಹತ್ತಿರದ ಸ್ಥಳಕ್ಕೆ ಕರೆದುಕೊಂಡು ಹೋಗಿ, ನಂತರ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಸಾಮೂಹಿಕ ಅತ್ಯಾಚಾರ ಸೇರಿದಂತೆ ಅನೇಕ BNS ಸೆಕ್ಷನ್‌ಗಳ ಅಡಿಯಲ್ಲಿ ಸ್ಥಳೀಯ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ. ಇಡೀ ಅಪರಾಧದಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಪೂರ್ವ ಸಂಸದೀಯ ರೇವಾ ಮತ್ತು ಪಕ್ಕದ ಮೌಗಂಜ್ ಜಿಲ್ಲೆಯವರು ಎಂದು ವರದಿಯಾಗಿದೆ ಎಂದು ಎಸ್ಪಿ ವಿವೇಕ್ ಸಿಂಗ್ ಹೇಳಿದ್ದಾರೆ.
ಮುಖ್ಯವಾಗಿ, ಸೋಮವಾರ-ಮಂಗಳವಾರದ ನಸುಕಿನ ವೇಳೆ ಇಂದೋರ್‌ನ ಸದರ್ ಬಜಾರ್ ಪ್ರದೇಶದಲ್ಲಿ 35 ವರ್ಷದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಕಾರ್ಮಿಕನಿಂದ ಅತ್ಯಾಚಾರಕ್ಕೊಳಗಾದ ಕೆಲವೇ ಗಂಟೆಗಳ ಮೊದಲು ಈ ಭಯಾನಕ ಘಟನೆ ಸಂಭವಿಸಿದೆ.
ನಂತರ ಅದೇ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ (ಬೆಳಿಗ್ಗೆ 3 ರಿಂದ 4 ಗಂಟೆಯ ನಡುವೆ) ಯುವಕ ಮಹಿಳೆಯೊಂದಿಗೆ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಆಕೆಯ ವೈದ್ಯಕೀಯ ಪರೀಕ್ಷೆಯಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿದೆ.
ನಂತರ ಪೊಲೀಸರು ಹೆಚ್ಚಿನ ತನಿಖೆ ನಡೆಸಿದ್ದು, ಆರೋಪಿಯನ್ನು 20 ವರ್ಷದ ಸೋನು ಎಂದು ಗುರುತಿಸಿದ್ದಾರೆ. ಕೂಲಿ ಕಾರ್ಮಿಕನಾಗಿದ್ದ ಸೋನುವನ್ನು ಮಂಗಳವಾರ ಕೆಲವೇ ಗಂಟೆಗಳಲ್ಲಿ ಬಂಧಿಸಲಾಯಿತು. ನೀಲಕಂಠ ಕಾಲೋನಿ ಪ್ರದೇಶದ ತ್ಯಾಜ್ಯ ಸಂಸ್ಕರಣಾ ಘಟಕದ ಬಳಿ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಗಳು ಹೇಳಿವೆ.
ಇದನ್ನೂ ಓದಿ: ಕಲಬುರಗಿ: ದಲಿತ ಸಮುದಾಯದ ಅಂಗನವಾಡಿ ಕಾರ್ಯಕರ್ತೆ ಮೇಲೆ ಎಸ್‌ಡಿಎಂಸಿ ಅಧ್ಯಕ್ಷರಿಂದ ಹಲ್ಲೆ
ಕಲಬುರಗಿ: ದಲಿತ ಸಮುದಾಯದ ಅಂಗನವಾಡಿ ಕಾರ್ಯಕರ್ತೆ ಮೇಲೆ ಎಸ್‌ಡಿಎಂಸಿ ಅಧ್ಯಕ್ಷರಿಂದ ಹಲ್ಲೆ


