Homeಮುಖಪುಟಹಿಂದುಳಿದ ವರ್ಗಗಳ ಮೀಸಲಾತಿಗಾಗಿ 'ಸ್ವತಂತ್ರ ಆಯೋಗ' ರಚಿಸುವಂತೆ ತೆಲಂಗಾಣ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

ಹಿಂದುಳಿದ ವರ್ಗಗಳ ಮೀಸಲಾತಿಗಾಗಿ ‘ಸ್ವತಂತ್ರ ಆಯೋಗ’ ರಚಿಸುವಂತೆ ತೆಲಂಗಾಣ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

- Advertisement -
- Advertisement -

ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ನಿರ್ಧರಿಸಲು ‘ಸ್ವತಂತ್ರ ಆಯೋಗ’ವನ್ನು ರಚಿಸುವಂತೆ ರಾಜ್ಯ ಸರ್ಕಾರಕ್ಕೆ ತೆಲಂಗಾಣ ಹೈಕೋರ್ಟ್ ಬುಧವಾರ ನಿರ್ದೇಶನ ನೀಡಿದೆ. ರಾಜ್ಯ ಸರ್ಕಾರವು ಸರ್ಕಾರಿ ಮತ್ತು ಖಾಸಗಿ ವಲಯದಾದ್ಯಂತ ಸಾಮಾಜಿಕ ಆರ್ಥಿಕ ಮತ್ತು ರಾಜಕೀಯ ಪ್ರಾತಿನಿಧ್ಯವನ್ನು ನಿರ್ಣಯಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗಕ್ಕೆ ಇತ್ತೀಚೆಗೆ ನಿರ್ದೇಶನ ನೀಡಿತ್ತು. ಈ ಆಯೋಗವು ಮಂಗಳವಾರ ರಾಜ್ಯಾದ್ಯಂತ ಸಾರ್ವಜನಿಕ ವಿಚಾರಣೆಯನ್ನು ಪ್ರಾರಂಭಿಸಿತ್ತು. ಹಿಂದುಳಿದ ವರ್ಗಗಳ ಮೀಸಲಾತಿಗಾಗಿ

ರಾಜ್ಯ ಸರ್ಕಾರವು ಸೆಪ್ಟೆಂಬರ್ 2024 ರಲ್ಲಿ ಆಯೋಗವನ್ನು ರಚಿಸಿ, ಹಿರಿಯ ಕಾಂಗ್ರೆಸ್ ನಾಯಕ ಜಿ ನಿರಂಜನ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿತ್ತು. ಹಿಂದುಳಿದ ವರ್ಗ ಸಮುದಾಯಗಳ ಜನಸಂಖ್ಯೆಯ ಶೇಕಡಾವಾರು ಲೆಕ್ಕಾಚಾರ ಮಾಡಿ ನಂತರ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳ ಸಮುದಾಯಗಳಿಗೆ ಮೀಸಲಾತಿಯನ್ನು ನಿರ್ಧರಿಸುವಂತೆ ರಾಜ್ಯ ಸರ್ಕಾರ ಆಯೋಗಕ್ಕೆ ಆದೇಶ ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಜ್ಯ ಸರ್ಕಾರದ ಈ ಆದೇಶದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗವು ಒಂದು ತಿಂಗಳ ಕಾಲ ಸಾಮಾಜಿಕ ಆರ್ಥಿಕ ಮತ್ತು ರಾಜಕೀಯ ಪ್ರಾತಿನಿಧ್ಯವನ್ನು ಮೌಲ್ಯಮಾಪನ ಮಾಡಿ, ಅದರ ವರದಿಯನ್ನು ಸಲ್ಲಿಸಬೇಕಾಗಿತ್ತು.

ಹಿಂದುಳಿದ ವರ್ಗಗಳ ಮುಖಂಡ ಹಾಗೂ ಮಾಜಿ ಸಂಸದ ಆರ್.ಕೃಷ್ಣಯ್ಯ ಅವರು ಸರ್ಕಾರದ ಈ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಈ ಕಾರ್ಯವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗಕ್ಕೆ ವಹಿಸಿರುವುದು ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ ಎಂದು ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಹಿಂದುಳಿದ ವರ್ಗಗಳ ಮೀಸಲಾತಿಗಾಗಿ

ಮಹಾರಾಷ್ಟ್ರದಲ್ಲಿ ಇದೇ ರೀತಿಯ ಆದೇಶವನ್ನು ಬಾಂಬೆ ಹೈಕೋರ್ಟ್ ರದ್ದುಗೊಳಿಸಿದೆ ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ. ಆಯೋಗವು ತನ್ನ ವರದಿಯನ್ನು ಸಲ್ಲಿಸಿದ ನಂತರ ತೆಲಂಗಾಣದಲ್ಲಿ ಇದೇ ರೀತಿಯ ಪರಿಸ್ಥಿತಿ ಉದ್ಭವಿಸಿದರೆ, ಸಮಯ ವ್ಯರ್ಥವಾಗುತ್ತದೆ ಎಂದು ಕೃಷ್ಣಯ್ಯ ಪರ ವಕೀಲರು ಹೈಕೋರ್ಟ್‌ನಲ್ಲಿ ಹೇಳಿದ್ದಾರೆ. ಹೀಗಾಗಿ ವಿಶೇಷ ಆಯೋಗ ರಚನೆ ಮಾಡುವಂತೆ ಸರ್ಕಾರಕ್ಕೆ ಆದೇಶ ನೀಡುವಂತೆ ಕೋರಿದ್ದಾರೆ.

ಪಂಚಾಯತ್ ರಾಜ್ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42 ಮೀಸಲಾತಿ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಈ ಹಿಂದೆ ಭರವಸೆ ನೀಡಿತ್ತು. ಕೃಷ್ಣಯ್ಯ ಅವರು ಇತ್ತೀಚೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಚುನಾವಣಾ ಭರವಸೆಯನ್ನು ಜಾರಿಗೊಳಿಸುವಂತೆ ಪತ್ರ ಬರೆದಿದ್ದರು.

ಪತ್ರದಲ್ಲಿ ಅವರು ಕಾನೂನಾತ್ಮಕ ಸಮಸ್ಯೆಗಳು ಅಥವಾ 50% ಮೀಸಲಾತಿಯ ಮೇಲಿನ ಸುಪ್ರೀಂ ಕೋರ್ಟ್ ಮಿತಿಯನ್ನು ಉಲ್ಲೇಖಿಸಿ ಸರ್ಕಾರವು ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೆಚ್ಚಳದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷದ ಭರವಸೆಯಾಗಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಶೇ.42ರಷ್ಟು ಮೀಸಲಾತಿಯನ್ನು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿ ಜಾರಿಗೊಳಿಸಬಹುದು ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಬಾಬರಿ ಮಸೀದಿ ಒಡೆದು ಕಟ್ಟಿರುವ ರಾಮ ಮಂದಿರದ ಮೂರ್ತಿಯ ಶಿಲ್ಪಿಗೂ ರಾಜ್ಯೋತ್ಸವ ಪ್ರಶಸ್ತಿ!

ಬಾಬರಿ ಮಸೀದಿ ಒಡೆದು ಕಟ್ಟಿರುವ ರಾಮ ಮಂದಿರದ ಮೂರ್ತಿಯ ಶಿಲ್ಪಿಗೂ ರಾಜ್ಯೋತ್ಸವ ಪ್ರಶಸ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...