ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಲು ಒತ್ತಾಯಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಯತ್ನಾಳ್, “ವಕ್ಫ್ ಮಂಡಳಿಯು ದೇಶದಾದ್ಯಂತ ರೈತರು, ಭೂಮಾಲೀಕರು, ದೇವಸ್ಥಾನಗಳು, ಟ್ರಸ್ಟ್‌ಗಳು ಮತ್ತು ಮಠಗಳ ಜಮೀನುಗಳ ಮೇಲೆ ಹಕ್ಕು ಸಾಧಿಸುವ ಅನಿಯಂತ್ರಿತ, ಸ್ಪಷ್ಟ ಉಲ್ಲಂಘನೆಯನ್ನು ಗಮನದಲ್ಲಿಟ್ಟುಕೊಂಡು ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ದೇಶದ ಎಲ್ಲಾ ಪ್ರಜೆಗಳಿಗೂ ಭೂಮಿಯ ಮೇಲೆ ಸಮಾನ ಹಕ್ಕಿದೆ. ವಕ್ಫ್‌ನ ಉದ್ದೇಶವು ಕಲ್ಯಾಣ ಮತ್ತು ಸಮಾಜ ಸೇವೆಯಾಗಿದ್ದರೆ, ಭಾರತವು ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಪಕ್ಷಪಾತ ಮತ್ತು ಧಾರ್ಮಿಕ ತಾರತಮ್ಯವಿಲ್ಲದೆ ಇದನ್ನು ಮಾಡಬೇಕಾಗಿದೆ. ದೇಶದ ಸಂಪನ್ಮೂಲ ಯಾವುದೇ ಸೀಮಿತ ಕೋಮಿಗೆ ಸೇರುವುದು ಜಾತ್ಯತೀತ ತತ್ವದ ವಿರುದ್ಧವಾಗಿರುತ್ತದೆ. ಆದ್ದರಿಂದ, ಅದನ್ನು ಸದ್ಬಳಕೆ ಮಾಡುವ ಸದುದ್ದೇಶದಿಂದ ಪ್ರಧಾನಿ ಅವರಿಗೆ ಮನವಿ ಸಲ್ಲಿಸಿದ್ದೇನೆ” ಎಂದು ಬರೆದುಕೊಂಡಿದ್ದಾರೆ.
I have written a letter to the hon'ble PM Shri Narendra Modi ji to Nationalize the Waqf Assets in view of the arbitrary, blatant violation in claiming of the lands of Farmers, Landowners, Temples, Trusts and Mutts across the country by the Waqf board. All the citizens of the… pic.twitter.com/Ih8wN8Fqdp
— Basanagouda R Patil (Yatnal) (@BasanagoudaBJP) November 1, 2024
ಈ ಹಿಂದೆ ಸಂಸದ ತೇಜಸ್ವಿ ಸೂರ್ಯ ಕೂಡ ವಿಜಯಪುರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ರೈತರ ಜಮೀನನ್ನು ವಕ್ಫ್ ಆಸ್ತಿಗೆ ಸೇರಿಸಲು ಬಂದಿರುವ ನೋಟಿಸ್‌ಗಳ ಕುರಿತು ವಕ್ಫ್ ತಿದ್ದುಪಡಿ ವಿಧೇಯಕದ ಜಂಟಿ ಸದನ ಸಮಿತಿ ಮುಖ್ಯಸ್ಥ ಜಗದಾಂಬಿಕಾ ಪಾಲ್ ಅವರಿಗೆ ಪತ್ರ ಬರೆದಿದ್ದರು.
ಇದನ್ನೂ ಓದಿ : ಹಾವೇರಿ | ಕಡಕೋಳ ಗಲಭೆ ಪ್ರಕರಣ : 32 ಮಂದಿಯ ಬಂಧನ


