ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಹೊಸದಾಗಿ ಶೋಧ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಬೆಂಗಳೂರು ಮತ್ತು ಮೈಸೂರಿನಲ್ಲಿ ಸುಮಾರು ಏಳರಿಂದ ಎಂಟು ಸ್ಥಳಗಳಲ್ಲಿ ಪರಿಶೀಲನೆ ನಡೆಸಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ತನಿಖಾ ಸಂಸ್ಥೆ ಅಕ್ಟೋಬರ್ 18 ರಂದು ಮೈಸೂರಿನ ಮುಡಾ ಕಚೇರಿ ಮತ್ತು ಇತರ ಕೆಲವು ಸ್ಥಳಗಳಲ್ಲಿ ಶೋಧ ನಡೆಸಿದಾಗ ಈ ಪ್ರಕರಣದಲ್ಲಿ ಮೊದಲ ಸುತ್ತಿನ ದಾಳಿ ನಡೆಸಿತ್ತು. ಕಳೆದ ವಾರ ಬೆಂಗಳೂರಿನ ವಲಯ ಕಚೇರಿಯಲ್ಲಿ ಮುಡಾದ ಕೆಲವು ಕೆಳಹಂತದ ಅಧಿಕಾರಿಗಳನ್ನು ಸಹ ಅಧಿಕಾರಿಗಳು ವಿಚಾರಣೆ ನಡೆಸಿದ್ದರು.
ಲೋಕಾಯುಕ್ತ ಎಫ್‌ಐಆರ್‌ಗೆ ಒಳಪಟ್ಟಿರುವ ಸಿಎಂ ಮತ್ತು ಇತರರನ್ನು ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಮಾಹಿತಿ ವರದಿಯನ್ನು (ಇಸಿಐಆರ್) ಇಡಿ ಸಲ್ಲಿಸಿದೆ.
ಸಿದ್ದರಾಮಯ್ಯ ಅವರು ತಮ್ಮ ಪತ್ನಿಗೆ ಮುಡಾದಿಂದ 14 ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಲೋಕಾಯುಕ್ತ ಹಾಗೂ ಇಡಿ ತನಿಖೆ ಎದುರಿಸುತ್ತಿದ್ದಾರೆ. ಪಾರ್ವತಿ ಅವರನ್ನು ಇತ್ತೀಚೆಗೆ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದರು.
ಇದನ್ನೂ ಓದಿ; ಆಯ್ಕೆ ಪ್ರಶ್ನಿಸಿ ಅರ್ಜಿ : ಬಿಜೆಪಿ ಶಾಸಕ ಯತ್ನಾಳ್‌ಗೆ ಸುಪ್ರೀಂ ಕೋರ್ಟ್ ನೋಟಿಸ್


