Homeಕರ್ನಾಟಕಅತ್ಯಾಚಾರ ಸಂತ್ರಸ್ತೆಯ ಉಡುಪಿನಲ್ಲಿ ಪ್ರಜ್ವಲ್ ರೇವಣ್ಣನ ಡಿಎನ್‌ಎ ಪತ್ತೆ: ಎಸ್‌ಐಟಿ

ಅತ್ಯಾಚಾರ ಸಂತ್ರಸ್ತೆಯ ಉಡುಪಿನಲ್ಲಿ ಪ್ರಜ್ವಲ್ ರೇವಣ್ಣನ ಡಿಎನ್‌ಎ ಪತ್ತೆ: ಎಸ್‌ಐಟಿ

- Advertisement -
- Advertisement -

ಹಾಸನ ಲೈಂಗಿಕ ಪ್ರಕರಣದಲ್ಲಿ ಅತ್ಯಾಚಾರ ಸಂತ್ರಸ್ತರೊಬ್ಬರ ಒಳ ಉಡುಪುಗಳ ಬಗ್ಗೆ ನಡೆಸಿದ್ದ ವಿಶ್ಲೇಷಣೆಯಲ್ಲಿ ಪ್ರಕರಣದ ಆರೋಪಿ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಡಿಎನ್‌ಎ ಪತ್ತೆಯಾಗಿದೆ ಎಂದು ವರದಿಯಾಗಿದೆ. ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಈ ವರ್ಷದ ಆರಂಭದಲ್ಲಿ ಸೆಪ್ಟೆಂಬರ್ 9 ರಂದು ಪ್ರಕರಣದ ಆರೋಪಪಟ್ಟಿ ಸಲ್ಲಿಸಿತ್ತು. ಅತ್ಯಾಚಾರ ಸಂತ್ರಸ್ತೆಯ

ಪ್ರಜ್ವಲ್ ರೇವಣ್ಣನ ಕುಟುಂಬದ ಫಾರ್ಮ್‌ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ 48 ವರ್ಷದ ಸಂತ್ರಸ್ತ ಮಹಿಳೆಯ ವಿರೋಧದ ನಡುವೆಯು ಆರೋಪಿ ಅವರನ್ನು ಅತ್ಯಾಚಾರ ಮಾಡುವ ವಿಡಿಯೊವನ್ನು ಎಸ್‌ಐಟಿ ಆರೋಪಪಟ್ಟಿಯಲ್ಲಿ ಸಲ್ಲಿಸಿದೆ. ಅದಾಗ್ಯೂ, ಈ ವಿಡಿಯೊದಲ್ಲಿ ಆರೋಪಿಯ ಮುಖ ಕಾಣಿಸುತ್ತಿಲ್ಲವಾದ್ದರಿಂದ ವಿಡಿಯೋದಲ್ಲಿರುವ ವ್ಯಕ್ತಿ ಪ್ರಜ್ವಲ್ ರೇವಣ್ಣನೇ ಆಗಿದ್ದಾನೆ ಎಂಬ ಫೊರೆನ್ಸಿಕ್ ವರದಿಯನ್ನು ಆರೋಪಪಟ್ಟಿ ಒಳಗೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿಎನ್‌ಎ ವಿಶ್ಲೇಷಣೆಯ ವರದಿಗಾಗಿ ಕಾಯಲಾಗುತ್ತಿದೆ ಮತ್ತು ವರದಿ ಬಂದ ನಂತರ ಎಸ್‌ಐಟಿ ಪೂರಕ ಆರೋಪಪಟ್ಟಿ ಸಲ್ಲಿಸಲಿದೆ ಎಂದು ಆರೋಪಪಟ್ಟಿಯಲ್ಲಿ ಹೇಳಲಾಗಿತ್ತು. ಡಿಎನ್‌ಎ ವಿಶ್ಲೇಷಣೆ ವರದಿಯನ್ನು ಇತ್ತೀಚೆಗೆ ಎಸ್‌ಐಟಿಗೆ ಸಲ್ಲಿಸಲಾಗಿದ್ದು, ವೀಡಿಯೊದಲ್ಲಿ ಸಂತ್ರಸ್ತೆ ಧರಿಸಿರುವ ಪೆಟಿಕೋಟ್‌ನಲ್ಲಿ ಪ್ರಜ್ವಲ್ ರೇವಣ್ಣ ಮತ್ತು ಸಂತ್ರಸ್ತೆಯ ಡಿಎನ್‌ಎ ಪತ್ತೆಯಾಗಿದೆ ಎಂದು ವರದಿ ಸೂಚಿಸುತ್ತದೆ.

