ಉಪಚುನಾವಣೆ ಎದುರಿಸುತ್ತಿರುವ ಮೂರು ವಿಧಾನಸಭಾ ಕ್ಷೇತ್ರಗಳಿಗೆ ತಮ್ಮ ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನವೆಂಬರ್ 13 ರಂದು ಚುನಾವಣೆ ನಡೆಯಲಿರುವ ಎಲ್ಲಾ ಮೂರು ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಶುಕ್ರವಾರ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ. ಉಪ ಚುನಾವಣೆ
ಪಕ್ಷವು ಉಪಚುನಾವಣೆಗೆ ಮುಂಚಿತವಾಗಿ ಸಿದ್ಧತೆಗಳನ್ನು ಪ್ರಾರಂಭಿಸಿದೆ ಮತ್ತು ಅವರ ಗೆಲುವನ್ನು ಖಚಿತಪಡಿಸಿಕೊಳ್ಳಲು ಸಮರ್ಥ ಅಭ್ಯರ್ಥಿಗಳನ್ನು ಸಹ ಘೋಷಿಸಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಉಪ ಚುನಾವಣೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಕೇಂದ್ರ ಸಚಿವ ಹಾಗೂ ರಾಜ್ಯ ಜೆಡಿಎಸ್ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಭಾವನಾತ್ಮಕ ಚುನಾವಣಾ ಭಾಷಣಗಳ ಕುರಿತು ಮಾತನಾಡಿದ ಅವರು, ಪ್ರತಿ ಬಾರಿ ಇಂತಹ ಭಾಷಣಗಳಿಂದ ಜನರು ಪ್ರಭಾವಿತರಾಗುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.
ಶಿಗ್ಗಾಂವಿ ಕ್ಷೇತ್ರಕ್ಕೆ ಪಕ್ಷದ ಅಭ್ಯರ್ಥಿ ಯಾಸೀರ್ ಅಹಮದ್ ಖಾನ್ ಪಠಾಣ್ ಹಾಗೂ ಅಜೀಂಪೀರ್ ಖಾದ್ರಿ ನಡುವೆ ಪೈಪೋಟಿ ಏರ್ಪಟ್ಟಿರುವುದನ್ನು ಒಪ್ಪಿಕೊಂಡ ಸಿದ್ದರಾಮಯ್ಯ, “ಪಠಾಣ್ ಅವರು ಹಿಂದಿನ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದು, ಪಕ್ಷ ಅವರಿಗೆ ಮತ್ತೊಮ್ಮೆ ಅವಕಾಶ ನೀಡಬೇಕೆಂದು ಬಯಸಿದೆ. ಖಾದ್ರಿ ಅವರು ಕೂಡಾ ಕ್ಷೇತ್ರದ ಸಮರ್ಥ ನಾಯಕರಾಗಿದ್ದು, ಬಂಡಾಯವಾಗಿ ಸ್ಪರ್ಧಿಸದಂತೆ ಖಾದ್ರಿ ಅವರಿಗೆ ಮನವರಿಕೆ ಮಾಡಿಕೊಡುತ್ತೇವೆ” ಎಂದು ಹೇಳಿದ್ದಾರೆ.
ಹಿಂದಿನ ಚುನಾವಣೆಯಲ್ಲಿ ಪಠಾಣ್ ಅವರು 60 ಸಾವಿರಕ್ಕೂ ಹೆಚ್ಚು ಮತಗಳನ್ನು ಗಳಿಸಿದ್ದು, ಅವರು ಅಸಾಧಾರಣ ಎದುರಾಳಿ ಎಂಬುವುದನ್ನು ಸಾಬೀತುಪಡಿಸಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. 2023ರಲ್ಲಿ ಶಿಗ್ಗಾಂವಿಯಿಂದ ಬಿಜೆಪಿ ಗೆದ್ದರೂ ಕಾಂಗ್ರೆಸ್ ಅಭ್ಯರ್ಥಿ ತೀವ್ರ ಪೈಪೋಟಿ ಒಡ್ಡಿದ್ದರು ಎಂದು ಅವರು ಒತ್ತಿ ಹೇಳಿದ್ದಾರೆ.ಲೋಕಸಭೆ ಚುನಾವಣೆಯ ವೇಳೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್ 8,500 ಮತಗಳ ಮುನ್ನಡೆ ಸಾಧಿಸಿತ್ತು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಠಾಣೆಯ ಎಲ್ಲ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಕಡ್ಡಾಯ; ಪೊಲೀಸ್ ಮಹಾನಿರ್ದೇಶಕರಿಗೆ ಹೈಕೋರ್ಟ್ ನಿರ್ದೇಶನ


