Homeಕರ್ನಾಟಕ'ಖಾಸಗಿತನದ ಹಕ್ಕು' ಮಹತ್ವದ ತೀರ್ಪಿನ ಅರ್ಜಿದಾರ ನ್ಯಾ. ಕೆ ಎಸ್ ಪುಟ್ಟಸ್ವಾಮಿ ನಿಧನ

‘ಖಾಸಗಿತನದ ಹಕ್ಕು’ ಮಹತ್ವದ ತೀರ್ಪಿನ ಅರ್ಜಿದಾರ ನ್ಯಾ. ಕೆ ಎಸ್ ಪುಟ್ಟಸ್ವಾಮಿ ನಿಧನ

- Advertisement -
- Advertisement -

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ ಎಸ್ ಪುಟ್ಟಸ್ವಾಮಿ (98) ಅವರು ಸೋಮವಾರ (ಅ.28) ಬೆಂಗಳೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ನ್ಯಾಯಮೂರ್ತಿ ಪುಟ್ಟಸ್ವಾಮಿ ಅವರು ಆಧಾರ್ ಯೋಜನೆಯನ್ನು ಪ್ರಶ್ನಿಸಿದ ಮೊದಲ ವ್ಯಕ್ತಿ ಎಂದೇ ಪ್ರಸಿದ್ಧರು. ಆಧಾರ್‌ ಯೋಜನೆಯ ಸಿಂಧುತ್ವ ಪ್ರಶ್ನಿಸಿ 2012ರಲ್ಲಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನಾಗರಿಕರ ಖಾಸಗಿತನದ ಹಕ್ಕು ಸಂವಿಧಾನವೇ ರಕ್ಷಿಸಿರುವ ಮೂಲಭೂತ ಹಕ್ಕು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಆದರೆ, ಆಧಾರ್‌ ಯೋಜನೆಯನ್ನು ಅದು ಎತ್ತಿ ಹಿಡಿದಿತ್ತು.

ಖಾಸಗಿತನದ ಹಕ್ಕು ಮೂಲಭೂತ ಹಕ್ಕಲ್ಲ, ಸಂವಿಧಾನ ಖಾಸಗಿತನದ ಬಗ್ಗೆ ನಿರ್ದಿಷ್ಟವಾಗಿ ತಿಳಿಸಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ವಾದವನ್ನು ಬದಿಗೆ ಸರಿಸಿ 9 ನ್ಯಾಯಮೂರ್ತಿಗಳಿದ್ದ ಸುಪ್ರೀಂ ಕೋರ್ಟ್‌ ಸಾಂವಿಧಾನಿಕ ಪೀಠ ತೀರ್ಪು ನೀಡಿತ್ತು. ವೈಯಕ್ತಿಕ ನೆಲೆಯಲ್ಲಿ ಹೆಚ್ಚಿನ ಮಾಹಿತಿ ಅಗೆಯುವುದು ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತದೆ ಎಂದಿತ್ತು. ಸಂತಾನೋತ್ಪತ್ತಿ ಹಕ್ಕು, ದಯಾಮರಣ, ಬಹುತ್ವ ಹೀಗೆ ಹಲವು ಅಂಶಗಳಿಗೆ ಸಂಬಂಧಿಸಿದಂತೆ ಈ ತೀರ್ಪು ಮಹತ್ವದ್ದಾಗಿದೆ.

ವಕೀಲರಾಗಿ 1952ರಲ್ಲಿ ನೋಂದಾಯಿಸಿಕೊಂಡ ಪುಟ್ಟಸ್ವಾಮಿ ಅವರು, ನವೆಂಬರ್ 1977ರಲ್ಲಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ಹೈಕೋರ್ಟ್‌ನಲ್ಲಿ1986ರವರೆಗೆ ಸೇವೆ ಸಲ್ಲಿಸಿದ್ದ ಅವರು, ನಿವೃತ್ತಿ ಬಳಿಕ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿಯ (ಸಿಎಟಿ) ಬೆಂಗಳೂರು ಪೀಠದ ಉಪಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.

ಸೌಜನ್ಯ : ಬಾರ್ & ಬೆಂಚ್

ಇದನ್ನೂ ಓದಿ : ಮುಡಾ ಪ್ರಕರಣ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಆರಂಭಿಸಿದ ಇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...