ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಇಂದು (ಅ.30) ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ.
ನಿನ್ನೆ (ಅ.29) ರಾತ್ರಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಿದ್ದ ಅಜ್ಜಂಪೀರ್ ಖಾದ್ರಿ, ಸಚಿವ ಝಮೀರ್ ಅಹ್ಮದ್ ಹಾಗೂ ಶಿವಾನಂದ ಪಾಟೀಲ್ ಜೊತೆ ಇಂದು ಬೆಳಿಗ್ಗೆ ಚುನಾವಣಾಧಿಕಾರಿ ಕಚೇರಿಗೆ ತೆರಳಿ, ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿಯೇ ನಾಮಪತ್ರ ವಾಪಸ್ ಪಡೆದಿದ್ದಾರೆ.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು “ಪಕ್ಷದ ಮುಂದೆ ನಾನು ಯಾವುದೇ ಬೇಡಿಕೆ ಇಟ್ಟಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಯೋಜನೆಗಳು ಜನಪರವಾಗಿವೆ. ನಾನು ಸಿದ್ದರಾಮಯ್ಯ ಅವರ ಶಿಷ್ಯ. ಅವರ ಮಾರ್ಗದರ್ಶನದಲ್ಲಿ ಮುಂದುವರಿಯುವೆ” ಎಂದಿದ್ದಾರೆ.
In the presence of mine, Janab Syed Azeem Peer Qadiri withdrew his nomination papers, who contested as the rebel candidate for the Shiggaon Assembly Constituency By-election
Cabinet Minister Shri.Shivanand Patil & CM Political Secretary Janab Naseer Ahmed were also present pic.twitter.com/2yfAvGX0O6
— B Z Zameer Ahmed Khan (@BZZameerAhmedK) October 30, 2024
ಉಪಚುನಾವಣೆಗೆ ಶಿಗ್ಗಾವಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅನ್ನು ಯಾಸೀರ್ ಖಾನ್ ಪಠಾಣ್ ಅವರಿಗೆ ನೀಡಲಾಗಿದೆ. ಇದರಿಂದ ತೀವ್ರ ಅಸಮಾಧಾನಗೊಂಡಿದ್ದ ಖಾದ್ರಿ, ಸಚಿವ ಝಮೀರ್ ಅಹ್ಮದ್ ಸೇರಿದಂತೆ ಕಾಂಗ್ರೆಸ್ ನಾಯಕರ ಮನವೊಲಿಕೆಗೆ ಬಗ್ಗದೆ ಅಕ್ಟೋಬರ್ 25ರಂದು ಕೊನೆಯ ಕ್ಷಣದಲ್ಲಿ ನಾಮಪತ್ರ ಸಲ್ಲಿಸಿದ್ದರು.
ಆದರೆ, ಅಕ್ಟೋಬರ್ 26ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ಖಾದ್ರಿ ನಾಮಪತ್ರ ವಾಪಸ್ ಪಡೆಯುವ ಭರವಸೆ ನೀಡಿದ್ದರು. ಅದರಂತೆ ಇಂದು ವಾಪಸ್ ಪಡೆದಿದ್ದಾರೆ.
ಇದನ್ನೂ ಓದಿ : ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್‌ಗೆ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು


