HomeUncategorizedಮಹಾರಾಷ್ಟ್ರ | ಸೀಟು ಹಂಚಿಕೆ ಒಪ್ಪಂದಕ್ಕಿಂತ 2 ಹೆಚ್ಚುವರಿ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್!

ಮಹಾರಾಷ್ಟ್ರ | ಸೀಟು ಹಂಚಿಕೆ ಒಪ್ಪಂದಕ್ಕಿಂತ 2 ಹೆಚ್ಚುವರಿ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್!

- Advertisement -
- Advertisement -

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 39 ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಆದರೆ, ವಿಪಕ್ಷಗಳ ಮೈತ್ರಿಯಾದ ಮಹಾ ವಿಕಾಸ್ ಅಘಾಡಿಯ ಸೀಟು ಹಂಚಿಕೆ ಒಪ್ಪಂದದಂತೆ 85 ಸೀಟು ಕಾಂಗ್ರೆಸ್‌ಗೆ ಹಂಚಿಕೆಯಾಗಿದ್ದರೂ ಪಕ್ಷವೂ ಇಬ್ಬರು ಹೆಚ್ಚುವರಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಪಕ್ಷವು ಇದುವರೆಗೆ 87 ಅಭ್ಯರ್ಥಿಗಳನ್ನು ಘೋಷಿಸಿದೆ.

288 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಮಹಾರಾಷ್ಟ್ರ ಚುನಾವಣೆಯಲ್ಲಿ ಕಾಂಗ್ರೆಸ್, ಎನ್‌ಸಿಪಿ (ಶರದ್ ಪವಾರ್), ಮತ್ತು ಶಿವಸೇನೆ (ಉದ್ಧವ್ ಠಾಕ್ರೆ) ಒಳಗೊಂಡ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿ ಪಕ್ಷಗಳು ತಲಾ 85 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಸೀಟು ಹಂಚಿಕೆ ಒಪ್ಪಂದವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಶನಿವಾರ ಸಂಜೆ ಕಾಂಗ್ರೆಸ್ ಬಿಡುಗಡೆ ಮಾಡಿದ ಮೂರನೇ ಪಟ್ಟಿಯಲ್ಲಿ 16 ಅಭ್ಯರ್ಥಿಗಳಿದ್ದರೆ, ಮಧ್ಯಾಹ್ನದ ನಂತರ ಬಿಡುಗಡೆ ಮಾಡಿದ ಎರಡನೇ ಪಟ್ಟಿಯಲ್ಲಿ 23 ಅಭ್ಯರ್ಥಿಗಳಿದ್ದರು. ಈ ನಡುವೆ ನಾಗ್ಪುರ ದಕ್ಷಿಣ ಕ್ಷೇತ್ರಕ್ಕಾಗಿ ಕಾಂಗ್ರೆಸ್ ಮತ್ತು ಶಿವಸೇನೆ (ಯುಬಿಟಿ) ಹಕ್ಕು ಮಂಡಿಸುತ್ತಿದ್ದರೂ, ಈ ವಿವಾದಿತ ಕ್ಷೇತ್ರದಲ್ಲಿ ಕಾಂಗ್ರೆಸ್ ಗಿರೀಶ್ ಪಾಂಡವ್ ಅವರನ್ನು ಕಣಕ್ಕಿಳಿಸಿದೆ. ಪಕ್ಷವು 48 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ.

ಶುಕ್ರವಾರ ಸಂಜೆ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಯಿತು. ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಕೆ ಸಿ ವೇಣುಗೋಪಾಲ್ ಮತ್ತು ರಾಜ್ಯ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.

ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಭಾಗವಾಗಿ ಎಲ್ಲಾ ಘಟಕ ಪಕ್ಷಗಳಿಗೆ ಪ್ರಾತಿನಿಧ್ಯ ನೀಡಲಾಗುವುದು ಎಂದು ಎಐಸಿಸಿ ಮಹಾರಾಷ್ಟ್ರ ಉಸ್ತುವಾರಿ ರಮೇಶ್ ಚೆನ್ನಿತ್ತಲ ಹೇಳಿದ್ದಾರೆ. “ಸಮಾಜವಾದಿ ಪಕ್ಷ, ಸಿಪಿಎಂ, ಸಿಪಿಐ ಮತ್ತು ಎಎಪಿ ಮಹಾ ವಿಕಾಸ್ ಅಘಾಡಿಯ ಭಾಗವಾಗಿದೆ. ಎಲ್ಲ ಪಕ್ಷಗಳಿಗೂ ಪ್ರಾತಿನಿಧ್ಯ ನೀಡುತ್ತಿದ್ದೇವೆ, ಆದರೆ ಸೀಟುಗಳು ಸೀಮಿತವಾಗಿವೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ, ಹಲವಾರು ಹಾಲಿ ಶಾಸಕರನ್ನು ಉಳಿಸಿಕೊಂಡಿದ್ದು, ನಾನಾ ಪಟೋಲೆ ಮತ್ತು ಮಾಜಿ ಸಿಎಂ ಪೃಥ್ವಿರಾಜ್ ಚವಾಣ್ ಸೇರಿದಂತೆ ಹಿರಿಯ ನಾಯಕರನ್ನು ಕಣಕ್ಕಿಳಿಸಿದೆ. ಪಕ್ಷವು ನಾಗ್ಪುರ ಉತ್ತರ ಮತ್ತು ಸಂಗಮ್ನೇರ್‌ನಿಂದ ಮಾಜಿ ಸಚಿವರಾದ ನಿತಿನ್ ರಾವತ್ ಮತ್ತು ಬಾಳಾಸಾಹೇಬ್ ಥೋರಟ್ ಅವರನ್ನು ಕಣಕ್ಕಿಳಿಸಿದೆ.

ಇದನ್ನೂ ಓದಿ:  ಆಪ್ ಸರ್ಕಾರದ ವಿರುದ್ಧ ಪ್ರತಿಭಟಿಸಿ ಯಮುನಾ ನದಿಯಲ್ಲಿ ಮುಳುಗೆದ್ದಿದ್ದ ದೆಹಲಿ ಬಿಜೆಪಿ ಅಧ್ಯಕ್ಷ ಆಸ್ಪತ್ರೆಗೆ ದಾಖಲು

ಆಪ್ ಸರ್ಕಾರದ ವಿರುದ್ಧ ಪ್ರತಿಭಟಿಸಿ ಯಮುನಾ ನದಿಯಲ್ಲಿ ಮುಳುಗೆದ್ದಿದ್ದ ದೆಹಲಿ ಬಿಜೆಪಿ ಅಧ್ಯಕ್ಷ ಆಸ್ಪತ್ರೆಗೆ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...