Homeಕರ್ನಾಟಕಸಿನಿಮಾ ಶೂಟಿಂಗ್‌ಗಾಗಿ ಹೆಚ್‌ಎಂಟಿ ಭೂಮಿಯಲ್ಲಿ ಅರಣ್ಯ ನಾಶ : ಕ್ರಮಕ್ಕೆ ಸೂಚಿಸಿದ ಸಚಿವ ಈಶ್ವರ್ ಖಂಡ್ರೆ

ಸಿನಿಮಾ ಶೂಟಿಂಗ್‌ಗಾಗಿ ಹೆಚ್‌ಎಂಟಿ ಭೂಮಿಯಲ್ಲಿ ಅರಣ್ಯ ನಾಶ : ಕ್ರಮಕ್ಕೆ ಸೂಚಿಸಿದ ಸಚಿವ ಈಶ್ವರ್ ಖಂಡ್ರೆ

- Advertisement -
- Advertisement -

ಹೆಚ್‌ಎಂಟಿ ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ.

ಈ ಕುರಿತು ಮಂಗಳವಾರ (ಅ.29) ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಅವರು “ಹೆಚ್ಎಂಟಿ ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ” ಎಂದಿದ್ದಾರೆ.

“ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ” ಎಂದು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, “ಹೆಚ್​ಎಂಟಿ ತನ್ನ ವಶದಲ್ಲಿದ್ದ ಜಮೀನಿನ ಮರ, ಗಿಡಗಳನ್ನು ಕಡಿದು ಸಿನಿಮಾ ಚಿತ್ರೀಕರಣಕ್ಕೆ ಬಾಡಿಗೆಗೆ ಕೊಟ್ಟಿದೆ. ಈ ಮೂಲಕ ದುಡ್ಡು ಮಾಡುತ್ತಿದ್ದಾರೆ. ಎಲ್ಲಾ ರೀತಿಯ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಈ ರೀತಿ ಮಾಡಲು ಅವರಿಗೆ ಯಾವುದೇ ಅಧಿಕಾರ ಇಲ್ಲ” ಎಂದಿದ್ದಾರೆ.

“ಟಾಕ್ಸಿಕ್’ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ನಾನು ಖುದ್ದಾಗಿ ಹೋಗಿ ನೋಡಿದ್ದೇನೆ. ಅಲ್ಲಿನ ಸಂಪೂರ್ಣ ಚಿತ್ರಣ ಬದಲಾಗಿದೆ, ವಿಲೇಜ್ ರೀತಿಯ ಸೆಟ್ ಹಾಕಿದ್ದಾರೆ. ಇದು ಬಿಬಿಎಂಪಿ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ, ಕಾನೂನು ಕ್ರಮಕ್ಕೆ ಪಾಲಿಕೆಗೂ ಪತ್ರ ಬರೆದಿದ್ದೇನೆ. ಅವರು (ಬಿಬಿಎಂಪಿ) ಕಮಿಟಿ ಮಾಡಿದ್ದಾರೆ, ನೋಟಿಸ್ ಕೊಟ್ಟಿದ್ದಾರೆ. ಚಿತ್ರ ತಂಡದ್ದೇ ತಪ್ಪು ಅಂತ ನಾನು ಹೇಳುತ್ತಿಲ್ಲ. ಯಾರದ್ದು ತಪ್ಪು ಇದೆಯೋ ನೋಡಬೇಕು. ಸಿನಿಮಾ ತಂಡ ಅನುಮತಿ ಪಡೆದಿದೆಯಾ? ಅಂತ ತನಿಖೆ ಮಾಡಿ ನೋಡುತ್ತೇವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣ ನಿರ್ವಹಿಸಲು ಪ್ರತ್ಯೇಕ ಪೊಲೀಸ್ ಠಾಣೆ ಸ್ಥಾಪನೆ : ಸಚಿವ ಹೆಚ್‌.ಸಿ ಮಹದೇವಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...