ದೇಶಾದ್ಯಂತದ ವಿಮಾನ ನಿಲ್ದಾಣಗಳು ಮತ್ತು ರೈಲು ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಕರೆಗಳನ್ನು ಸರಣಿಯಾಗಿ ಮಾಡಿತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು 35 ವರ್ಷದ ಜಗದೀಶ್ ಶ್ರೀಯಾಮ್ ಉಯ್ಕೆ ಎಂದು ಗುರುತಿಸಲಾಗಿದೆ. ಆರೋಪಿಯನ್ನು ನಾಗ್ಪುರ ಪೊಲೀಸರ ಮುಂದೆ ಹಾಜರುಪಡಿಸಿದ ನಂತರ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ವಿಮಾನ ನಿಲ್ದಾಣಗಳಿಗೆ
ಪೂರ್ವ ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ಅರ್ಜುನಿ ಮೋರ್ಗಾಂವ್‌ನ ನಿವಾಸಿಯಾಗಿರುವ ಆರೋಪಿ ಜಗದೀಶ್ ನಾಗ್ಪುರ ಪೊಲೀಸರು ತನಿಖೆಗೆ ಹಾಜರಾಗುವಂತೆ ನೋಟಿಸ್ ಕಳುಹಿಸಿದ ನಂತರ ವಿಮಾನದ ಮೂಲಕ ನಗರಕ್ಕೆ ಆಗಮಿಸಿ ಗುರುವಾರ ಸಂಜೆ ಶರಣಾದರು ಎಂದು ಅಧಿಕಾರಿಗಳು ಹೇಳಿದ್ದಾರೆ. ವಿಮಾನ ನಿಲ್ದಾಣಗಳಿಗೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಅಕ್ಟೋಬರ್ 26 ರವರೆಗಿನ 13 ದಿನಗಳಲ್ಲಿ, ಭಾರತೀಯ ವಿಮಾನ ಸಂಸ್ಥೆಗಳ 300ಕ್ಕೂ ಹೆಚ್ಚು ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆಗಳನ್ನು ಮಾಡಲಾಗಿತ್ತು. ಹೆಚ್ಚಿನ ಬೆದರಿಕೆಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ನೀಡಲಾಗಿದ್ದು, ಅಕ್ಟೋಬರ್ 22 ರಂದು ಇಂಡಿಗೋ ಮತ್ತು ಏರ್ ಇಂಡಿಯಾದಿಂದ ತಲಾ 13 ವಿಮಾನಳು ಸೇರಿದಂತೆ ಸುಮಾರು 50 ವಿಮಾನಗಳಿಗೆ ಬೆದರಿಕೆಗಳು ಬಂದಿವೆ.
ಆರೋಪಿ ಅಕ್ಟೋಬರ್ 21 ರಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರೈಲ್ವೆ ಪೊಲೀಸ್ ಅಧಿಕಾರಿಗಳಿಗೆ ಕಳುಹಿಸಿದ್ದಾರೆ ಎನ್ನಲಾದ ಇಮೇಲ್ ನಂತರ ರೈಲ್ವೇ ನಿಲ್ದಾಣಗಳಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ ಎಂದು ವರದಿಯಾಗಿದೆ.
ಆರೋಪಿಯು 2021 ರಲ್ಲಿ ಕೂಡಾ ಹುಸಿ ಬಾಂಬ್ ಬೆದರಿಕೆ ಬಗ್ಗೆ ಫೋನ್ ಕರೆ ಮಾಡಿದ್ದನು. ಅದರ ನಂತರ ಆತನನ್ನು ಬಂಧಿಸಲಾಗಿತ್ತು. ಬಿಡುಗಡೆಯಾದ ನಂತರ ತಾನಿದ್ದ ಅರ್ಜುನಿ ಮೋರ್ಗಾಂವ್‌ನಿಂದ ದೆಹಲಿಗೆ ನಿವಾಸ ಬದಲಾಯಿಸಿದ್ದ ಎಂದು ಅಧಿಕಾರಿ ತಿಳಿಸಿದ್ದಾರೆ.
ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ ಶ್ವೇತಾ ಖೇಡ್ಕರ್ ನೇತೃತ್ವದ ತನಿಖಾಧಿಕಾರಿಗಳು, ಆರೋಪಿ ವಿವಿಧ ಸಂಸ್ಥೆಗಳಿಗೆ ಕಳುಹಿಸಿದ್ದ ಇಮೇಲ್‌ಗಳನ್ನು ಆಧರಿಸಿ ಆತನನ್ನು ಬಂಧಿಸಿದ್ದಾರೆ. XI ವರೆಗೆ ಶಾಲೆಗೆ ಹೋಗಿದ್ದ ಆರೋಪಿಯು ಭಯೋತ್ಪಾದನೆಯ ಕುರಿತು ‘ಆತಂಕ್ವಾದ್ – ಏಕ್ ತುಫಾನಿ ರಾಕ್ಷಸ್’ ಎಂಬ ಪುಸ್ತಕವನ್ನು ಬರೆದಿದ್ದಾನೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ: ದೀಪಾವಳಿ | ‘ಸುರಕ್ಷಿತ’ ಮಿತಿಗಿಂತ 14 ಪಟ್ಟು ಹೆಚ್ಚಾದ ದೆಹಲಿಯ ವಾಯುಮಾಲಿನ್ಯ
ದೀಪಾವಳಿ | ‘ಸುರಕ್ಷಿತ’ ಮಿತಿಗಿಂತ 14 ಪಟ್ಟು ಹೆಚ್ಚಾದ ದೆಹಲಿಯ ವಾಯುಮಾಲಿನ್ಯ


