Homeಮುಖಪುಟ'ದೊಡ್ಡವರನ್ನು ಉಳಿಸಲು' ಮಾಧಬಿ ಬುಚ್‌ರನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ: ಕಾಂಗ್ರೆಸ್ ಆರೋಪ

‘ದೊಡ್ಡವರನ್ನು ಉಳಿಸಲು’ ಮಾಧಬಿ ಬುಚ್‌ರನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ: ಕಾಂಗ್ರೆಸ್ ಆರೋಪ

- Advertisement -
- Advertisement -

ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ(ಸೆಬಿ) ಅಧ್ಯಕ್ಷೆ ಮಾಧಬಿ ಪುರಿ ಬುಚ್ ಅವರು ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆಗೆ ಗೈರಾದ ಎರಡು ದಿನಗಳ ನಂತರ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ದಾಳಿ ಮಾಡಿದ್ದು, “ಈ ಪ್ರಕರಣದಲ್ಲಿ ದೊಡ್ಡವರನ್ನು ಉಳಿಸಲು ಕೇಂದ್ರ ಸರ್ಕಾರದ ಪ್ರಯತ್ನಿಸುತ್ತಿದೆ” ಎಂದು ಶನಿವಾರ ಆರೋಪಿಸಿದೆ.

ಆಗಸ್ಟ್‌ನಲ್ಲಿ ಬುಚ್‌ ವಿರುದ್ಧ ಅದಾನಿ ಗ್ರೂಪ್‌ನಿಂದ ಹಣಕಾಸಿನ ದುರುಪಯೋಗಕ್ಕೆ ಸಂಬಂಧಿಸಿದ ಆರೋಪ ಮಾಡಲಾಗಿತ್ತು. ಈ ಹಗರಣದಲ್ಲಿ ಅವರಿಗೆ ಸಂಸದೀಯ ಸಮಿತಿ ಸಮನ್ಸ್‌ ನೀಡಿತ್ತು. ಆದಾಗ್ಯೂ, ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಸಮಿತಿ ಮುಂದೆ ಹಾಜರಾಗಿರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಮುಂದೆ ಸೆಬಿ ಮುಖ್ಯಸ್ಥರು “ಪ್ರಶ್ನೆಗಳಿಗೆ ಉತ್ತರಿಸಲು ಯಾಕೆ ಹಿಂಜರಿಯುತ್ತಿದ್ದಾರೆ. ಸಂಸದೀಯ ಸಮಿತಿಗೆ ಉತ್ತರದಾಯಿಯಾಗದಂತೆ ಅವರನ್ನು ರಕ್ಷಿಸುತ್ತಿರುವ ಯೋಜನೆಯ ಹಿಂದೆ ಯಾರಿದ್ದಾರೆ?” ” ಎಂದು ಕಾಂಗ್ರೆಸ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಶನಿವಾರ ಪ್ರಶ್ನಿಸಿದ್ದಾರೆ.

“ಕೋಟ್ಯಂತರ ಸಣ್ಣ-ಮಧ್ಯಮ ಹೂಡಿಕೆದಾರರು ಕಷ್ಟಪಟ್ಟು ಸಂಪಾದಿಸಿದ ಹೂಡಿಕೆಯನ್ನು ಅಪಾಯಕ್ಕೆ ಸಿಲುಕಿಸಲು ಮತ್ತು ಮೋದಿ ಅವರ ಆತ್ಮೀಯ ಸ್ನೇಹಿತ [ಕೈಗಾರಿಕಾ ಉದ್ಯಮಿ ಗೌತಮ್] ಅದಾನಿಗೆ ಲಾಭ ಪಡೆಯಲು ಮಾಡಿದ ಪಿತೂರಿ ಇದರ ಹಿಂದೆ ಇದೆಯೇ?” ಎಂದು ಅವರು ಕೇಳಿದ್ದಾರೆ.

