Homeಕರ್ನಾಟಕವಕ್ಫ್‌ ಭೂಮಿ ವಿವಾದ | ರೈತರಿಗೆ ನೀಡಿದ ನೋಟಿಸ್‌ ತಕ್ಷಣವೆ ವಾಪಸ್‌ - ಸಿಎಂ ಸಿದ್ದರಾಮಯ್ಯ

ವಕ್ಫ್‌ ಭೂಮಿ ವಿವಾದ | ರೈತರಿಗೆ ನೀಡಿದ ನೋಟಿಸ್‌ ತಕ್ಷಣವೆ ವಾಪಸ್‌ – ಸಿಎಂ ಸಿದ್ದರಾಮಯ್ಯ

- Advertisement -
- Advertisement -

ವಕ್ಫ್‌ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದು, ನೋಟೀಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಅವರು ಹೇಳಿದ್ದಾರೆ. ಮುಂದಕ್ಕೆ ರೈತರಿಗೆ ಯಾವುದೇ ರೀತಿಯ ಸಣ್ಣ ತೊಂದರೆಯನ್ನೂ ನೀಡಬಾರದು ಎಂದು ಅವರು ತಿಳಿಸಿದ್ದಾರೆ. ವಕ್ಫ್‌ ವಿವಾದ

“ವಕ್ಫ್‌ ಜಮೀನು ವಿಚಾರದಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆಗಳಿಂದ ರೈತರಿಗೂ ಬೇಸರವಾಗಿದೆ. ಈ ವಿಚಾರವನ್ನು ಜೆಡಿಎಸ್‌ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ಈ ಮೂಲಕ ರಾಜ್ಯದಲ್ಲಿ ಶಾಂತಿ ಕದಡುವ ದುಷ್ಟ ಪ್ರಯತ್ನವನ್ನು ಆ ಪಕ್ಷಗಳು ಜಂಟಿಯಾಗಿ ಮಾಡುತ್ತಿವೆ” ಎಂದು ಅವರು ತಿಳಿಸಿದ್ದಾರೆ. ವಕ್ಫ್‌ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇಂತಹ ಹೀನ ಪ್ರಯತ್ನಗಳಿಗೆ ರಾಜ್ಯದ ಜನರು ಸೊಪ್ಪು ಹಾಕದಂತೆ ಸಾರ್ವಜನಿಕರಲ್ಲೂ ವಿನಂತಿಸುತ್ತೇನೆ. ಜೊತೆಗೆ ಜನರು ಅಪಪ್ರಚಾರಗಳಿಗೆ ಕಿವಿಗೊಡಬಾರದು.
ಅಧಿಕಾರಿಗಳೂ ಈ ಕುರಿತು ಎಚ್ಚರ ವಹಿಸಬೇಕು. ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು.” ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಈ ಬಗ್ಗೆ ನಡೆದ ಸಭೆಯ ಪ್ರಮುಖ ಅಂಶಗಳ ಮಾಹಿತಿಯನ್ನು ಅವರು ನೀಡಿದ್ದಾರೆ.

* ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಬೇಕು.

* ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು.‌

* ಕಾನೂನು ಬಾಹಿರವಾಗಿ ಹಾಗೂ ನೋಟೀಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು.

“ಸರ್ಕಾರದ ಸಚಿವರು ಮತ್ತು ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ನಾನು ನೀಡಿದ ಸೂಚನೆಗಳಿವು” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗದ ಹೇಳಿಕೆಗೆ ಅಸಮಾಧಾನ : ಕಾನೂನು ಕ್ರಮದ ಎಚ್ಚರಿಕೆ ನೀಡಿದ ಕಾಂಗ್ರೆಸ್

ಚುನಾವಣಾ ಆಯೋಗದ ಹೇಳಿಕೆಗೆ ಅಸಮಾಧಾನ : ಕಾನೂನು ಕ್ರಮದ ಎಚ್ಚರಿಕೆ ನೀಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...