“ಅತ್ಯಾಚಾರದಿಂದ ಆಘಾತಕ್ಕೊಳಗಾದ ಮಹಿಳೆ, ತನ್ನ ಕೆಲವು ಸೀರೆಗಳು ಮತ್ತು ಪೆಟಿಕೋಟ್‌ನಂತಹ ಒಳ ಉಡುಪುಗಳನ್ನು ಅವರು ವಾಸಿಸುತ್ತಿದ್ದ ಔಟ್‌ಹೌಸ್‌ನ ವಾರ್ಡ್‌ರೋಬ್‌ನಲ್ಲಿ ಇಟ್ಟುಕೊಂಡಿದ್ದರು. ನಂತರ ಸ್ಥಳದಿಂದ ಓಡಿಹೋಗಿದ್ದರು. ಈ ಬಟ್ಟೆಗಳನ್ನು ಒಗೆದಿರಲಿಲ್ಲ” ಎಂದು ಎಸ್‌ಐಟಿಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

“ನಾವು ಈ ಬಟ್ಟೆಗಳನ್ನು ಔಟ್‌ಹೌಸ್‌ನಲ್ಲಿ ಕಂಡುಕೊಂಡಿದ್ದೇವೆ. ಅತ್ಯಾಚಾರದ ವಿಡಿಯೊದಲ್ಲಿ ಮಹಿಳೆ ಧರಿಸಿರುವ ಪೆಟಿಕೋಟ್‌ಗೆ ಹೊಂದಿಕೆಯಾಗುವ ಒಂದು ಪೆಟಿಕೋಟ್ ಇದರಲ್ಲಿ ಇದ್ದು, ಅದರನ್ನು ಡಿಎನ್‌ಎ ವಿಶ್ಲೇಷಣೆಗಾಗಿ ನಾವು ಬಟ್ಟೆಗಳನ್ನು ಕಳುಹಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಮಹಿಳೆಯ ಒಳ ಉಡುಪುಗಳ ಮೇಲೆ ಪ್ರಜ್ವಲ್ ರೇವಣ್ಣ ಡಿಎನ್‌ಎ ಪತ್ತೆಯಾಗಿರುವುದು ಲೈಂಗಿಕ ದೌರ್ಜನ್ಯಕ್ಕೆ ಮತ್ತಷ್ಟು ಫೋರೆನ್ಸಿಕ್ ಸಾಕ್ಷಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜ್ವಲ್ ರೇವಣ್ಣ ಅವರ ಪೋಷಕರಾದ ಮಾಜಿ ಸಚಿವರಾದ ಹೆಚ್.ಡಿ.ರೇವಣ್ಣ ಮತ್ತು ಭವಾನಿ ರೇವಣ್ಣ ಅವರ ಮಗನ ವಿರುದ್ಧ ಸಾಕ್ಷಿ ಹೇಳದಂತೆ ತಡೆಯಲು ಈ ಸಂತ್ರಸ್ತೆಯನ್ನು ಅಪಹರಿಸಲಾಗಿದೆ ಎಂದು ಕೂಡಾ ಆರೋಪಿಸಲಾಗಿದೆ. ಅತ್ಯಾಚಾರ ಸಂತ್ರಸ್ತೆಯ

ದೂರಿನ ನಂತರ ಮಹಿಳೆಯನ್ನು ಎಸ್‌ಐಟಿ ರಕ್ಷಿಸಿತ್ತು ಎಂದು ವರದಿಯಾಗಿದೆ. ಈ ಅಪಹರಣ ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣ ಹಾಗೂ ಭವಾನಿ ರೇವಣ್ಣ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದ್ದು, ಅವರು ಜಾಮೀನಿನ ಮೇಲೆ ಹೊರಗಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸೇರಿದ ಎಂಟು ಮಂದಿ ಕಾಂಗ್ರೆಸ್ ಶಾಸಕರ ಅನರ್ಹತೆ ಅರ್ಜಿ ತಿರಸ್ಕರಿಸಿದ ಸ್ಪೀಕರ್

ಬಿಜೆಪಿ ಸೇರಿದ ಎಂಟು ಮಂದಿ ಕಾಂಗ್ರೆಸ್ ಶಾಸಕರ ಅನರ್ಹತೆ ಅರ್ಜಿ ತಿರಸ್ಕರಿಸಿದ ಸ್ಪೀಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...