ಅದಾನಿ ಗ್ರೂಪ್‌ನ ಸ್ಟಾಕ್ ಬೆಲೆ ತಿದ್ದುಪಡಿ ಮಾಡುವಲ್ಲಿ ಮತ್ತು ವಿದೇಶಗಳಲ್ಲಿ ನಡೆದ ಮನಿ ಲಾಂಡರಿಂಗ್‌ಗೆ ಸಂಬಂಧಿಸಿದ ಪ್ರಕಣದಲ್ಲಿ ಸೆಬಿ ಮುಖ್ಯಸ್ಥೆ ಮತ್ತು ಅವರ ಪತಿ ಧವಲ್ ಬುಚ್ ಅವರ ಕೈವಾಡ ಇದೆ ಎಂದು ಆಗಸ್ಟ್‌ನಲ್ಲಿ ಅಮೇರಿಕನ್ ಹೂಡಿಕೆ ಸಂಸ್ಥೆ ಹಿಂಡೆನ್‌ಬರ್ಗ್ ರಿಸರ್ಚ್ ಆರೋಪಿಸಿತ್ತು. ಅದಾಗ್ಯೂ, ಮಾಧಬಿ ಬುಚ್‌ ಮತ್ತು ಧವಲ್ ಬುಚ್ ಈ ಆರೋಪಗಳನ್ನು ನಿರಾಕರಿಸಿದರು.

ಅದಾನಿ ಗ್ರೂಪ್ ತೆರಿಗೆ ಲಾಭವಾಗುವ ದೇಶಗಳಲ್ಲಿ ಲೆಕ್ಕಪತ್ರ ವಂಚನೆ ನಡೆಸಿ ಮನಿ ಲಾಂಡರಿಂಗ್‌ನಲ್ಲಿ ತೊಡಗಿದೆ ಎಂದು ಹಿಂಡೆನ್‌ಬರ್ಗ್ ರಿಸರ್ಚ್ ಈ ಹಿಂದೆ ಕೂಡಾ ಆರೋಪಿಸಿತ್ತು. ಅದಾನಿ ನಿಧಿಯಲ್ಲಿ ಮಾಧಬಿ ಬುಚ್ ಪಾಲು ಹೊಂದಿರುವುದರಿಂದ ಈ ಹಗರಣದಲ್ಲಿ ತನಿಖೆ ನಡೆಯುತ್ತಿಲ್ಲ ಎಂದು ವರದಿ ಹೇಳಿತ್ತು

“ಈ ಸರ್ಕಾರವು ಭಾರತದ ಹೂಡಿಕೆದಾರರನ್ನು ದುರ್ಬಲಗೊಳಿಸಿದೆ. ಅವರ ಉಳಿತಾಯ ಮತ್ತು ಆಕಾಂಕ್ಷೆಗಳನ್ನು ರಕ್ಷಿಸಲು ಉದ್ದೇಶಿಸಿರುವ ಸಂಸ್ಥೆಯಾದ ಸೆಬಿ ಈಗ ರಾಜಿ ಮಾಡಿದೆ. ಹೂಡಿಕೆ ವಲಯದಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುವ ಕ್ರಮಗಳನ್ನು ಆಚರಣೆಗೆ ತರಲು ಸೆಬಿ ವಿಫಲವಾಗಿದೆ” ಎಂದು ಪವನ್ ಖೇರ ಶನಿವಾರ ಆರೋಪಿಸಿದ್ದಾರೆ. ದೊಡ್ಡವರನ್ನು ಉಳಿಸಲು

ಬುಚ್ ಅವರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವ ಆಪಾದಿತ ಗುಂಪನ್ನು ಪಕ್ಷವು ಶೀಘ್ರದಲ್ಲೇ ಬಹಿರಂಗಪಡಿಸಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈ ಗುಂಪು ಬುಚ್ ಅವರನ್ನು ಸಂಸದೀಯ ಸಮಿತಿಯ ಉತ್ತರಿಸುವುದರಿಂದ, ಅವರ ಸ್ಥಾನಕ್ಕೆ ರಾಜೀನಾಮೆ ನೀಡುವುದರಿಂದ ಮತ್ತು ಅದಾನಿ ಗ್ರೂಪ್‌ನೊಂದಿಗೆ ವ್ಯವಹರಿಸುವಾಗ ಅವರು ಮಾಡಿದ್ದಾರೆ ಎನ್ನಲಾದ ಅಕ್ರಮಗಳ ತನಿಖೆಯಿಂದ ಅವರನ್ನು ರಕ್ಷಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ‘ಅದಾನಿ ಹಗರಣ’ ನಿಧಿಯಲ್ಲಿ ಸೆಬಿ ಮುಖ್ಯಸ್ಥರು ಪಾಲು ಹೊಂದಿದ್ದಾರೆ” ಹಿಂಡೆನ್‌ಬರ್ಗ್ ಆರೋಪ

‘ಅದಾನಿ ಹಗರಣ’ ನಿಧಿಯಲ್ಲಿ ಸೆಬಿ ಮುಖ್ಯಸ್ಥರು ಪಾಲು ಹೊಂದಿದ್ದಾರೆ” ಹಿಂಡೆನ್‌ಬರ್ಗ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...